ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಡಾ.ಎಚ್.ಸಿ. ಮಹದೇವಪ್ಪ ಅಭಿಮಾನಿ ಬಳಗ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದಲಿತ ನಾಯಕರಾಗಿದ್ದ ಬಿ. ಬಸವಲಿಂಗಪ್ಪ, ಬಿ.ರಾಚಯ್ಯ, ವಿ.ಶ್ರೀನಿವಾಸ ಪ್ರಸಾದ್ ಅವರ ನಂತರ ದಲಿತ ಸಮುದಾಯದಕ್ಕೆ ಬೆನ್ನಿಗೆ ನಿಂತವರು ಡಾ.ಎಚ್.ಸಿ.ಮಹದೇವಪ್ಪ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಸಚಿವರಾಗಿದ್ದ ಡಾ.ಮಹದೇವಪ್ಪ ಸಂವಿಧಾನದ ಆಶಯಗಳನ್ನು ಮನೆ-ಮನೆಗೆ ತಲುಪಿಸುವ ಕೆಲಸ ಮಾಡಿದರು. ಚಾಮರಾಜನಗರದಿಂದ ಬೀದರ್ ವರೆಗೆ ದಲಿತ ಮತ್ತು ಶೋಷಿತ ವರ್ಗಗಳ ಸಂಘಟನೆಗೆ ದುಡಿದಿದ್ದಾರೆ. ರಾಜ್ಯವ್ಯಾಪಿ ಸಂವಿಧಾನ ಜಾಗೃತಿ ಕಾರ್ಯಕ್ರಮದ ಮೂಲಕ ದಲಿತರು ಸ್ವಾಭಿಮಾನಿಗಳಾಗುವಂತೆ ಮಾಡಿದ್ದಾರೆ ಎಂದು ತಿಳಿಸಿದರು.ಕಾಂಗ್ರೆಸ್ ಪಕ್ಷ ಮತ್ತು ಸಂವಿಧಾನ ವಿರೋಧಿಗಳು ಸೇರಿ ದಲಿತ ಸಮುದಾಯದ ಮನೋಸ್ಥೈರ್ಯ ಕುಸಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರಲ್ಲದೆ, ಡಾ.ಎಚ್.ಸಿ.ಮಹದೇವಪ್ಪರನ್ನು ಸಂಪುಟದಿಂದ ಕೈಬಿಟ್ಟಿರುವುದು ಕಾಂಗ್ರೆಸ್‌ನ ದಲಿತ ವಿರೋಧಿ ನಿಲುವಿಗೆ ಸಾಕ್ಷಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯ ಬಿ.ಕೆ.ಬೊಮ್ಮಯ್ಯ,ಎಪಿಎಂಸಿ ಮಾಜಿ ಉಪಾಧ್ಯಕ್ಷ ರಾಜು,ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ ಅಧ್ಯಕ್ಷ ರಾಜೇಂದ್ರ ಹಂಗಳ,ಮುಖಂಡರಾದ ಕಬ್ಬಹಳ್ಳಿ ನಂಜುಂಡಸ್ವಾಮಿ,ಮಹೇಶ್ ರಾಘವಾಪುರ ಸೇರಿದಂತೆ ಹಲವರಿದ್ದರು.
ಗುಂಡ್ಲುಪೇಟೆ: ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಿಗೆ ಮಾತ್ರ ಅಹಿಂದ, ಜಾತ್ಯಾತೀತ ಎಂದು ಹೇಳುತ್ತಾರೆ. ತಮ್ಮ ಪುತ್ರನಿಗೆ ಮಾತ್ರ ಸಚಿವ ಸ್ಥಾನ ಕೊಡಿಸಿದ್ದಾರೆ ಎಂದು ಮುಖಂಡರು ಆರೋಪಿಸಿದರು.