ಕನ್ನಡಪ್ರಭ ವಾರ್ತೆ ಹಾಸನ
ನಂತರ ಕಾಂಗ್ರೆಸ್ ಮಾಧ್ಯಮ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಡೆದಂಥ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೂರೂ ಸ್ಥಾನಗಳಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಿ ಹೊರ ಬಂದಿದ್ದಾರೆ. ಈ ಮೂರು ಕ್ಷೇತ್ರಗಳ ಅಭ್ಯರ್ಥಿಗಳಿಗೆ ಹಾಗೂ ಮತದಾರರಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುವುದು ಎಂದರು. ಇಂದು ಕಾಂಗ್ರೆಸ್ ಪಕ್ಷ ಬಡವರ, ಹಿಂದುಳಿದವರ, ಅಲ್ಪಸಂಖ್ಯಾತರ ಹಾಗೂ ರೈತರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಆಡಳಿತ ನಡೆಸುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಒಪ್ಪಿಕೊಂಡ ಮತದಾರ ಈ ಉಪ ಚುನಾವಣೆಯಲ್ಲಿ ಉತ್ತಮ ಪಲಿತಾಂಶ ನೀಡಿದ್ದಾನೆ. ಸುಳ್ಳು, ಅಪಪ್ರಚಾರ, ಕುಟುಂಬ ರಾಜಕಾರಣಕ್ಕೆ ಮತ್ತು ಉದ್ದೇಶ ಪೂರ್ವಕವಾಗಿ ಟೀಕೆ ಟಿಪ್ಪಣಿ ಮಾಡಿರುವ ವ್ಯಕ್ತಿಗಳಿಗೆ ಅದರಲ್ಲೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರಿಗೆ ಸ್ಪಷ್ಟ ಸಂದೇಶವನ್ನು ಮತದಾರರು ಕೊಟ್ಟಿದ್ದಾರೆ. ಈ ಮೂರು ಕ್ಷೇತ್ರಗಳ ಜನರಿಗೆ ಮತ್ತೊಮ್ಮೆ ಧನ್ಯವಾದಗಳನ್ನು ಹೇಳುವುದಾಗಿ ತಿಳಿಸಿದರು.
ಜಾರ್ಖಂಡ್ ರಾಜ್ಯದಲ್ಲೂ ಕೂಡ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತಿದೆ. ನಮ್ಮ ಪಕ್ಷದ ಅದಿ ನಾಯಕಿ ಪ್ರಿಯಾಂಕ ಗಾಂಧಿ ಅವರು ಕೇರಳದ ವಯನಾಡಿನಲ್ಲಿ ೩ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆ ಕ್ಷೇತ್ರದ ಜನತೆಗೂ ಕೂಡ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.ಕಾಂಗ್ರೆಸ್ ಮುಖಂಡರಾದ ದೇವಪ್ಪ ಮಲ್ಲಿಗೆವಾಳು, ಚಂದ್ರಶೇಖರ್, ರಘು ದಾಸರಕೊಪ್ಪಲು, ಅಶೋಕ್ ನಾಯಕರಹಳ್ಳಿ, ಶಿವಕುಮಾರ್ ವಿಶ್ವನಾಥ್, ಬೂದೇಶ್, ರಾಮಚಂದ್ರು ಇತರರು ಉಪಸ್ಥಿತರಿದ್ದರು.