ಬರ ಪರಿಹಾರದಲ್ಲಿ ಕಾಂಗ್ರೆಸ್ ಒಣ ರಾಜಕೀಯ

KannadaprabhaNewsNetwork |  
Published : Apr 29, 2024, 01:30 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಮಾಜಿ ಸಚಿವ ಬೈರತಿ ಬಸವರಾಜ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಬರ ಮತ್ತು ನೆರೆ ಪರಿಹಾರದ ವಿಷಯದಲ್ಲಿ ಕೇಂದ್ರ ಸರ್ಕಾರ ತನ್ನದೇ ಆದ ಮಾರ್ಗಸೂಚಿ ಮಾನದಂಡ ಬಳಸಿ ಪರಿಹಾರ ವಿತರಣೆ ಮಾಡುತ್ತದೆ

ಲಕ್ಷ್ಮೇಶ್ವರ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ವಿಷಯದಲ್ಲಿ ಒಣ ರಾಜಕೀಯ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಚಿವ ಭೈರತಿ ಬಸವರಾಜ್ ಹೇಳಿದರು.

ಭಾನುವಾರ ಪಟ್ಟಣದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್‌ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬರ ಮತ್ತು ನೆರೆ ಪರಿಹಾರದ ವಿಷಯದಲ್ಲಿ ಕೇಂದ್ರ ಸರ್ಕಾರ ತನ್ನದೇ ಆದ ಮಾರ್ಗಸೂಚಿ ಮಾನದಂಡ ಬಳಸಿ ಪರಿಹಾರ ವಿತರಣೆ ಮಾಡುತ್ತದೆ. ಆದರೆ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಈ ವಿಷಯದಲ್ಲಿ ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿದ್ದ ಅನೇಕ ಯೋಜನೆಗಳನ್ನು ಸಿದ್ದರಾಮಯ್ಯ ಸರ್ಕಾರ ರದ್ದುಗೊಳಿಸುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದ ಅವರು, ಬಸವರಾಜ ಬೊಮ್ಮಾಯಿ ಕಾಲದಲ್ಲೂ ನೆರೆ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕಾಗಿ ಕಾಯದೆ ರಾಜ್ಯ ಸರ್ಕಾರದಿಂದಲೇ ನೀಡಿದರು, ಆದರೆ ಈ ಸರ್ಕಾರದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಹೇಳಿದರು.

ಕೆ.ಎಸ್. ಈಶ್ವರಪ್ಪ ಪಕ್ಷದಲ್ಲಿ ಹಿರಿಯರಾಗಿದ್ದರು ಅವರು ಹಠ ಹಿಡಿಯುವ ಕಾರ್ಯ ಮಾಡಬಾರದಿತ್ತು. ಪಕ್ಷದ ವರಿಷ್ಠರು ಅವರು ಜತೆ ಮಾತನಾಡಿದರೂ ಕೂಡಾ ತಮ್ಮ ನಿಲುವಿನಿಂದ ಹಿಂದೆ ಸರಿಯಲಿಲ್ಲ. ಹೀಗಾಗಿ ಸ್ವಲ್ಪ ಬೇಜಾರಾಗಿದೆ ಎಂದರು.

ಮೋದಿ ಕೋವಿಡ್ ಸಂಕಷ್ಟ ಕಾಲದಲ್ಲಿ ದೇಶದ ಜನರು ಪ್ರಾಣ ರಕ್ಷಣೆಗಾಗಿ ಹೋರಾಟ ಮಾಡಿ ಸಂಕಷ್ಟದಿಂದ ಪಾರು ಮಾಡಿದರು. ಉಚಿತ ಪಡಿತರ, ರೈತ ನಿಧಿ ಯೋಜನೆ, ಉಜ್ವಲ ಯೋಜನೆ, ವಿದೇಶಾಂಗ ನೀತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಜನರು ಮನಸ್ಸಿನಲ್ಲಿ ಉಳಿದಿವೆ.ಹೀಗಾಗಿ ಬಸವರಾಜ ಬೊಮ್ಮಾಯಿ ಅವರನ್ನು ಹೆಚ್ಚಿನ ಬಹುಮತದಿಂದ ಆರಿಸಿ ತರುವ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡಬೇಕಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಶಿರಹಟ್ಟಿ ಬಿಜೆಪಿ ಮಂಡಳ ಅಧ್ಯಕ್ಷ ಸುನಿಲ್ ಮಹಾಂತ ಶೆಟ್ಟರ್‌, ನಿಂಗಪ್ಪ ಬನ್ನಿ, ರವಿ ದಂಡಿನ, ಲಂಕಪ್ಪ ಶರಶೂರಿ, ಎಂ.ಎಸ್. ದೊಡ್ಡ ಗೌಡ್ರ, ಪ್ರವೀಣ್ ಬಾಳಿಕಾಯಿ, ಪರಶುರಾಮ ಇಮ್ಮಡಿ, ಜಗದೀಶಗೌಡ ಪಾಟೀಲ, ನವೀನ ಬೆಳ್ಳಟ್ಟಿ, ಹಾಲಪ್ಪ ಸೂರಣಿಗಿ, ಬಸವರಾಜ ಚಕ್ರಸಾಲಿ, ಅನಿಲ ಮುಳುಗುಂದ, ಗಂಗಾಧರ ಮೆಣಸಿನಕಾಯಿ, ನೀಲಪ್ಪ ಹತ್ತಿ, ಎಂ.ಆರ್.ಪಾಟೀಲ, ದುಂಡೇಶ ಕೊಠಡಿ, ಸಿದ್ದನಗೌಡ ಬಳ್ಳೊಳ್ಳಿ, ಶಿವಯೋಗಿ ಅಂಕಲಕೋಟಿ, ವಿಶಾಲ ಬಟಗುರ್ಕಿ ‌ಇದ್ದರು.

PREV

Recommended Stories

3ನೇ ಮಹಡಿಯಿಂದ ಆಯತಪ್ಪಿಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಜೈಲೊಳಗೆ ಡ್ರಗ್ಸ್ ಸಾಗಿಸಲುಯತ್ನ: ವಾರ್ಡನ್ ಬಂಧನ