ಸಚಿವ ಸುಧಾಕರ್‌ಗೆ ಕಾಂಗ್ರೆಸ್‌ ಮುಖಂಡರಿಂದ ಶ್ರದ್ಧಾಂಜಲಿ

KannadaprabhaNewsNetwork |  
Published : May 12, 2026, 01:15 AM IST
೧೧ಕೆಎಲ್‌ಆರ್-೨ಭಾನುವಾರ ನಿಧನರಾದ ರಾಜ್ಯ ಸರ್ಕಾರದ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ರಿಗೆ ಸೋಮವಾರ ಕೋಲಾರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಿರುವುದು. | Kannada Prabha

ಸಾರಾಂಶ

ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಜನಸೇವೆ ಮಾಡಿದ್ದರು. ಹತ್ತಾರು ಒಳ್ಳೆಯ ಕೆಲಸ ಮಾಡಿದ್ದರು. ಜೊತೆಗೆ ೨೦ ವರ್ಷ ಚಿತ್ರದುರ್ಗ ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಂಥ ನಾಯಕರೊಬ್ಬರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ, ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ.

ಕನ್ನಡಪ್ರಭ ವಾರ್ತೆ ಕೋಲಾರಭಾನುವಾರ ನಿಧನರಾದ ರಾಜ್ಯ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್‌ ಅವರಿಗೆ ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಸುಧಾಕರ್‌ ಭಾವಚಿತ್ರಕ್ಕೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರ ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಆಫ್ಸರ್, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಎನ್ ಅಂಬರೀಷ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಮೈಲಾಂಡಹಳ್ಳಿ ಮುರಳಿ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಜನಸೇವೆ ಮಾಡಿದ್ದರು. ಹತ್ತಾರು ಒಳ್ಳೆಯ ಕೆಲಸ ಮಾಡಿದ್ದರು. ಜೊತೆಗೆ ೨೦ ವರ್ಷ ಚಿತ್ರದುರ್ಗ ಜಿಲ್ಲೆಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಂಥ ನಾಯಕರೊಬ್ಬರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ, ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಶಾಂತಿ ಕರುಣಿಸಲಿ. ಅವರ ಕುಟುಂಬಕ್ಕೆ ದುಃಖ ಎದುರಿಸುವ ಶಕ್ತಿ ನೀಡಲಿ ಎಂದರು.ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಎನ್. ಅಂಬರೀಷ್ ಮಾತನಾಡಿ, ನೇರವಾದ ವ್ಯಕ್ತಿತ್ವದ ಸ್ವಾಭಿಮಾನದ ರಾಜಕಾರಣಕ್ಕೆ ಹೆಸರು ಗಳಿಸಿದ್ದರು. ಯುವಕರಿಗೆ ದೊಡ್ಡ ಶಕ್ತಿಯಾಗಿ ಎರಡನೇ ಹಂತದ ನಾಯಕರನ್ನು ಗುರುತಿಸಿ ಬೆಳೆಸುವ ಕೆಲಸ ಮಾಡಿದ್ದಾರೆ ಎಂದರು.ರಾಜ್ಯ ಎಸ್ಸಿ ಘಟಕದ ಸಂಚಾಲಕ ಬೆಳಗಾನಹಳ್ಳಿ ಮುನಿವೆಂಕಟಪ್ಪ, ದರಕಾಸ್ತು ಸಮಿತಿ ಸದಸ್ಯ ಖಾದ್ರಿಪುರ ಬಾಬು, ಮುಖಂಡರಾದ ಕಠಾರಿಪಾಳ್ಯ ಗಂಗಣ್ಣ, ಅಮರನಾಥ್, ಹಾರೋಹಳ್ಳಿ ರಾಜೇಶ್, ಕುಡಾ ಸದಸ್ಯರಾದ ಕಿಲಾರಿಪೇಟೆ ಮಣಿ, ಕೋಟೆ ಚಂದ್ರಶೇಖರ್, ಉಮಾಶಂಕರ್, ವೀರೇಂದ್ರ ಪಾಟೀಲ್, ಚಿನ್ನಾಪುರ ನಾರಾಯಣಸ್ವಾಮಿ, ಜಗನ್ ಜಗದೀಶ್, ಷಂಷೀರ್, ನದೀಂ, ಏಜಾಜ್, ನಯ್ಯೂಂ, ಷಫೀ, ರಫಿ ಇದ್ದರು.

೧೧ಕೆಎಲ್‌ಆರ್-೨

ಭಾನುವಾರ ನಿಧನರಾದ ರಾಜ್ಯ ಸರ್ಕಾರದ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್‌ರಿಗೆ ಸೋಮವಾರ ಕೋಲಾರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಮಾನಸದ ನಾಯಕನಿಗೆ ಕಣ್ಣೀರಿನ ಅಶ್ರುತರ್ಪಣ
ಸೂರನಹಳ್ಳಿಯಲ್ಲಿ ಸುಧಾಕರ್ ನೆನೆದು ಕಣ್ಣೀರು