ಕಾಂಗ್ರೆಸ್‌ ಸರ್ಕಾರ ಆಡಳಿತ ವಿಫಲ: ಬಿ.ವೈ. ವಿಜಯೇಂದ್ರ

KannadaprabhaNewsNetwork |  
Published : Jan 18, 2026, 03:15 AM IST
೧೭ ಇಳಕಲ್ಲ ೨ | Kannada Prabha

ಸಾರಾಂಶ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರಕಾರ ಜನತೆಗೆ ಉತ್ತಮ ಆಡಳಿತ ಕೊಡುವಲ್ಲಿ ವಿಫಲವಾಗಿದೆ. ಮಹಳೆಯರಿಗೆ ಉಚಿತ ಭಾಗ್ಯ ಕೊಡುತ್ತಿದ್ದೇವೆ ಎಂದು ಹೇಳುತ್ತ ಎಲ್ಲ ದರ ಹೆಚ್ಚಳ ಮಾಡಿ ಜನರಿಗೆ ಬೆಲೆ ಏರಿಕೆ ಹೊರೆ ಹೊರಿಸಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ರಾಜ್ಯದ ಜನತೆ ಬೇಸತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಇಳಕಲ್ಲ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರಕಾರ ಜನತೆಗೆ ಉತ್ತಮ ಆಡಳಿತ ಕೊಡುವಲ್ಲಿ ವಿಫಲವಾಗಿದೆ. ಮಹಳೆಯರಿಗೆ ಉಚಿತ ಭಾಗ್ಯ ಕೊಡುತ್ತಿದ್ದೇವೆ ಎಂದು ಹೇಳುತ್ತ ಎಲ್ಲ ದರ ಹೆಚ್ಚಳ ಮಾಡಿ ಜನರಿಗೆ ಬೆಲೆ ಏರಿಕೆ ಹೊರೆ ಹೊರಿಸಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ರಾಜ್ಯದ ಜನತೆ ಬೇಸತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಲೋಕಾಪುರದಿಂದ ಬಳ್ಳಾರಿಗೆ ಪ್ರಯಾಣಿಸುವ ಮಾರ್ಗದಲ್ಲಿ ಶುಕ್ರವಾರ ರಾತ್ರಿ ಶಾಸಕ ದೊಡ್ಡನಗೌಡರ ಪಾಟೀಲರ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿರುವ ಕಾಂಗ್ರೆಸ್‌ ಸರಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಎಲ್ಲ ಸಮಸ್ಯೆಗಳಿಗೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದೆ. ರಾಜ್ಯದ ಜನರ ಸಮಸ್ಯೆ ಪರಿಹರಿಸಲು ತನ್ನಿಂದ ಆಗದೇ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಿದೆ. ಇಂತಹ ಸರ್ಕಾರ ರಾಜ್ಯಕ್ಕೆ ಏಕೆ ಬೇಕು ಎಂದು ಪ್ರಶ್ನಿಸಿದರು.

ದೇಶದ ಜನತೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತ ಮೆಚ್ಚಿ ದೇಶದ ಅನೇಕ ರಾಜ್ಯಗಳ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿದ್ದಾರೆ. ನಿನ್ನೆ ನಡೆದ ನಡೆದ ಮಾಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯನ್ನು ಅಭೂತಪೂರ್ವಕವಾಗಿ ಗೆಲುವು ತಂದುಕೊಟ್ಟಿದ್ದಾರೆ. ರಾಜ್ಯದಲ್ಲೂ ನಡೆದ ನಗರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಯಲ್ಲೂ ಬಿಜೆಪಿ ಬಾವುಟ ಹಾರಿಸಿದೆ ಎಂದ ಅವರು, ತಮ್ಮನ್ನು ನೋಡಲು ಸೇರಿದ ಅಪಾರ ಜನರತ್ತ ಕೈಬೀಸಿ, ನಮಸ್ಕರಿಸಿ ನಿಮ್ಮ ಆಶೀರ್ವಾದ ಸದಾ ನಮ್ಮ ಮೇಲಿರಲಿ ಎಂದು ಮನವಿ ಮಾಡಿದರು.

ಇದೇ ವೇಳೆಯಲ್ಲಿ ನಗರಕ್ಕೆ ಬಂದ ವಿಜೇಯೆಂದ್ರ ಅವರನ್ನು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಅಪಾರ ಕಾರ್ಯಕರ್ತರು ಗೌರವಿಸಿ ಸತ್ಕರಿಸಿದರು. ಸಮಾರಂಭದಲ್ಲಿ ಯುವ ನಾಯಕ ರಾಜುಗೌಡ ಪಾಟೀಲ, ತಾಲೂಕು ಅಧ್ಯಕ್ಷ ಮಹಾಂತಗೌಡ ಪಾಟೀಲ, ಶಿವನಗೌಡ ಅಗಸಿಮುಂದಿನ, ವಿರೇಶ ಉಂಡೋಡಿ ಹಾಗೂ ಬಿಜೆಪಿ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು, ವಿಜೇಯೆಂದ್ರ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾಡಳಿತ ಸಂಧಾನ ಸಭೆ ವಿಫಲ; ನಾಳೆ ಮಹಾಲಿಂಗಪುರ ಬಂದ್
ಟೀಮ್ ಒನ್ ಟಚ್ ಚಾಂಪಿಯನ್