ಕಾಂಗ್ರೆಸ್‌ ಸರ್ಕಾರ ಸರಿಯಾಗಿ ವಾದ ಮಂಡಿಸಲಿಲ್ಲ: ಜೋಶಿ ಟೀಕೆ

KannadaprabhaNewsNetwork |  
Published : Feb 18, 2024, 01:33 AM IST
ಜೋಶಿ | Kannada Prabha

ಸಾರಾಂಶ

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಮೊದಲಿನಿಂದಲೂ ಸಹಾನುಭೂತಿ (ಸಿಂಪತಿ) ಇತ್ತು. ಹಾಗಾಗಿ, ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 106 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಟೀಕಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದರು.

ಕಾಂಗ್ರೆಸ್ ಯತ್ನಿಸುತ್ತಿತ್ತು:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಆರೋಪಿಗಳ ಬಿಡುಗಡೆಗಾಗಿ ಲೇಟರ್ ಕೊಡುವುದು, ಒತ್ತಾಯ ಮಾಡುವುದು ನಡದೇ ಇತ್ತು. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಮೇಲೆ ದೇಶ ದ್ರೋಹದ ಆರೋಪಗಳಿದ್ದವು. ಇಂಥವರನ್ನು ಕಾಂಗ್ರೆಸ್ ಸರ್ಕಾರ, ಸರಿಯಾಗಿ ವಾದ ಮಂಡಿಸದೆ ಬಿಡುಗಡೆಗೊಳಿಸಿದೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಸರ್ಕಾರ ಅನುಭವಿಸಲಿದೆ ಎಂದು ಎಚ್ಚರಿಸಿದರು.

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಲ್ಲು ತೂರಾಟ ಮಾಡಿ ಪೊಲೀಸ್ ವಾಹನಗಳು ಜಖಂ ಗೊಳಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿಗೊಳಿಸಿದ್ದರು. ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಇವರ ಬಿಡುಗಡೆಗೆ ಸಹಕರಿಸಿದೆ ಎಂದು ಕಿಡಿಕಾರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಗಳಿಂದ ಮಕ್ಕಳ ಶಿಕ್ಷಣ ಕಸಿಯುವ ಹುನ್ನಾರ
ಭಾರತದ ಭವಿಷ್ಯ ವರ್ಗ ಕೋಣೆಯಲ್ಲಿದೆ