ಮುಧೋಳ(ಬಿ)ದಲ್ಲಿ ಸಾಗರ್ ಖಂಡ್ರೆ ಪಾದಯಾತ್ರೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಅನ್ನು ಗೆಲ್ಲಿಸಿದರೆ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ತಿಳಿಸಿದರು. ಕಮಲನಗರ ತಾಲೂಕಿನ ಗ್ರಾಮದಲ್ಲಿ ಮತಯಾಚಿಸಿದರು.

KannadaprabhaNewsNetwork | Published : Apr 27, 2024 7:48 PM IST

ಕನ್ನಡಪ್ರಭ ವಾರ್ತೆ ಬೀದರ್‌

ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಕಮಲನಗರ ತಾಲೂಕಿನ ಮುಧೋಳ(ಬಿ) ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು.

ಲೋಕಸಭೆ ಚುನಾವಣೆಯಲ್ಲಿ ಆಯ್ಕೆಯಾದಲ್ಲಿ ಗ್ರಾಮಸ್ಥರ ಬೇಡಿಕೆಯಂತೆ ಗ್ರಾಮಕ್ಕೆ ಕೇಂದ್ರೀಯ ವಿದ್ಯಾಲಯ ಮಂಜೂರಾತಿ ಹಾಗೂ ಕಮಲನಗರ- ಔರಾದ್ ವಯಾ ಮುಧೋಳ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಪ್ರಯತ್ನಿಸಲಾಗುವುದು ಎಂದು ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ ಅವರು ಭರವಸೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಅನ್ನು ಗೆಲ್ಲಿಸಿದರೆ ಜಿಲ್ಲೆ ಹಾಗೂ ರಾಜ್ಯದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮುಖಂಡ ಡಾ. ಭೀಮಸೇನರಾವ್ ಸಿಂಧೆ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅನೇಕ ಜನಪರ ಗ್ಯಾರಂಟಿಗಳನ್ನು ಜಾರಿಗೊಳಿಸಲಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯ ಸೋಮನಾಥ ಮುಧೋಳ ಮಾತನಾಡಿ, ಹಾಲಿ ಸಂಸದರು 10 ವರ್ಷಗಳಲ್ಲಿ ಗ್ರಾಮಕ್ಕೆ ಭೇಟಿ ನೀಡಿಲ್ಲ. ಅಭಿವೃದ್ಧಿಗೆ ಸಹಕರಿಸಿಲ್ಲ. ಹೆದ್ದಾರಿ ಮೇಲ್ದರ್ಜೆ, ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಬೇಡಿಕೆಗೂ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಸಾಗರ್ ಖಂಡ್ರೆ ಅವರು ಆಯ್ಕೆಯಾದರೆ ಹೆದ್ದಾರಿ ಮೇಲ್ದರ್ಜೆ ಹಾಗೂ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಔರಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ತಾಪಂ ಮಾಜಿ ಸದಸ್ಯ ಸೋಮನಾಥ ಖಡ್ಕೆ, ಮುಖಂಡರಾದ ಹಣಮಂತರಾವ್ ಚವ್ಹಾಣ, ಆನಂದ ಚವ್ಹಾಣ, ಬಸವರಾಜ ದೇಶಮುಖ, ಸುನೀಲ ಹಲಬರ್ಗೆ, ಹಣಮಂತರಾವ್ ಹೊಸಖಂಡೆ, ವಿಜಯಕುಮಾರ ಹೊಸಖಂಡೆ, ಸಚಿನ್ ಕತ್ತೆ, ಸೋಮನಾಥ ಜೈರಾಮ, ರಾಜಕುಮಾರ ಮಠಪತಿ, ಲೋಕೇಶ ಹೊಸಖಂಡೆ, ಭರತ, ನಂದನವರೆ ಮೊದಲಾದವರು ಉಪಸ್ಥಿತರಿದ್ದರು.ಚಿತ್ರ 26ಬಿಡಿಆರ್55

ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಕಮಲನಗರ ತಾಲೂಕಿನ ಮುಧೋಳ(ಬಿ) ಗ್ರಾಮದಲ್ಲಿ ಶುಕ್ರವಾರ ಪಾದಯಾತ್ರೆ ನಡೆಸಿ ಮತಯಾಚಿಸಿದರು.

Share this article