ನಂಜನಗೂಡು ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ ನೀಡಿ : ಸುನೀಲ್ ಬೋಸ್

KannadaprabhaNewsNetwork |  
Published : Apr 08, 2024, 01:01 AM IST
62 | Kannada Prabha

ಸಾರಾಂಶ

ಚಾಮರಾಜನಗರ ಲೋಕಸಭಾ ಕ್ಷೇತ್ರ 8 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ, ಅಭ್ಯರ್ಥಿಯಾಗಿ ನಾನು ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲು ಸಾಧ್ಯವಾಗುವುದಿಲ್ಲ, ನನ್ನ ಪರವಾಗಿ ಶಾಸಕ ದರ್ಶನ್ ಧ್ರುವನಾರಾಯಣ ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಮತಯಾಚನೆ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ಕಳೆದ ಮೂರು ಲೋಕಸಭಾ ಚುನಾವಣೆಗಳಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಹಿನ್ನಡೆಯಾಗಿದೆ, ಈ ಬಾರಿ ಜನರಿಗೆ ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ನೀಡುವ ಮೂಲಕ ಕ್ಷೇತ್ರದಲ್ಲಿ ಲೀಡ್ ನೀಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮನವಿ ಮಾಡಿದರು.

ತಾಲೂಕಿನ ಕಳಲೆ ಗ್ರಾಮದಲ್ಲಿ ಶನಿವಾರ ಕಳಲೆ ಜಿಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರ 8 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡಿರುವುದರಿಂದ, ಅಭ್ಯರ್ಥಿಯಾಗಿ ನಾನು ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲು ಸಾಧ್ಯವಾಗುವುದಿಲ್ಲ, ನನ್ನ ಪರವಾಗಿ ಶಾಸಕ ದರ್ಶನ್ ಧ್ರುವನಾರಾಯಣ ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಮತಯಾಚನೆ ಮಾಡಲಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಿ ತಮ್ಮ ವ್ಯಾಪ್ತಿಯ ಬೂತ್ ಗಳಲ್ಲಿ ಹೆಚ್ಚಿನ ಮತ ಕೊಡಿಸುವ ಮೂಲಕ ನನಗೆ ನಿಮ್ಮ ಸೇವೆ ಮಾಡುವ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ನಮ್ಮ ಪಕ್ಷದ ಅಭ್ಯರ್ಥಿ ಯುವ ನಾಯಕ ಸುನಿಲ್ ಬೋಸ್ ಅವರಿಗೆ ಹೆಚ್ಚಿನ ಮತ ನೀಡಿ, ಸೇವೆಯ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ಶ್ರೀಕಂಠನಾಯಕ, ಜಿಪಂ ಮಾಜಿ ಸದಸ್ಯರಾದ ಕೆ. ಮಾರುತಿ, ಕೆ.ಬಿ. ಸ್ವಾಮಿ, ಚೋಳರಾಜು, ಲತಾ ಸಿದ್ದಶೆಟ್ಟಿ, ಮುಖಂಡರಾದ ಶ್ರೀನಿವಾಸಮೂರ್ತಿ, ನಾಗರಾಜು, ಕೆ.ಎಂ. ಬಸವರಾಜು, ಮಡಿವಾಳ ಪ್ರಸನ್ನಕುಮಾರ್, ಇಂಧನ್ ಬಾಬು, ಮಹದೇವಪ್ಪ, ಕೆಡಂಪಣ್ಣ, ಮುದ್ದುಮಾದಶೆಟ್ಟಿ, ಎನ್.ಟಿ. ಗಿರೀಶ್, ನಾಗರಾಜಯ್ಯ, ಮಡಿಕೆಹುಂಡಿ ಶಿವಣ್ಣ, ಉಪ್ಪಿನಹಳ್ಳಿ ಶಿವಣ್ಣ, ರಾಜೇಶ್, ನಾರಾಯಣ, ವಿಜಯ್ಕುಮಾರ್, ಜಯಮಾಲ, ದೊರೆಸ್ವಾಮಿನಾಯಕ, ಕೆಪಿಸಿಸಿ ಕಾರ್ಯದರ್ಶಿ ಪ್ರದೀಪ್, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ಚಾಮರಾಜು, ತಮ್ಮಣ್ಣೇಗೌಡ, ತಾಪಂ ಮಾಜಿ ಸದಸ್ಯ ಎಚ್.ಎಸ್. ಮೂಗಶೆಟ್ಟಿ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ