ಚಿತ್ರದುರ್ಗ: ಅಂಬೇಡ್ಕರ್ ಬಗ್ಗೆ ಸಂಸತ್‍ನಲ್ಲಿ ಕೀಳಾಗಿ ಮಾತನಾಡಿ ಸಂವಿಧಾನಕ್ಕೆ ಅಗೌರವ ತೋರಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ: ಅಂಬೇಡ್ಕರ್ ಬಗ್ಗೆ ಸಂಸತ್‍ನಲ್ಲಿ ಕೀಳಾಗಿ ಮಾತನಾಡಿ ಸಂವಿಧಾನಕ್ಕೆ ಅಗೌರವ ತೋರಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಒನಕೆ ಓಬವ್ವ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸಂವಿಧಾನಕ್ಕೆ ಅವಮಾನ ಮಾಡುತ್ತಲೆ ಬರುತ್ತಿದೆ. ಅಂಬೇಡ್ಕರ್ ಸಂವಿಧಾನ ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡದಿದ್ದರೆ ಅಮಿತ್ ಶಾ ಕೇಂದ್ರ ಮಂತ್ರಿಯಾಗುತ್ತಿರಲಿಲ್ಲ. ಬಿಜೆಪಿ ದಲಿತ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದೆ. ಪ್ರಧಾನಿ ಮೋದಿ ಈ ವಿಚಾರವನ್ನು ಹಗುರವಾಗಿ ತೆಗೆದುಕೊಳ್ಳಬಾರದು, ಅಮಿತ್ ಶಾರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಾತನಾಡಿ, ಸಂಸತ್‍ನಲ್ಲಿ ಸಂವಿಧಾನ ಕುರಿತು ಚರ್ಚಿಸುತ್ತಿದ್ದ ವೇಳೆ ಅಮಿತ್ ಶಾ ಅಂಬೇಡ್ಕರ್ ರವರನ್ನು ಜಪಿಸುವ ಬದಲು ದೇವರ ನಾಮಸ್ಮರಣೆ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆಂದು ಹೇಳಿ ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಯುವ ಮುಖಂಡ ಜೆ.ಜೆ.ಹಟ್ಟಿ ಡಾ.ಬಿ.ತಿಪ್ಪೇಸ್ವಾಮಿ, ಹನುಮಲಿ ಷಣ್ಮುಖಪ್ಪ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಓ.ಶಂಕರ್, ಎಸ್.ಜಯಣ್ಣ, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ಎನ್.ಡಿ.ಕುಮಾರ್, ಮಂಜುನಾಥ್, ಮುದಸಿರ್‍ನವಾಜ್, ಸೈಯದ್ ಖುದ್ದೂಸ್, ಅಬ್ದುಲ್ಲಾ, ಆರ್.ಶಿವಣ್ಣ, ಆರ್.ಪ್ರಕಾಶ್, ಮುನಿರಾ ಎ.ಮಕಾಂದಾರ್, ಮೋಕ್ಷರುದ್ರಸ್ವಾಮಿ, ಗೀತಾ ನಂದಿನಿಗೌಡ, ಪವಿತ್ರ, ರೇಣುಕ, ಭಾಗ್ಯಮ್ಮ, ಸುಧಾ ಡಿ.ಎಸ್.ಹಳ್ಳಿ, ಪರ್ವಿನ್‍ಭಾನು, ಪಿ.ಕೆ.ಮೀನಾಕ್ಷಿ, ಅಕ್ಬರ್, ಆರ್.ನರಸಿಂಹರಾಜು, ಕೃಷ್ಣಮೂರ್ತಿ, ಯು.ಲಕ್ಷ್ಮಿಕಾಂತ್, ನ್ಯಾಯವಾದಿ ಸುದರ್ಶನ್, ಚಿದಾನಂದಮೂರ್ತಿ, ಡಿ.ಕುಮಾರಸ್ವಾಮಿ, ಡಿ.ಕುಮಾರ್ ಪಿಳ್ಳೆಕೆರನಹಳ್ಳಿ, ಎಲ್.ಕೆ.ರಾಬರ್ಟ್, ಆರ್.ರಮೇಶ್, ನೇತ್ರಾವತಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.