ದೇಶದಲ್ಲಿ ಗೊಂದಲ ಸೃಷ್ಟಿಸಲು ಕಾಂಗ್ರೆಸ್‌ ಯತ್ನ: ಜಗದೀಶ ಶೆಟ್ಟರ್

KannadaprabhaNewsNetwork |  
Published : Nov 04, 2026, 01:15 AM IST
ಸುದ್ದಿಗೋಷ್ಠಿಯಲ್ಲಿ ಜಗದೀಶ ಶೆಟ್ಟರ ಮಾತನಾಡಿದರು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅವರ ತಂಡ ಎಸ್‌ಐಆರ್ ಮುಂದಿಟ್ಟುಕೊಂಡು ದೇಶದಲ್ಲಿ ಗೊಂದಲ ಸೃಷ್ಟಿಸಲು ಹವಣಿಸುತ್ತಿದೆ.

ರಾಹುಲ್ ಗಾಂಧಿ ಅಪ್ರಬುದ್ಧ ನಾಯಕ; ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮದ ಆರೋಪಕ್ಕೆ ಸಾಕ್ಷ್ಯ ನೀಡಲಿ; ಸವಾಲುಕನ್ನಡಪ್ರಭ ವಾರ್ತೆ ಗಜೇಂದ್ರಗಡ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲದ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅವರ ತಂಡ ಎಸ್‌ಐಆರ್ ಮುಂದಿಟ್ಟುಕೊಂಡು ದೇಶದಲ್ಲಿ ಗೊಂದಲ ಸೃಷ್ಟಿಸಲು ಹವಣಿಸುತ್ತದೆ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.

ಪಟ್ಟಣದಲ್ಲಿ ಮಾಜಿ ಸಚಿವ ಕಳಕಪ್ಪ ಬಂಡಿ ಗೃಹ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೧೨ ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಉತ್ತಮ ಆಡಳಿತ ನೀಡುತ್ತಿದ್ದು, ದೇಶದ ಆರ್ಥಿಕ ಪ್ರಗತಿ ಗಣನೀಯವಾಗಿ ಹೆಚ್ಚಾಗಿದೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಬುದ್ಧ ವಿರೋಧ ಪಕ್ಷದ ನಾಯಕನಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಪರಿಣಾಮ ಸಂಸತ್ತಿನಲ್ಲಿ ಗಂಭೀರ ಚರ್ಚೆಗಳಲ್ಲಿ ಭಾಗವಹಿಸುವ ಬದಲು ವಿವಾದಾತ್ಮಕ ವಿಚಾರಗಳನ್ನು ಪ್ರಸ್ತಾಪಿಸುವುದು, ಕಲಾಪ ಬಹಿಷ್ಕರಿಸುವುದು ಹಾಗೂ ಗದ್ದಲ ಸೃಷ್ಟಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ದೂರಿದರು.

ಕರ್ನಾಟಕದಲ್ಲಿ ಸುಮಾರು ಒಂದು ಕೋಟಿ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತಗಳ್ಳತನದ ಆರೋಪ ಮಾಡುತ್ತಿದೆ. ನಿಜವಾಗಿಯೂ ಅನ್ಯಾಯವಾಗಿದ್ದರೆ ಅಂತಹ ೧೦೦ ಮತದಾರರನ್ನು ಸಾಕ್ಷ್ಯಸಹಿತ ಸಾರ್ವಜನಿಕವಾಗಿ ಕರೆತಂದು ತೋರಿಸಲಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.

ದೇಶದಲ್ಲಿ ಚುನಾವಣಾ ಆಯೋಗದ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಹೋರಾಟಗಳಿಗೆ ವಿದೇಶಿ ಹಣ ಹರಿದು ಬರುತ್ತಿದೆ. ಅದರಲ್ಲಿ ಪ್ರಮುಖ ನಾಯಕಿಯೊಬ್ಬರು ಹೋರಾಟದ ಮೂಲಕವೇ ಸರ್ಕಾರವನ್ನು ಬದಲಿಸುತ್ತೇವೆ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ. ಇಂತಹ ವಿದೇಶಿ ಹಣಗಳಿಂದ ನಡೆಯುತ್ತಿರುವ ಹೋರಾಟವನ್ನು ಕಡಿವಾಣ ಹಾಕಲು ಕೇಂದ್ರ ಸರ್ಕಾರವು, ವಿದೇಶಿ ದೇಣಿಗೆಗಳ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿಗಳನ್ನು ತಂದಿದೆ. ವಿದೇಶಿ ಹಣದ ಮೂಲ ಮತ್ತು ಅದರ ಬಳಕೆಗೆ ಲೆಕ್ಕಪತ್ರ ಇರಬೇಕು ಎಂಬುದು ಸರ್ಕಾರದ ನಿಲುವಾಗಿದೆ. ಅಲ್ಲದೆ ದೇಶದಲ್ಲಿ ಗೊಂದಲ ಸೃಷ್ಠಿಸಲು ಹವಣಿಸುತ್ತಿರುವ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಅವರು ಎಂದಿಗೂ ದೇಶದ ಪ್ರಧಾನಿಯಾಗಲು ಸಾಧ್ಯವಿಲ್ಲ. ಅವರು ಪ್ರಧಾನಿ ಆಗಬೇಕಿದ್ದರೆ ಖರ್ಗೆ ಅವರ ಮನೆಯಲ್ಲಿ ನಡೆಸಿದ ಮೋಕಾದಲ್ಲಿ ಮಾತ್ರ ಸಾಧು ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ನಾಂದಿ ಹಾಡಿದವರು ಎಂದು ಆರೋಪಿಸಿದಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಸಂಸ್ಥೆಗಳ ಮೇಲಿನ ತನಿಖೆ, ನೋಟಿಸ್ ಹಾಗೂ ಬಂಧನದ ವಿಚಾರಗಳಲ್ಲಿ ಸರ್ಕಾರದ ನಡೆದ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು.

ಈ ವೇಳೆ ಮಾಜಿ ಸಚಿವ ಕಳಕಪ್ಪ ಬಂಡಿ, ಮುಖಂಡರಾದ ಉಮೇಶ ಮಲ್ಲಾಪುರ, ರಾಜೇಂದ್ರ ಘೋರ್ಪಡೆ, ಆರ್.ಕೆ. ಚವ್ಹಾಣ, ಬಿ.ಎಂ. ಸಜ್ಜನರ, ಅಶೋಕ ವನ್ನಾಲ, ಶಿವರಾಜ ಬಂಡಿ, ಬಸವರಾಜ ಬೆಲ್ಲದ, ಬಾಳು ಬೋಸ್ಲೆ ಸೇರಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿ ಟನ್‌ ಕಬ್ಬಿಗೆಗೆ ₹3600 ಫಿಕ್ಸ್‌
ವೈದ್ಯಕೀಯ ಶಿಕ್ಷಣದಲ್ಲಿ ರಚನಾ ಶರೀರ ಶಾಸ್ತ್ರ ಮೂಲಭೂತ ಅಂಶ: ಡಾ. ಮಹಾಬಲ ಶೆಟ್ಟಿ