ಕೈ ಅಭ್ಯರ್ಥಿ ಬೋಸ್ ಪರ ಶಾಸಕ ಗಣೇಶ್‌ ಪ್ರಸಾದ್‌ ಮತಯಾಚನೆ

KannadaprabhaNewsNetwork |  
Published : Apr 20, 2024, 01:13 AM IST
19ಸಿಎಚ್‌ಎನ್‌55ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿದರು. | Kannada Prabha

ಸಾರಾಂಶ

ನಮ್ಮ‌ ಕುಟುಂಬ ಸೋತಾಗಲೇ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದೇವೆ, ಗೆದ್ದಿರುವಾಗ ತಪ್ಪಿಸಿಕೊಳ್ತಿವಾ ಎಂದು ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ನಮ್ಮ‌ ಕುಟುಂಬ ಸೋತಾಗಲೇ ಕ್ಷೇತ್ರದಲ್ಲಿ ಓಡಾಟ ನಡೆಸಿದ್ದೇವೆ, ಗೆದ್ದಿರುವಾಗ ತಪ್ಪಿಸಿಕೊಳ್ತಿವಾ ಎಂದು ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.ತಾಲೂಕಿನ ವಡ್ಡಗೆರೆ ಗ್ರಾಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಮತಯಾಚಿಸಿ ಮಾತನಾಡಿದರು.ತಪ್ಪಿಸಿಕೊಳ್ಳುವ ಜಾಯಮಾನ ನನ್ನದಲ್ಲ:

ತಾಲೂಕಿನ ವಡ್ಡಗೆರೆ ಕೆರೆಗೆ ನೀರು ತುಂಬಿಸುವಂತೆ ರೈತರು ಹೋರಾಟದ ಬಳಿಕ ಶಾಸಕರು ನೀರು ತುಂಬಿಸುವ ವಿಚಾರದಲ್ಲಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿಗರು ಹೇಳುತ್ತಿದ್ದಾರೆ ತಪ್ಪಿಸಿಕೊಳ್ಳು ಜಯಮಾನ ನನ್ನದಲ್ಲ ಎಂದು ತಿರುಗೇಟು ನೀಡಿದರು. 2021 ರ ಸಮಯದಲ್ಲಿ ಅಂದಿನ ಸಚಿವ, ಶಾಸಕರು ಒಡಂಬಡಿಕೆ ಮಾಡಿಕೊಂಡು ಒಂದು ವರ್ಷ ಚಾಮರಾಜನಗರ ತಾಲೂಕಿನ ಕೆರೆಗಳಿಗೆ, ಮತ್ತೊಂದು ವರ್ಷ ಗುಂಡ್ಲುಪೇಟೆ ತಾಲೂಕಿನ ಕೆರೆಗಳಿಗೆ ನೀರು ಬಿಡುವುದಕ್ಕೆ ಒಪ್ಪಿದ್ದಾರೆ ಎಂದರು. ಈಗ ವಡ್ಡಗೆರೆ ಕರೆಗೆ ನೀರು ಬಿಡಿಸುವುದು ಕ್ಷೇತ್ರದ ಶಾಸಕನಾಗಿ ನನ್ನ ಜವಬ್ದಾರಿ ಕೂಡ ಇದೆ. ವಡ್ಡಗೆರೆ ಕೆರೆಗೆ ನೀರು ತುಂಬಿಸುವುದು ಮಹದೇವಪ್ರಸಾದ್ ಅವರ ಯೋಜನೆಯಾಗಿತ್ತು ಎಂದ ಮೇಲೆ ನೀರು ಬಿಡಿಸದೆ ಇರಲಾಗುತ್ತಾ ಎಂದರು.

ಕೇವಲ ಡಿಪಿಆರ್!ತಾಲೂಕಿನ ೧೧೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಕಳೆದ ಸರ್ಕಾರದ ಅವಧಿಯಲ್ಲಿ ಡಿಪಿಆರ್ ಆಗಿದೆ. ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. 110 ಕೆರೆ ಸಂಬಂಧ ಸಿಎಂ ಜೊತೆ ಚರ್ಚಿಸಲಾಗಿದೆ ಸಿಎಂ ಕೂಡ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.ನನ್ನ ಕರ್ತವ್ಯ: ಹುತ್ತೂರು ಕೆರೆಯಿಂದ ವಡ್ಡಗೆರೆ ಕೆರೆಗೆ ನೀರು ಬಿಡುಗಡೆಗೆ ನೀರಾವರಿ ಎಂಜಿನಿಯರ್ ಕೂಡ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲೇ ವಡ್ಡಗೆರೆ ಕೆರೆಗೆ ನೀರು ತುಂಬಿಸಲಾಗುವುದು ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಗ್ರಾಮಸ್ಥರಲ್ಲಿ ಮನವಿ ಹೇಳಿದರು.

ಬಿಜೆಪಿ ಸುಳ್ಳು ಭರವಸೆ ನಂಬಬೇಡಿ:

ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದು ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ. ಬಿಜೆಪಿ ಕೇವಲ ಭರವಸೆಗೆ ಸೀಮಿತವಾಗಿದೆ ಹಾಗಾಗಿ ಬಿಜೆಪಿಯ ಸುಳ್ಳು ಭರವಸೆ ನಂಬದೆ ಕಾಂಗ್ರೆಸ್ ನಂಬಿ ಎಂದರು. ಸುನೀಲ್ ಯುವಕ, ಕೆಲಸ ಮಾಡುವ ಹುಮ್ಮಸ್ಸಿದೆ ಅಲ್ಲದೆ ರಾಜ್ಯ ಸರ್ಕಾರ ಕೂಡ ಬಡವರ ಪರವಾಗಿದೆ. ಈ ಎಲ್ಲಾ ಕಾರಣಗಳಿಂದ ಕಾಂಗ್ರೆಸ್ ಬೆಂಬಲಿಸಿದರೆ ಅಭಿವೃದ್ಧಿ ನಿರೀಕ್ಷೆ ಮಾಡಬಹುದು ಎಂದರು.

ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್. ನಂಜುಂಡಪ್ರಸಾದ್, ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಬಿ.ರಾಜಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಕರಕಲಮಾದಹಳ್ಳಿ ಪ್ರಭು ಹಾಗೂ ನೂರಾರು ಮಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ