ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾದಲ್ಲಿ ಶನಿವಾರ ನಡೆದ ಬೂತ್‌ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಐಎನ್‌ಡಿ ಒಕ್ಕೂಟ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪುತ್ತಿಲ್ಲ. ಕಾಂಗ್ರೆಸ್‌ನವರು ಇಂದು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿಗೆ ದಿನೇ ದಿನೇ ಬೆಂಬಲ ಹೆಚ್ಚಾಗುತ್ತಿದೆ. ಎಲ್ಲರನ್ನೂ ಮನೆಗೆ ಕಳುಹಿಸುವ ಮೋದಿಯವರ ಸುಂಟರಗಾಳಿ ಹೆಚ್ಚಾಗುತ್ತಿದೆ. ಕಾಂಗ್ರೆಸ್ ದಿನದಿಂದ ದಿನಕ್ಕೆ ಅವನತಿಯ ಹಾದಿ ಹಿಡಿಯುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಇನ್ನೊಂದು ಕಪ್ಪು ಚುಕ್ಕೆ ಪಿಒಕೆ ಇದೆ. 400 ಸೀಟ್ ಗೆದ್ದ ಬಳಿಕ ಪಾಕ್ ಆಕ್ರಮಿತ ಕಾಶ್ಮೀರವನ್ನು ಕೂಡ ವಾಪಸ್ ಪಡೆಯುತ್ತಾರೆ. ಇಡೀ ದೇಶದಲ್ಲಿರುವ ಎಲ್ಲ ನಾಯಕರಿಗೆ ಒಂದೇ ಕಾನೂನು ಮಾಡುತ್ತಾರೆ. ಈ ಕಾರಣಕ್ಕೆ ದೇಶಕ್ಕೆ ಇಂದು ನರೇಂದ್ರ ಮೋದಿಯವರು ಅವಶ್ಯ ಇದೆ. ಅವರೇ 3ನೇ ಬಾರಿಗೆ ದೇಶದ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಮಾತನಾಡಿ, ರಾಜ್ಯದಲ್ಲಿ ಆದಷ್ಟು ಶೀಘ್ರ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಡಬಲ್ ಇಂಜಿನ್ ಸರ್ಕಾರ ಮಾಡುತ್ತೇವೆ ಎಂದು ಗುಡುಗಿದರು.
ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಇರುವುದರಿಂದ ಬೆಳಗಾವಿ ಪಶ್ಚಿಮ ಭಾಗದಲ್ಲಿ ನೀರಾವರಿ ಯೋಜನೆ ಮಾಡುವುದಿದೆ. ಬೆಳಗಾವಿ ಗ್ರಾಮೀಣ ಭಾಗದಲ್ಲಿ ಇಪ್ಪತ್ತೈದು ಸಾವಿರ ಲೀಡ್ ಆಗುತ್ತದೆ. ಶೆಟ್ಟರ್ ಅವರು 2 ರಿಂದ 2.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಸಂಸದೆ ಮಂಗಲ ಅಂಗಡಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಡಾ.ಸೋನಾಲಿ ಸರ್ನೋಬತ್ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಬಾಕ್ಸ್.....
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಮಾಜಿ ಶಾಸಕ ಸಂಜಯ ಪಾಟೀಲ ನಾಲಿಗೆ ಹರಿಬಿಟ್ಟಿದ್ದಾರೆ. ಇಂದು ರಾತ್ರಿ ಹೆಬ್ಬಾಳಕರ್ ಒಂದು ಎಕ್ಸ್‌ಸ್ಟ್ರಾ ಪೆಗ್ ಹೊಡೆಯಬೇಕಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
ಕೋಟ್...
-ಜಗದೀಶ ಶೆಟ್ಟರ್, ಬೆಳಗಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ.
----------------------ಬೆಳಗಾವಿಯಲ್ಲಿ ಕಾಂಗ್ರೆಸ್ ಸೋಲು ಖಚಿತ. ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆಲ್ಲುತ್ತಾರೆ. ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗುತ್ತಾರೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿಸಿ ಜಗದೀಶ್ ಶೆಟ್ಟರ್ ತ್ರಿವಳಿ ನಗರ ಮಾಡುತ್ತಾರೆ. ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡುತ್ತೇವೆ. ಬೆಂಗಳೂರು ಚೆನ್ನೈ ಮಾದರಿಯಲ್ಲಿ ಇಂಡಸ್ಟ್ರಿ ಕಾರಿಡಾರ್ ಮಾಡುತ್ತೇವೆ.
-ರಮೇಶ ಜಾರಕಿಹೊಳಿ, ಶಾಸಕರು.