ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೊಪ್ಪದಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರೋಡ್ ಶೋ ಮೂಲಕ ಪ್ರಚಾರ ಸಭೆಯಲ್ಲಿ ಮಾತನಾಡಿ, ತೆರೆ ಹಿಂದಿರುವ ಕೆಲವು ನಾಯಕರು ನನಗೆ ಈ ಹಿಂದೆ ಮಾಡಿದ ಸಹಾಯ ಹಾಗೂ ಋಣವನ್ನು ಈ ಜನ್ಮದಲ್ಲಿ ತೀರಿಸಲು ಆಗುವುದಿಲ್ಲ. ಆದ್ದರಿಂದ ಅವರಿಗೋಸ್ಕರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದೇನೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ ಮಹಿಳೆಯರು, ಬಡವರು ಹಾಗೂ ಜನ ಸಾಮಾನ್ಯರ ಅಭಿವೃದ್ಧಿಗೆ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಿಂದ ಸ್ಟಾರ್ ಚಂದ್ರು ಅವರನ್ನು ಭಾರೀ ಬಹುಮತಗಳಿಂದ ಗೆಲ್ಲಿಸುವುದರ ಮೂಲಕ ಬೆಂಬಲಿಸುವ ಭರವಸೆ ಇದೆ ಎಂದರು.ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸ್ಥಳಿಯರಲ್ಲ. ಸ್ಟಾರ್ ಚಂದ್ರು ಮೂಲತಃ ನಮ್ಮ ಜಿಲ್ಲೆಯವರು. ಎಚ್ಡಿಕೆ ಸಿಎಂ ಆಗಿ ಜಿಲ್ಲೆ ಅಭಿವೃದ್ಧಿ ಏನು ಮಾಡಿಲ್ಲ. ಲೋಕಸಭಗೆ ಚುನಾಯಿತರಾದರೆ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಮದ್ದೂರು:ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಚಿತ್ರನಟ ದರ್ಶನ್ ಸೋಮವಾರ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅದ್ಧೂರಿ ಪ್ರಚಾರ ನಡೆಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ನಾನು ಬೆಂಬಲವಾಗಿ ನಿಂತು ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.ಶಾಸಕ ಕೆ.ಎಂ.ಉದಯ್ ಮಾತನಾಡಿ, ಸ್ಟಾರ್ ಚಂದ್ರು ಪ್ರಾಮಾಣಿಕ ಸರಳ ಸಜ್ಜನಿಕೆಯ ವ್ಯಕ್ತಿ. ವ್ಯಕ್ತಿ. ನಮ್ಮ ಜಿಲ್ಲೆಯವರೇ ಆಗಿರುವ ಇವರನ್ನು ಲೋಕಸಭೆಗೆ ಆಯ್ಕೆ ಮಾಡುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಶಾಸಕರೊಂದಿಗೆ ಸ್ಟಾರ್ ಚಂದ್ರು ಸಹ ಕೈಜೋಡಿಸಲಿದ್ದಾರೆ. ಇದರಿಂದ ಕಾವೇರಿ ನದಿ ನೀರಿನ ಸಮಸ್ಯೆ ಜೊತೆಗೆ ಮಂಡ್ಯ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.