ಕನ್ನಡಪ್ರಭ ವಾರ್ತೆ ಕಾರ್ಕಳ
ಕಾರ್ಕಳ ಬ್ಲಾಕ್ ನೂತನ 150 ಬೂತ್ ಅಧ್ಯಕ್ಷರನ್ನು ಅಭಿನಂದಿಸಿ ಉದಯ್ ಶೆಟ್ಟಿ ಮಾತನಾಡಿ, ಪಕ್ಷದ ಸಂಘಟನೆಯಲ್ಲಿ ಬೂತ್ ಅಧ್ಯಕ್ಷರ ಪಾತ್ರ ಅತೀ ಪ್ರಮುಖವಾದದ್ದು. ಬೂತ್ ಅದ್ಯಕ್ಷರು ಸ್ಥಳಿಯ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಸೇವೆ ಸಲ್ಲಿಸಿದರೆ ಸಮಸ್ಯೆಗೆ ಪರಿಹಾರ ಸುಲಭ ಹಾಗೂ ಅದರ ಪರಿಣಾಮ ಪಕ್ಷ ಸಂಘಟನೆಗೆ ಪೂರಕವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಅಧ್ಯಕ್ಷ ಶುಭದ ರಾವ್ ಮಾತನಾಡಿ, ಈ ದೇಶದ ಇತಿಹಾಸ ಮತ್ತು ಕಾಂಗ್ರೆಸ್ ಇತಿಹಾಸ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅಂತಹ ಪಕ್ಷದ ಪದಾಧಿಕಾರಿಗಳಾಗಿರುವುದು ನಮ್ಮೆಲ್ಲರ ಪುಣ್ಯ, ಸಿಕ್ಕಿದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡು ಪಕ್ಷದ ಬಲವರ್ಧನೆಗೆ ಸಂಪೂರ್ಣ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.ಹಿರಿಯ ನ್ಯಾಯವಾದಿ ಶೇಖರ್ ಮಡಿವಾಳ್ ಮಾತನಾಡಿ, ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನಾ ಕಾರ್ಯಾ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವುದು ಸಂತಸ ತಂದಿದೆ. ಪಕ್ಷ ಸಂಘಟನೆಯಲ್ಲಿ ಯುವ ಕಾಂಗ್ರೆಸ್ ಪಾತ್ರ ಅತ್ಯಂತ ಮಹತ್ವದ್ದು. ಹಾಗಾಗಿ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳು ಈ ಅಂಶವನ್ನು ಅರಿತುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಕಳ ವಿಧಾನಸಭಾ ಕ್ಷೇತ್ರದ ನೂತನ ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಅತ್ತೂರು, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ರೀನಾ ಡಿಸೋಜ, ಹಿಂದುಳಿದ ಘಟಕದ ಅದ್ಯಕ್ಷ ಅನಿಲ್ ನೆಲ್ಲಿಗುಡ್ಡೆ, ಅಲ್ಪಸಂಖ್ಯಾತ ಘಟಕದ ಅದ್ಯಕ್ಷ ಶಬ್ಬೀರ್, ಕಾನೂನು ಘಟಕದ ಅದ್ಯಕ್ಷ ರೆಹಮ್ಮತ್ತುಲ್ಲಾ ಇದ್ದರು.