ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಬೂತ್ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಪಧಾದಿಕಾರಿಗಳಿಗೆ ‘ನವ-ಸಂಕಲ್ಪ’ ಕಾರ್ಯಾಗಾರ ಹೊಟೇಲ್ ಮಯೂರ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಸಾಮಾಜಿಕ ಜಾಲತಾಣದ ಉಪಯೋಗದ ಬಗ್ಗೆ ತಿಳಿಸಿಕೊಟ್ಟರು, ಇನ್ನೋರ್ವ ಸಂಪನ್ಮೂಲ ವ್ಯಕ್ತಿ, ರಾಷ್ಟ್ರೀಯ ತರಬೇತುದಾರ ಸುಧಾಕರ ಪೂಜಾರಿ ನಾಯಕತ್ವದ ಬಗ್ಗೆ ತರಬೇತಿ ಹಾಗೂ ಚಟುವಟಿಕೆಗಳನ್ನು ಮಾಡಿ ಕಾರ್ಯಾಗಾರ ನಡೆಸಿದರು.
ಹೆಬ್ರಿ ಬ್ಲಾಕ್ ಅದ್ಯಕ್ಷ ಗೋಪಿನಾಥ್ ಭಟ್, ಮಾಜಿ ಅಧ್ಯಕ್ಷ ಸದಾಶಿವ ದೇವಾಡಿಗ, ಗ್ಯಾರಂಟಿ ಸಮಿತಿ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ, ಮಲ್ಲಿಕ್ ಅತ್ತೂರು, ಪ್ರಚಾರ ಸಮಿತಿಯ ಸುಪ್ರಿತ್ ಶೆಟ್ಟಿ, ದಿನಕರ್ ಶೆಟ್ಟಿ, ಕೆ.ಎಂ. ಎಫ್. ನಿರ್ಧೇಶಕ ಸುಧಾಕರ್ ಶೆಟ್ಟಿ ಹಾಗೂ ಬ್ಲಾಕ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಮತ್ತು ಬೂತ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ್ ಜೋಗಿ ಸ್ವಾಗತಿಸಿದರು. ಯೋಗೀಶ್ ಇನ್ನಾ ವಂದಿಸಿದರು.