ಕನ್ನಡಪ್ರಭ ವಾರ್ತೆ ಮಂಡ್ಯ
ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಡ್ಯ ತಾಲೂಕು ದುದ್ದ ಹೋಬಳಿ ವಿವಿಧ ಗ್ರಾಪಂಗಳಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಜೊತೆಗೂಡಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದ ವೇಳೆ ಅವರು ಮಾತನಾಡಿದರು.
ರೈತರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ತಂದಿದೆ. ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಗೆ ಶಕ್ತಿ ತುಂಬಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಭರವಸೆ ನೀಡಲಾಗುತ್ತದೆ. ಎಂಎಸ್ ಪಿಗೆ ಕಾನೂನು ಖಾತರಿ ನೀಡುವುದರಿಂದ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದೆ. ಇದರಿಂದ ರೈತರ ಜೀವನ ಪರಿಸ್ಥಿತಿ ಸುಧಾರಿಸಲಿದೆ. ಇದರ ಜೊತೆಗೆ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಜನಾಶೀರ್ವಾದ ಬೇಕಿದೆ ಎಂದರು.
ಈ ವೇಳೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಎಚ್ .ಬಿ.ರಾಮು, ಎಐಸಿಸಿ ಕಾರ್ಯದರ್ಶಿ ಹಾಗೂ ಕೇರಳದ ಕಾಂಗ್ರೆಸ್ ಶಾಸಕ ರೋಜಿ ಎಂ. ಜಾನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್, ಕೆಪಿಸಿಸಿ ಸದಸ್ಯರಾದ ನಾರಾಯಣ್ ಸೇರಿ ಸರ್ವೋದಯ ಕರ್ನಾಟಕ ಪಕ್ಷ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು.