ಸಾವಿನ ಭಾಗ್ಯವನ್ನೇ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ

KannadaprabhaNewsNetwork |  
Published : Jan 05, 2025, 01:31 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರು ಹಾಗೂ ಶಿಶುಗಳ ಮರಣ ಖಂಡಿಸಿ ಶನಿವಾರ ಜಿಲ್ಲಾಕಾರಿಗಳ ಕಚೇರಿ ಎದುರು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿಪಾಲೊ್ಲ್ಗೊಂಡ ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ ಮತ್ತು ಸಾವಿನ ಭಾಗ್ಯವನ್ನೇ ನೀಡುತ್ತಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಪ್ರತಿಭಟನೆ ವೇಳೆ ಮಾತನಾಡಿದರು.

ಬಾಣಂತಿಯರು, ಶಿಶುಗಳ ಮರಣ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಆತ್ಮಹತ್ಯೆ ಮತ್ತು ಸಾವಿನ ಭಾಗ್ಯವನ್ನೇ ನೀಡುತ್ತಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರು ಹಾಗೂ ಶಿಶುಗಳ ಮರಣ ಖಂಡಿಸಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಶಿವಮೊಗ್ಗದ ಚಂದ್ರಶೇಖರ್, ಕಾಂಗ್ರೆಸ್ ಶಾಸಕನ ಪುತ್ರನ ಕಿರುಕುಳದಿಂದ ಪಿಎಸ್‌ಐ ಪರಶುರಾಮ್, ಬೆಳಗಾವಿ ಸಚಿವರ ಪಿಎ ಕಿರುಕುಳದಿಂದ ಅಲ್ಲಿನ ತಹಸೀಲ್ದಾರ್ ಕಚೇರಿ ಎಸ್‌ಡಿಎ, ಗುಲ್ಬರ್ಗಾದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬಲಗೈ ಬಂಟನ ಕಿರುಕುಳದಿಂದ ಸಚಿನ್ ಪಾಂಚಾಳ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.ಇದರ ಜೊತೆಗೆ ರಾಜ್ಯದಲ್ಲಿ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದಾಗಿ ಬಾಣಂತಿಯರ ಸರಣಿ ಸಾವು ಸಂಭವಿಸಿದೆ. ಇದಲ್ಲದೆ, ಸಾವಿರಕ್ಕೂ ಹೆಚ್ಚು ನವಜಾತ ಶಿಶುಗಳ ಸಾವು ಆಗಿದೆ. ಆದರೂ ಈ ಸರ್ಕಾರದಲ್ಲಿ ಯಾರಿಗೂ ಕಿಂಚಿತ್ ಜವಾಬ್ದಾರಿ ಇಲ್ಲ. ಇದೊಂದು ಲಜ್ಜೆಗಟ್ಟ ಸರ್ಕಾರ. ಈ ಪ್ರಮಾಣದ ಸಾವುಗಳನ್ನು ಹಿಂದಿನ ಯಾವುದೇ ಸರ್ಕಾರದಲ್ಲಿ ಜನರು ನೋಡಿರಲಿಲ್ಲ ಎಂದು ಕಿಡಿಕಾರಿದರು.ಈ ಸರ್ಕಾರಕ್ಕೆ ಕಂದಮ್ಮಗಳ ಹಾಗೂ ಬಾಣಂತಿಯರ ಶಾಪ ತಟ್ಟುತ್ತದೆ ಎಂದು ಎಚ್ಚರಿಕೆ ನೀಡಿದರು.ಅಧಿಕಾರದ ಅಮಲಿನಲ್ಲಿರುವ ದುಷ್ಟ ಸರ್ಕಾರ ಇದು. ಅತ್ಯಂತ ಭಂಡ ಸರ್ಕಾರವನ್ನು ಜನರು ನೋಡುತ್ತಿದ್ದಾರೆ. ಕೂಡಲೇ ಮೃತಪಟ್ಟಿರುವ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರು. ಪರಿಹಾರ ಘೋಷಣೆ ಮಾಡಬೇಕು. ಅನಾಥವಾಗಿರುವ ಮಕ್ಕಳನ್ನು ಸರ್ಕಾರವೇ ದತ್ತು ತೆಗೆದುಕೊಂಡು ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಬೇಕೆಂದು ಆಗ್ರಹಿಸಿದರು.ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮಾತನಾಡಿದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಹಿಳಾ ಮೋರ್ಚಾ ಜಿಲಾಧ್ಯಕ್ಷೆ ಗಾಯತ್ರಿ ದೇವಿ ಮಲ್ಲಪ್ಪ, ಪ್ರಮುಖರಾದ ಕೆ.ಜಿ.ಕುಮಾರಸ್ವಾಮಿ, ಎಸ್.ದತ್ತಾತ್ರಿ, ಮಾಲತೇಶ್, ಸುರೇಖಾ ಮುರುಳೀಧರ, ಡಾ.ಶ್ರೀನಿವಾರ ರೆಡ್ಡಿ, ಹರಿಕೃಷ್ಣ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ