ಲವ್ ಜಿಹಾದ್ ಹಿಂದೆ ಕಾಂಗ್ರೆಸ್: ಕ್ಯಾವಟರ್ ಗಂಭೀರ ಆರೋಪ

KannadaprabhaNewsNetwork |  
Published : Apr 14, 2026, 02:30 AM IST
ಬಸವರಾಜ ಕ್ಯಾವಟರ್ | Kannada Prabha

ಸಾರಾಂಶ

ಕಳೆದೊಂದು ವಾರದಲ್ಲಿ ಹುಬ್ಬಳ್ಳಿಯಲ್ಲಿ ಮೂರು ಹಾಗೂ ಕೊಪ್ಪಳದಲ್ಲಿ ಒಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಇಂತಹ ಪ್ರಕರಣ ಹೆಚ್ಚಾಗಿ ಬೆಳಕಿಗೆ ಬರುತ್ತಿವೆ.

ಕೊಪ್ಪಳ:

ತಾಲೂಕಿನ ಅಳವಂಡಿ ಗ್ರಾಮದ ಮುಸ್ತಫಾ ಖಾದ್ರಿ ನಡೆಸುತ್ತಿರುವ ಲವ್ ಜಿಹಾದ್ ಹಿಂದೆ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರ ನೇರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಕಾರಕಾರಿಣಿ ಸದಸ್ಯ ಬಸವರಾಜ ಕ್ಯಾವಟರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಹಿಂದೂ ಯುವತಿಯರನ್ನು ಗುರಿಯಾಗಿಸಿ ಲವ್ ಜಿಹಾದ್‌ ಖೆಡ್ಡಾಕ್ಕೆ ಕೆಡವಲಾಗುತ್ತಿದೆ. ಪ್ರೀತಿಯ ಹೆಸರಲ್ಲಿ ಬಲೆಗೆ ಬಿಳಿಸಿಕೊಂಡು ಯುವತಿಯರ ಜೀವನ ಹಾಳು ಮಾಡುವ ದಂಧೆ ಬೇರೂರಿದೆ. ಕಳೆದೊಂದು ವಾರದಲ್ಲಿ ಹುಬ್ಬಳ್ಳಿಯಲ್ಲಿ ಮೂರು ಹಾಗೂ ಕೊಪ್ಪಳದಲ್ಲಿ ಒಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಇಂತಹ ಪ್ರಕರಣ ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಈ ಮೂಲಕ ಕಾಂಗ್ರೆಸ್ ನಾಯಕರ ಕೃಪಾ ಕಟಾಕ್ಷದಿಂದಲೇ ಲವ್ ಜಿಹಾದ್ ಪ್ರಕರಣ ನಡೆಯುತ್ತಿವೆ ಎಂದು ಹೇಳಿದರು.

ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ ಪೊಲೀಸರು ಕಾಂಗ್ರೆಸ್‌ ಸಂಸದ-ಶಾಸಕರ ಒತ್ತಡಕ್ಕೆ ಮಣಿದು ಆತನನ್ನು ಬಂಧಿಸಿಲ್ಲ ಎಂದು ಕಾಣುತ್ತಿದೆ. ಹೀಗಾಗಿ ಹಿಂದೂ ಯುವತಿಯರು ಇನ್ನಾದರೂ ಜಾಗೃತಗೊಳ್ಳಬೇಕು. ಇಂತಹ ಲವ್ ಜಿಹಾದ್ ಷಡ್ಯಂತ್ರಕ್ಕೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬಾರದು. ಅಲ್ಲದೆ, ಇಂತಹ ವಿಚಾರದಲ್ಲಿ ಮತ ಬ್ಯಾಂಕ್‌ಗೋಸ್ಕರ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.

ಲವ್ ಜಿಹಾದ್ ನಡೆಸುತ್ತಿರುವ ಆರೋಪಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳಬೇಕೆಂದು ಬಸವರಾಜ ಕ್ಯಾವಟರ್ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ ಅಕ್ಕಮಹಾದೇವಿ
ಭಾಗ್ಯವಂತಿ ಶಿಕ್ಷಣ ಸಂಸ್ಥೆಗೆ ಒಲಿದ ಹ್ಯಾಟ್ರಿಕ್!