ಅಕ್ಟೋಬರ್‌ 5ರಿಂದ ಓಟ್ ಚೋರಿ ವಿರುದ್ಧ ಕಾಂಗ್ರೆಸ್ ಅಭಿಯಾನ: ದಿನೇಶ್‌ ಕೆ.ಶೆಟ್ಟಿ

KannadaprabhaNewsNetwork |  
Published : Oct 05, 2025, 01:00 AM IST
ಕ್ಯಾಪ್ಷನ4ಕೆಡಿವಿಜಿ31 ಓಟ್ ಚೋರಿ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಸಹಿ ಸಂಗ್ರಹ ಅಭಿಯಾನದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಕುರಿತು ದಿನೇಶ ಕೆ.ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. | Kannada Prabha

ಸಾರಾಂಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಓಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ನಿಂದ ಅ.5ರಂದು ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿರುವ ಓಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ನಿಂದ ಅ.5ರಂದು ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ್ ಜಯಕುಮಾರ ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ ತಿಳಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಅ.5ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಮತ್ತು ಬೆಳಿಗ್ಗೆ 11 ಗಂಟೆಗೆ ನಗರದ ಅಕ್ತರ್ ರಜಾ ವೃತ್ತದಲ್ಲಿ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮಕ್ಕೆ ಮಯೂರ್ ಜಯಕುಮಾರ ಚಾಲನೆ ನೀಡುವರು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆವ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಸೇರಿದಂತೆ ಜಿಲ್ಲೆಯ ಎಲ್ಲಾ ಹಾಲಿ ಮತ್ತು ಮಾಜಿ ಶಾಸಕರು ಭಾಗವಹಿಸುವರು.

ಅಭಿಯಾನ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಕೆಪಿಸಿಸಿ ಸದಸ್ಯರು, ಸರ್ಕಾರದಿಂದ ನೇಮಕಗೊಂಡಿರುವ ನಾಮನಿರ್ದೇಶನ ಸದಸ್ಯರು, ಗ್ಯಾರಂಟಿ ಯೋಜನೆಯ ಜಿಲ್ಲಾ ಮತ್ತು ತಾಲೂಕು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಡಿಸಿಸಿ ಬ್ಯಾಂಕ್ ನಿರ್ದೇಶಕರು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ, ಜವಾಹರ್ ಬಾಲ್ ಮಂಚ್, ರಾಜೀವ್‌ಗಾಂಧಿ ಪಂಚಾಯತ್ ರಾಜ್, ಬೀದಿಬದಿ ವ್ಯಾಪಾರಸ್ಥರ ವಿಭಾಗ, ಇಂಟೆಕ್ ವಿಭಾಗ, ಅಸಂಘಟಿತ ಕಾರ್ಮಿಕರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ/ತಾಲೂಕು, ಎಪಿಎಂಸಿ ಮತ್ತು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಜಿ.ಶಿವಕುಮಾರ, ಎ.ನಾಗರಾಜ್, ಆಯುಬ್ ಪೈಲ್ವಾನ್. ಅನಿತಾ ಬಾಯಿ ಮಾಲತೇಶ, ಮಂಗಳಮ್ಮ, ಮಂಜುಳಮ್ಮ ಇತರರು ಇದ್ದರು.

PREV

Recommended Stories

ಚಲನಚಿತ್ರ ಪ್ರಶಸ್ತಿ ಪಡೆದ ನಟ, ನಟಿ, ನಿರ್ದೇಶಕರ ಅಭಿಮತ
‘ಅಗತ್ಯ ಬಂದಾಗ ಸೂಕ್ತ ನಿರ್ಧಾರ ಕೈಗೊಳ್ಳೋ ಸಾಮರ್ಥ್ಯ ಪಕ್ಷಕ್ಕಿದೆ’