ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ 2ನೇ ಸಲ ನಾಮಪತ್ರ

KannadaprabhaNewsNetwork |  
Published : Apr 16, 2024, 01:00 AM IST
15ಕೆಡಿವಿಜಿ5, 6-ದಾವಣಗೆರೆ ಡಿಸಿ ಕಚೇರಿಗೆ ಸೋಮವಾರ 2ನೇ ಸಲ ನಾಮಪತ್ರ ಸಲ್ಲಿಸಲು ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ, ಪತಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ. ಮುಖಂಡರಾದ ಎ.ನಾಗರಾಜ, ಕೆ.ಎಲ್.ಹರೀಶ ಬಸಾಪುರ. ............15ಕೆಡಿವಿಜಿ7-ದಾವಣಗೆರೆ ಡಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ 2ನೇ ಸಲ ನಾಮಪತ್ರ ಸಲ್ಲಿಸಿದ ನಂತರ ಮುಖಂಡರ ಜೊತೆ ಚರ್ಚೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ಮುದೇಗೌಡ್ರ ಗಿರೀಶ ಇತರರು................15ಕೆಡಿವಿಜಿ8-ದಾವಣಗೆರೆ ಡಿಸಿ ಕಚೇರಿಯಲ್ಲಿ 2ನೇ ಸಲ ನಾಮಪತ್ರ ಸಲ್ಲಿಸಿ ಹೊರ ಬರುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ. ಪಾಲಿಕೆ ಸದಸ್ಯ ಜಿ.ಎಸ್.ಮಂಜುನಾಥ ಗಡಿಗುಡಾಳ ಇತರರು ಇದ್ದರು. | Kannada Prabha

ಸಾರಾಂಶ

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಸೋಮವಾರ ಮತ್ತೊಮ್ಮೆ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದಾರೆ.

- ಎಸ್‌ಎಸ್‌ ಮಲ್ಲಿಕಾರ್ಜುನ, ಆರ್‌.ಎಸ್‌. ಶೇಖರಪ್ಪ, ಸೊಪ್ಪಿನ ಗುರುರಾಜ, ಅಯೂಬ್ ಸಾಥ್‌

- - - ಕನ್ನಡಪ್ರಭ ವಾರ್ತೆ, ದಾವಣಗೆರೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಸೋಮವಾರ ಮತ್ತೊಮ್ಮೆ ನಾಮಪತ್ರವನ್ನು ಸಾಂಕೇತಿಕವಾಗಿ ಸಲ್ಲಿಸಿದ್ದಾರೆ.

ನಗರದ ಜಿಲ್ಲಾಡಳಿತ ಭವನಕ್ಕೆ ಪತಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಕಾಂಗ್ರೆಸ್ ಮುಖಂಡರಾದ ಆರ್.ಎಸ್. ಶೇಖರಪ್ಪ, ಗುರುರಾಜ ಸೊಪ್ಪಿನ ಮರಿಯಪ್ಪ ಹಾಗೂ ದೂಡಾ ಮಾಜಿ ಅಧ್ಯಕ್ಷ ಅಯೂಬ್ ಪೈಲ್ವಾನ್‌ ಜೊತೆಗೆ ತೆರಳಿದ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್‌ ಅವರಿಗೆ 2ನೇ ಸಲ ಉಮೇದುವಾರಿಕೆ ಅರ್ಪಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಭ್ಯರ್ಥಿ ಡಾ.ಪ್ರಭಾ, ಕ್ಷೇತ್ರಾದ್ಯಂತ ಕಾಂಗ್ರೆಸ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಜಿಲ್ಲೆಯಲ್ಲಿ ಪಕ್ಷ ಹಾಗೂ ನಮ್ಮೆಲ್ಲರ ಜವಾಬ್ದಾರಿಯೂ ಹೆಚ್ಚಾಗಿದೆ. ಜನರ ಕಷ್ಟ ಸು-ಖದಲ್ಲಿ ನಾವು ಭಾಗಿಯಾಗಿದ್ದೇವೆ. ಉತ್ಸಾಹ ವೃದ್ಧಿಸಿದೆ ಎಂದರು.

ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದು ಚುನಾವಣೆಯಲ್ಲಿ ತಮಗೆ ಪೂರಕ ಅಂಶವಾಗಲಿದೆ. ಮನಃಪೂರ್ವಕವಾಗಿ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭ ಪಾಲಿಕೆ ಸದಸ್ಯರಾದ ಜಿ.ಎಸ್.ಮಂಜುನಾಥ ಗಡಿಗುಡಾಳ, ಎ.ನಾಗರಾಜ, ಉತ್ತರ ಅಧ್ಯಕ್ಷ ಕೆ.ಜಿ.ಶಿವಕುಮಾರ, ಕೆ.ಎಲ್.ಹರೀಶ ಬಸಾಪುರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡರ ಗಿರೀಶ, ಮುಖಂಡರು, ಕಾರ್ಯಕರ್ತರು, ಸಮುದಾಯಗಳ ಮುಖಂಡರು ಇದ್ದರು.

- - - ಬಾಕ್ಸ್‌ 18ರಂದು ಮೆರವಣಿಗೆಯಲ್ಲಿ ಸಿಎಂ, ಡಿಸಿಎಂ ಭಾಗಿ: ಎಸ್‌ಎಸ್‌ಎಂ ಕನ್ನಡಪ್ರಭ ವಾರ್ತೆ, ದಾವಣಗೆರೆ

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಒಳ್ಳೆಯ ವಾತಾವರಣವಿದೆ. ನಮ್ಮ ಸರ್ಕಾರ ಐದೂ ಗ್ಯಾರಂಟಿಗಳ ಬಗ್ಗೆ ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದರು.

ನಗರದ ಡಿಸಿ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ 2ನೇ ಸಲ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜಿಲ್ಲಾದ್ಯಂತ ಯುವಜನರು, ಮಹಿಳೆಯರು, ಪುರುಷರು, ಹಿರಿಯರು ನಮ್ಮ ಪರವಾಗಿದ್ದಾರೆ ಎಂದರು.

ನ.18ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಗರಕ್ಕೆ ಆಗಮಿಸಲಿದ್ದು, ಅಂದು ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗವಹಿಸುವರು. ಆ ದಿನ ಶ್ರೀ ದುರ್ಗಾಂಬಿಕಾ ದೇವಸ್ಥಾನ ಹಾಗೂ ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ, ಮೆರವಣಿಗೆ ಆರಂಭಿಸಲಾಗುವುದು. ಮೆರವಣಿಗೆಗಳು ಪಿ.ಬಿ. ರಸ್ತೆಗೆ ಬಂದ ನಂತರ ಸಿಎಂ ಮೆರವಣಿಗೆಯಲ್ಲಿ ಭಾಗವಹಿಸುವರು. ಅನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಡಾ.ಪ್ರಭಾ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

- - - ಕೋಟ್‌ ಶಿಸ್ತಿನ ಪಕ್ಷವೆಂದು ಹೇಳುತ್ತಿದ್ದ ಬಿಜೆಪಿ ಈಗ ದುಡ್ಡಿನ ಪಕ್ಷವಾಗಿದೆ. ಬಿಜೆಪಿ ಸಂಸದರಿಂದ ಬೇಸತ್ತಿರುವ ಪಾಲಿಕೆ ಸದಸ್ಯರಾದ ಸೋಗಿ ಶಾಂತಕುಮಾರ, ಸೌಮ್ಯ ನರೇಂದ್ರ, ಎಲ್.ಡಿ.ಗೋಣೆಪ್ಪ, ಜಯಮ್ಮ ಗೋಪಿನಾಯ್ಕ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೇ, ಬಿಜೆಪಿಯ ಒಳ್ಳೊಳ್ಳೆ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ

- ಎಸ್.ಎಸ್.ಮಲ್ಲಿಕಾರ್ಜುನ, ಜಿಲ್ಲಾ ಸಚಿವ

- - - -15ಕೆಡಿವಿಜಿ5, 6:

ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಸೋಮವಾರ 2ನೇ ಸಲ ನಾಮಪತ್ರ ಸಲ್ಲಿಸಲು ಡಿಸಿ ಕಚೇರಿಗೆ ಆಗಮಿಸಿದರು. ಪತಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ. ಮುಖಂಡರಾದ ಎ.ನಾಗರಾಜ, ಕೆ.ಎಲ್.ಹರೀಶ ಬಸಾಪುರ ಇದ್ದರು. -15ಕೆಡಿವಿಜಿ7:

ದಾವಣಗೆರೆ ಡಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ 2ನೇ ಸಲ ನಾಮಪತ್ರ ಸಲ್ಲಿಸಿದ ನಂತರ ಮುಖಂಡರ ಜೊತೆ ಚರ್ಚೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ, ಮುದೇಗೌಡ್ರ ಗಿರೀಶ ಇತರರು.-15ಕೆಡಿವಿಜಿ8:

ದಾವಣಗೆರೆ ಡಿಸಿ ಕಚೇರಿಯಲ್ಲಿ 2ನೇ ಸಲ ನಾಮಪತ್ರ ಸಲ್ಲಿಸಿ ಹೊರ ಬರುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ. ಪಾಲಿಕೆ ಸದಸ್ಯ ಜಿ.ಎಸ್.ಮಂಜುನಾಥ ಗಡಿಗುಡಾಳ ಇತರರು ಇದ್ದರು.

PREV

Recommended Stories

‘ಚಾಮುಂಡೇಶ್ವರಿ ಬಗ್ಗೆ ಬಾನು ತಮ್ಮ ಗೌರವ ಸ್ಪಷ್ಟಪಡಿಸಲಿ’ : ವಿಜಯೇಂದ್ರ
ಗ್ಯಾರಂಟಿ ಯೋಜನೆಗಳ ಜತೆ ರಾಜ್ಯವು ಅಭಿವೃದ್ಧಿ