ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಟಿಎಪಿಸಿಎಂಎಸ್ ರೈಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ಕಳೆದ ವರ್ಷ ನಾಗಮಂಗಲ, ಈಗ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಗಲಭೆ ಉಂಟಾಗಿದ್ದು, ಕಾಂಗ್ರೆಸ್ಸಿನರು ಮಂಡ್ಯ ಜಿಲ್ಲೆಯನ್ನು ಹೀನಾಯ ಸ್ಥಿತಿಗೆ ತಳ್ಳುವ ಕೆಲಸ ಮಾಡಿದ್ದಾರೆ ಎಂದರು.
ಬಿಜೆಪಿ-ಜೆಡಿಎಸ್‌ನವರಿಗೆ ಮಾಡಲು ಕೆಲಸವಿಲ್ಲ, ಕುತಂತ್ರ ಮಾಡ್ತಾರೆ ಎಂಬುದಾಗಿ ಹೇಳುತ್ತಾರೆ. ಶೇ.95ರಷ್ಟು ಹಿಂದುಗಳೇ ಇರುವ ಜಿಲ್ಲೆಯ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ದೊಡ್ಡ ಅಪರಾಧ ಎಸಗಿದರು. ಕಳೆದ ವರ್ಷ ನಾಗಮಂಗಲದಲ್ಲಿ ಗಣಪತಿಯನ್ನು ಬಸ್‌ನಲ್ಲಿ ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಪರಿಸ್ಥಿತಿಯನ್ನು ಜಿಲ್ಲಾ ಉಸ್ತುವಾರಿ ಮಂತ್ರಿಗಳು ನಿರ್ಮಾಣ ಮಾಡಿದರು ಎಂದು ದೂರಿದರು.ಚನ್ನಪಟ್ಟಣದಿಂದ ಬಂದ ಕಿಡಿಗೇಡಿಗಳು ಮೆರವಣಿಗೆ ವೇಳೆ ಗಣಪತಿಗೆ ಕಲ್ಲು ಎಸೆದು ಜಿಲ್ಲೆಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಇದನ್ನು ಮುಸ್ಲಿಂ ನಾಯಕರೇ ಒಪ್ಪಿಕೊಂಡಿದ್ದಾರೆ. ಈ ಬಾರಿ ಮದ್ದೂರಿನ ಜನ ನೆಮ್ಮದಿ ಕಳೆದುಕೊಳ್ಳುವಂತೆ ಮಾಡಿದ್ದೀರಿ ಎಂದು ಆರೋಪಿಸಿದರು.
ಜೈಲಿಗೆ ಕಳುಹಿಸಲು ಹುನ್ನಾರ:
ಆದರೆ, ಈ ಪ್ರಕರಣದಲ್ಲಿ ನನ್ನ ವಿರುದ್ಧ ಸಂಚು ಮಾಡಿ ಸಿಲುಕಿಸುವ ಸಲುವಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರು. ರಾಜ್ಯ ಉಚ್ಚ ನ್ಯಾಯಾಲಯ ಮತ್ತು ಸುಪ್ರೀಂ ಕೋರ್ಟ್ ನನಗೆ ನಿರಪರಾಧಿ ಎಂದು ನ್ಯಾಯ ಸಿಕ್ಕಿದೆ. ಮುಂದೆಯೂ ಕೊನೆಯ ಉಸಿರು ಇರುವ ತನಕ ನನ್ನ ಜನತೆ ಪರವಾಗಿ ಕೆಲಸ ಮಾಡಿ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದರು.
2023ರ ವಿಧಾನಸಭಾ ಚುನಾವಣೆಯಲ್ಲಿ ನನಗೆ 82 ಸಾವಿರ ಮತದಾರರ ಆಶೀರ್ವಾದ ಮಾಡಿದರಿಗಾಗಿ ಬದುಕುತ್ತೇನೆ. ನಿಖಿಲ್ ಕುಮಾರಸ್ವಾಮಿ ಅವರು 8 ವಿಧಾನಸಭಾ ಕ್ಷೇತ್ರಗಳಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಪಾಂಡವಪುರದಲ್ಲಿ ಆಯೋಜಿಸಲು ನಿಖಿಲ್ ಕುಮಾರಸ್ವಾಮಿ ಅವರ ಬಳಿ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುವುದು ಎಂದರು.