ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಪದತ್ಯಾಗಕ್ಕೆ ಆಗ್ರಹ

KannadaprabhaNewsNetwork |  
Published : Jun 19, 2024, 01:06 AM IST
ಪೋಟೊ: 18ಎಸ್‌ಎಂಜಿಕೆಪಿ03ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ನಡೆದಿರುವ ರೈಲು ಅಪಘಾತ ಘಟನೆ ಹಿನ್ನೆಲೆ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ನಡೆದಿರುವ ರೈಲು ಅಪಘಾತ ಘಟನೆ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ನಡೆದಿರುವ ರೈಲು ಅಪಘಾತದಲ್ಲಿ 9 ಮಂದಿ ಮೃತ ಪಟ್ಟಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

2014ರಲ್ಲಿ ದೇಶಕ್ಕೆ ಬುಲೆಟ್ ಟ್ರೈನ್‌ ಕೊಡುತ್ತೇವೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದು ಇರುವ ರೈಲುಗಳಿಗೂ ಸಿಗ್ನಲ್ ಕೊಡಲು ಇವರಲ್ಲಿ ಕಾರ್ಮಿಕರಿಲ್ಲ ದಂತಾಗಿದೆ. ಕೇಂದ್ರ ಸರ್ಕಾರವು ರೈಲಿನ ಚೇರ್ ಮತ್ತು ಶೌಚಾಲಯದ ಚಿತ್ರಗಳನ್ನು ಕೇವಲ ಸೋಶಿಯಲ್ ಮೀಡಿಯಾದಲ್ಲಿ ತೋರಿಸಿ ಜನರಿಗೆ ಮೋಸ ಮಾಡುತ್ತಿದೆ ಎಂದು ಮನವಿಯಲ್ಲಿ ಆರೋಪಿಸಿದರು.

ಬುಲೆಟ್ ರೈಲ್‍ನ ತಂತ್ರಜ್ಞಾನ ದೇಶಕ್ಕೆ ಕಾಲಿಡುವ ಒತ್ತಲ್ಲೇ ಸಿಗ್ನಲ್ ಲೋಪದಿಂದ ಹಾಗೂ ಚಾಲಕನ ನಿರ್ಲಕ್ಷ್ಯ ಈ ಘಟನೆಗೆ ಕಾರಣವಾಗಿದೆ. ಪದೇ ಪದೇ ರೈಲು ಅಪಘಾತಗಳು ನಡೆಯುತ್ತಿದ್ದು, ಇದರ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಎಸ್.ಶಿವಕುಮಾರ್, ಮುಖಂಡರಾದ ಎಚ್.ಸಿ.ಯೋಗೀಶ್, ರಂಗೇಗೌಡ, ಎಚ್. ಎಸ್.ಬಾಲಾಜಿ, ನವೀನ್, ಅಕ್ಬರ್, ಗಿರೀಶ್, ಕುಮಾರ್ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಕಪ್ ವಾಹನ ಅಡ್ಡಗಟ್ಟಿ ₹3 ಲಕ್ಷ ಮೌಲ್ಯದ 44 ಕ್ವಿಂಟಾಲ್ ಹಸಿ ಅಡಕೆ ದರೋಡೆ
ಪೋಕ್ಸೋ ಕಾಯ್ದೆ ಸರಿಯಾಗಿ ಜಾರಿಯಾದರೆ ಮಾತ್ರ ಅಪ್ರಾಪ್ತೆಯರ ರಕ್ಷಣೆ