ದೇಶದ ಅಭಿವೃದ್ಧಿಗೆ ಕಾಂಗ್ರೆಸ್‌ನಿಂದ ಅನೇಕ ಕೊಡುಗೆ: ಮಂಜುನಾಥ್

KannadaprabhaNewsNetwork |  
Published : Jun 23, 2025, 11:47 PM IST
ಯುವ ಘಟಕದ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಂಡ ಸಂದರ್ಭ | Kannada Prabha

ಸಾರಾಂಶ

ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮಂಜುನಾಥ್‌ ಇದೇ ಮೊದಲ ಬಾರಿಗೆ ಕೊಡಗಿಗೆ ಭೇಟಿ ನೀಡುತ್ತಿದ್ದು ಸರ್ಕಾರ ಐದು ಗ್ಯಾರೆಂಟಿಗಳನ್ನು ನೀಡಿದೆ ಎಂದರು.

ಕನ್ನಡಪ್ರಭ ವಾರ್ತೆ ಕುಶಾಲನಗರಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಗೌಡ ಅವರನ್ನು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣ್ಣೀರ ನೇತೃತ್ವದಲ್ಲಿ ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಗಡಿಭಾಗದ ಕಾವೇರಿ ಪ್ರತಿಮೆ ಬಳಿ ಅದ್ದೂರಿಯಾಗಿ ಬರಮಾಡಿಕೊಂಡರು. ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮಂಜುನಾಥ್, ಇದೇ ಮೊದಲ ಬಾರಿಗೆ ಕೊಡಗಿಗೆ ಭೇಟಿ ನೀಡುತ್ತಿದ್ದು ಸರ್ಕಾರ ಐದು ಗ್ಯಾರಂಟಿಗಳನ್ನು ಕೊಟ್ಟಿದೆ. ದೇಶದ ಅಭಿವೃದ್ಧಿ, ಕೃಷಿ, ಜಿಡಿಪಿ ಬೆಳವಣಿಗೆಗೆ ಪಕ್ಷ ಅನೇಕ ಕೊಡುಗೆಗಳನ್ನು ನೀಡಿದೆ. ಇದನ್ನು ಪಕ್ಷದ ಯುವ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಿಸಿ ಜನರ ಧ್ವನಿಯಾಗಬೇಕು ಎಂದರು.

2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮೈಸಿ ಕತ್ತಣ್ಣೀರ, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ, ಉಪಾಧ್ಯಕ್ಷರಾದ ಅರ್ಜುನ್, ಸಚಿನ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಂ ಎಸ್. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪ್ರಮುಖರಾದ ನಯಾಜ್ ಸೇರಿದಂತೆ ಪ್ರಮುಖರು ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ