ಚುನಾವಣಾ ವ್ಯವಸ್ಥೆ ಬಗ್ಗೆ ಕಾಂಗ್ರೆಸ್ಸಿಂದ ಜನರಲ್ಲಿ ಅಪನಂಬಿಕೆ ಸೃಷ್ಟಿ

KannadaprabhaNewsNetwork |  
Published : Nov 05, 2026, 01:30 AM IST
ಈಶ್ವರಪ್ಪ  | Kannada Prabha

ಸಾರಾಂಶ

Congress creates distrust among the public regarding the electoral system.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಚುನಾವಣೆಯಲ್ಲಿ ಸೋತಾಗೆಲ್ಲ ಇವಿಎಂ ಬದಲಿಗೆ ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆಸಿ ಎನ್ನುತ್ತಿದ್ದ ಕಾಂಗ್ರೆಸ್‌ ಪಕ್ಷ ಮೊನ್ನೆ ನಡೆದ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಬ್ಯಾಲೆಟ್ ಪೇಪರ್ ಮೂಲಕ ನಡೆದಿದ್ದರೂ ಸೋಲು ಅನುಭವಿಸಿದೆ ಎಂದು ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ ವ್ಯಂಗ್ಯವಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಗೆದ್ದಾಗ ಇವಿಎಂ ಹಾಗೂ ಚುನಾವಣಾ ಆಯೋಗದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್, ಸೋತಾಗ ಮಾತ್ರ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದೆ. ಕರ್ನಾಟಕದಲ್ಲಿಯೂ ಇವಿಎಂ ಮೂಲಕವೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹಾಗಾದರೆ ಈಗ ಇವಿಎಂ ಬಗ್ಗೆ ಆಕ್ಷೇಪವೇಕೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನಿಂದ ಅಪನಂಬಿಕೆ ಸೃಷ್ಟಿ:

ಎಸ್‌ಐಆರ್ ಪ್ರಕ್ರಿಯೆ ವಿರೋಧಿಸುವ ಮೂಲಕ ಕಾಂಗ್ರೆಸ್ ಚುನಾವಣಾ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುತ್ತಿದೆ. ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ ಪರಿಷ್ಕರಣೆ ಮಾಡುವುದು ಅಗತ್ಯ. ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಉಳಿಯಬೇಕು. ಈ ಉದ್ದೇಶದಿಂದ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು.

ಮತದಾರರ ಪಟ್ಟಿಯಿಂದ ಮುಸ್ಲಿಮರು, ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗದವರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಧರ್ಮ, ಜಾತಿ ಅಥವಾ ಆರ್ಥಿಕ ಸ್ಥಿತಿಯನ್ನು ಪರಿಗಣಿಸುವುದಿಲ್ಲ ಎಂದು ಹೇಳಿದರು.

ಎಸ್‌ಐಆರ್ ಪ್ರಕ್ರಿಯೆ ಆರಂಭವಾದ ವೇಳೆ ರಾಷ್ಟ್ರಭಕ್ತ ಬಳಗದಿಂದಲೂ ಮೂರ್ನಾಲ್ಕು ಕಡೆ ಸಹಾಯ ಕೇಂದ್ರಗಳನ್ನು ತೆರೆಯಲಾಗಿತ್ತು. ಕಾರ್ಯಕರ್ತರು ಮನೆಮನೆಗೆ ತೆರಳಿ ಮತದಾರರ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಅರ್ಹರ ಹೆಸರು ಸೇರ್ಪಡೆಗೊಳಿಸಲು ಹಾಗೂ ಅನರ್ಹ ಹೆಸರುಗಳನ್ನು ಗುರುತಿಸಲು ಸಹಕರಿಸಿದ್ದಾರೆ.

ಈ ಕಾರ್ಯದಲ್ಲಿ ತೊಡಗಿರುವ ಚುನಾವಣಾ ಆಯೋಗದ ಅಧಿಕಾರಿಗಳು, ಸಿಬ್ಬಂದಿ ಮತ್ತು ಬೂತ್ ಮಟ್ಟದ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.

ಪೋಟೋ: 04ಎಸ್ಎಂಜಿಕೆಪಿ03

ಶಿವಮೊಗ್ಗ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗಳನ್ನು ಲವ್‌ ಮಾಡಿದ್ದಕ್ಕೆ ಕೆಲಸಗಾರನ ಹತ್ಯೆ
ಡೇಟಿಂಗ್‌ ಆ್ಯಪಲ್ಲಿ ಪರಿಚಯವಾದಯುವಕನ ದರೋಡೆ: ನಾಲ್ವರ ಸೆರೆ