ಕನ್ನಡಪ್ರಭ ವಾರ್ತೆ ಶಿರಾ
ಅವರು ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಭೀಮಹೆಜ್ಜೆ ಶತಮಾನದ ಸಂಭ್ರಮದ ರಥಯಾತ್ರೆಗೆ ಶಿರಾ ನಗರದಲ್ಲಿ ಅದ್ಧೂರಿ ಸ್ವಾಗತ ನೀಡಿ ಬರಮಾಡಿಕೊಂಡ ಮಾತನಾಡಿದರು. ದೇಶದಲ್ಲಿ ಪ.ಜಾತಿ, ಪಂಗಡದವರು, ತುಳಿತಕ್ಕೊಳಗಾದವರು, ದಲಿತರು, ಹಿಂದುಳಿದ ವರ್ಗದವರು ವಿದ್ಯಾವಂತರಾಗಿ ಅಭಿವೃದ್ಧಿ ಹೊಂದಿದ್ದರೆ ಅದಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಕಾರಣ. ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ ಎಲ್ಲರಿಗೂ ಸಮಾನ ಅವಕಾಶಗಳು ದೊರಕಿವೆ. ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ನಿಪ್ಪಾಣಿಗೆ ಭೇಟಿ ಕೊಟ್ಟು ೧೦೦ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಭೀಮ ಹೆಜ್ಜೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಭೀಮ ಹೆಜ್ಜೆ ೧೦೦ರ ಸಂಭ್ರಮ ಜಾಗೃತಿ ಕಾರ್ಯಕ್ರಮ ಅಂಗವಾಗಿ ಬೆಂಗಳೂರಿನಿಂದ ನಿಪ್ಪಾಣಿ ವರೆಗೆ ನಡೆಯುತ್ತಿದ್ದು, ಏ. ೧೫ರಂದು ನಿಪ್ಪಾಣಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ವಿಧಾನಸೌಧದಲ್ಲಿರುವ ಡಾ.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭೀಮ ಹೆಜ್ಜೆ ಅಭಿಯಾನಕ್ಕೆ ಚಾಲನೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಗೋವಿಂದ ಕಾರಜೋಳ, ಎನ್ ಮಹೇಶ್, ಮಾಜಿ ಸಂಸದ ಕೋಲಾರ ಮುನಿಸ್ವಾಮಿ, ಸೇರಿದಂತೆ ಹಲವರು ಚಾಲನೆ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಜಿಲ್ಲಾ ದಿಶಾ ಸಮಿತಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್, ಮಧುಗಿರಿ ವಿಭಾಗದ ಬಿಜೆಪಿ ಅಧ್ಯಕ್ಷ ಹನುಮಂತೇ ಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ಈರಣ್ಣ ಪಟೇಲ್, ಮಾಜಿ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ನಗರ ಅಧ್ಯಕ್ಷ ಗಿರಿಧರ್, ಪ್ರಧಾನ ಕಾರ್ಯದರ್ಶಿ ನಟರಾಜ್ ಸಂತೆಪೇಟೆ, ಡಿ.ಪಿ.ರಂಗನಾಥ್ ಕೊಟ್ಟ, ಮಾಜಿ ನಗರ ಅಧ್ಯಕ್ಷರಾದ ಲಕ್ಷ್ಮೀನಾರಾಯಣ, ಮುಖಂಡರಾದ ಬರಗೂರು ಶಿವಕುಮಾರ್, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಮಾಗೋಡ್ ಪ್ರತಾಪ್, ಗೋಪಿಕಂಟೆ ಕುಮಾರ್ ಮಾಸ್ಟರ್, ಯುವ ಮುಖಂಡರದ ಭಾಸ್ಕರ್, ಎಸ್. ಎಲ್ ಗೌಡ, ಮಹಿಳಾ ಮೋರ್ಚಾ ಕವಿತಾ, ನರಸಿಂಹರಾಜ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.