- ಹೊನ್ನಾಳಿಯ ಬೇಲಿಮಲ್ಲೂರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಜಾಗೃತಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ವಿಕಸಿತ ಭಾರತಕ್ಕಾಗಿ ನರೇಗಾ ಯೋಜನೆಯಲ್ಲಿ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ ಭಾರತದ ಸಮಗ್ರ ಗ್ರಾಮೀಣಾಭಿವೃದ್ಧಿಗೆ ಅಭಿವೃದ್ಧಿಯ ಬಲ ತುಂಬಿದೆ. ಆದರೆ, ಕಾಂಗ್ರೆಸ್ ಸರ್ಕಾರ ಸುಖಾಸುಮ್ಮನೆ ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸರ್ಕಾರ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಅವರು ಮಾತನಾಡಿದರು. ವಿಕಸಿತ ಭಾರತದ ನಿರ್ಮಾಣವೇ ವಿಬಿ-ಜಿ ರಾಮ್ ಜಿ ಮೂಲ ಆಶಯವಾಗಿದೆ. 100 ದಿನ ಇದ್ದ ದಿನಗಳ ಖಾತ್ರಿಯನ್ನು 125 ದಿನಕ್ಕೆ ಹೆಚ್ಚಿಸಿದೆ. ₹174 ಇದ್ದ ಕೂಲಿಯನ್ನು 379ಕ್ಕೆ ಏರಿಸಿದೆ. ಬೇಡಿಕೆಗೆ ಅನುಗುಣವಾಗಿ ಕೇಂದ್ರದಿಂದ ನಿಗದಿತ ಮೊತ್ತವನ್ನು ಒದಗಿಸಲಾಗುವುದು. ಹೆಚ್ಚುವರಿ ಹಣದ ಅವಶ್ಯಕತೆ ಇದ್ದರೆ ಅದನ್ನು ರಾಜ್ಯ ಸರ್ಕಾರ ಒದಗಿಸಬೇಕು. ಆದರೆ, ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ಒದಗಿಸಲು ವಿಫಲವಾದ ಕಾರಣ ಕೇಂದ್ರ ಸರ್ಕಾರದ ಈ ಯೋಜನೆ ಬಗ್ಗೆ ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಮನರೇಗಾದಲ್ಲಿ ಭ್ರಷ್ಟಾಚಾರ ಪತ್ತೆಯಾದಾಗ, ಕೇಂದ್ರ ಸರ್ಕಾರವು ಸುಧಾರಣಾ ಯೋಜನೆ ಅಗತ್ಯವಿದೆ ಎಂದು ಮನಗಂಡು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಬಿ- ಜಿ ರಾಮ್ ಜಿ ಯೋಜನೆ ಘೋಷಿಸಿತ್ತು. ಕೆಲಸ ಇಲ್ಲದಿದ್ದಾಗಲೂ ನಿರುದ್ಯೋಗ ಭತ್ಯೆಯನ್ನು ಪಾವತಿಸಬೇಕು ಎಂದು ಕಾನೂನಿನಲ್ಲಿ ಬಲವಾದ ನಿಬಂಧನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಮಾಡಿದೆ ಎಂದರು.
- - -
- ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಮಾಜಿ ಸಚಿವ.
-30ಎಚ್.ಎಲ್.ಐ2: