ಎನ್‌ಸಿಪಿ, ಎಸ್‌ಟಿಪಿ ಅನುದಾನ ವಂಚಿಸಿದ ಕಾಂಗ್ರೆಸ್‌ ಸರ್ಕಾರ

KannadaprabhaNewsNetwork |  
Published : Feb 24, 2024, 02:33 AM IST
ಪೋಟೋ: 23ಎಸ್‌ಎಂಜಿಕೆಪಿ07ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಎಸ್.ಸಿ.ಪಿ. ಹಾಗೂ ಎಸ್.ಟಿ.ಪಿ. ಅನುದಾನವನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ  ಶುಕ್ರವಾರ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಎಸ್.ಸಿ.ಪಿ. ಹಾಗೂ ಎಸ್.ಟಿ.ಪಿ. ಅನುದಾನವನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು. ಕಳೆದ 9 ತಿಂಗಳುಗಳಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರವು ದಲಿತ ಸಮುದಾಯವನ್ನು ವಂಚಿಸುತ್ತ ಬಂದಿದೆ. ಚುನಾವಣೆಯಲ್ಲಿ ದಲಿತರಿಗೆ ಮೀಸಲಾಗಿಟ್ಟಿದ್ದ ೧೧,೧೪೪ ಕೋಟಿ ರೂ ಎಸ್‌ಸಿಎಸ್‌ಪಿ, ಟಿ.ಎಸ್.ಪಿ. ಹಣವನ್ನು ಗ್ಯಾರಂಟಿ ಯೋಜನೆಗಳಲ್ಲಿ ಬಳಕೆ ಮಾಡಲು ವರ್ಗಾಯಿಸಿ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಎಸ್.ಸಿ.ಪಿ. ಹಾಗೂ ಎಸ್.ಟಿ.ಪಿ. ಅನುದಾನವನ್ನು ವಂಚಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಎಸ್ಸಿ, ಎಸ್ಟಿ ಮೋರ್ಚಾದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಯಿತು.

ಕಳೆದ 9 ತಿಂಗಳುಗಳಲ್ಲಿ ಕಾಂಗ್ರೆಸ್ ಆಡಳಿತದ ಸರ್ಕಾರವು ದಲಿತ ಸಮುದಾಯವನ್ನು ವಂಚಿಸುತ್ತ ಬಂದಿದೆ. ಚುನಾವಣೆಯಲ್ಲಿ ದಲಿತರಿಗೆ ಮೀಸಲಾಗಿಟ್ಟಿದ್ದ ೧೧,೧೪೪ ಕೋಟಿ ರೂ ಎಸ್‌ಸಿಎಸ್‌ಪಿ, ಟಿ.ಎಸ್.ಪಿ. ಹಣವನ್ನು ಗ್ಯಾರಂಟಿ ಯೋಜನೆಗಳಲ್ಲಿ ಬಳಕೆ ಮಾಡಲು ವರ್ಗಾಯಿಸಿ ದಲಿತರ ಹಣವನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.ದಲಿತರ ಹಿತರಕ್ಷಣೆ ಮಾಡಬೇಕಾಗಿದ್ದ ಸಮಾಜ ಕಲ್ಯಾಣ ಸಚಿವ ಎಸ್.ಸಿ. ಮಹಾದೇವಪ್ಪ ಅವರು ಈ ಅನ್ಯಾಯದ ವಿರುದ್ಧ ಸೊಲ್ಲೆತ್ತದೇ, ಕಾಂಗ್ರೆಸ್ ಪಾರ್ಟಿಯ ಹಿತಕ್ಕೆ ದಲಿತ ಸಮುದಾಯವನ್ನು ಬಲಿಕೊಟ್ಟು ರಾಜಿಯಾಗಿದ್ದಾರೆ. ಹಾಗೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡಿ ಬರುವುದಿಲ್ಲ. ಆದರೆ, ದಲಿತರ ಹಣವನ್ನು ಬಳಸಲು ಇವರಿಗೆ ಬರುತ್ತದೆ. ಮೊರಾರ್ಜಿ ದೇಸಾಯಿ ಶಾಲೆಗಳ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಿದ್ದ ಟ್ಟ ಹಣವು ಕೂಡ ಇತರೇ ಯೋಜನೆ ಬಳಕೆಯಾಗಿದೆ. ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವೂ ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಎಸ್.ದತ್ತಾತ್ರಿ, ಮಾಲತೇಶ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ರಾಮನಾಯ್ಕ ಕೋಹಳ್ಳಿ, ಲಿಂಗರಾಜ್, ಎಂ.ರಾಜು, ಎಚ್.ಶಿವಾಜಿ, ನಗರಾಧ್ಯಕ್ಷ ಎಂ.ವಿಜಯೇಂದ್ರ, ಎಚ್.ಎನ್. ಮಂಜುನಾಥ್, ಎಸ್.ಟಿ. ಮೋರ್ಚಾ ನಗರಾಧ್ಯಕ್ಷ ಹರೀಶ್, ಅಯ್ಯಪ್ಪ, ಧನಂಜಯ್ಯ ಗುಡ್ಡಪ್ಪ ಇತರರಿದ್ದರು.

- - - -23ಎಸ್‌ಎಂಜಿಕೆಪಿ07:

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ