2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ: ರಾಜೀವ್ ಗೌಡ

KannadaprabhaNewsNetwork |  
Published : Oct 24, 2026, 01:30 AM IST
ಸುದ್ದಿ ಚಿತ್ರ ೧ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ನಗರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ | Kannada Prabha

ಸಾರಾಂಶ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ನೆರವಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತದಾರರ ಒಲವು: ವಿಶ್ವಾಸ

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

2028 ರ ವಿಧಾನಸಭಾ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಿಳಿಸಿದರು.ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ನಗರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿ ಭರವಸೆಗಳನ್ನು ಅಧಿಕಾರಕ್ಕೆ ಬಂದ ಬಳಿಕ ಈಡೇರಿಸಲಾಗಿದೆ ಎಂದರು.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ನೆರವಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದರು.ರಾಜ್ಯದಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ 70 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಯುವಜನರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ರಾಜ್ಯಕ್ಕೆ ಹಲವು ಪ್ರತಿಷ್ಠಿತ ಕಂಪನಿಗಳನ್ನು ಆಕರ್ಷಿಸುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದರಿಂದ ಯುವಜನರಿಗೆ ಹೆಚ್ಚಿನ ಅವಕಾಶಗಳು ದೊರೆಯಲಿದ್ದು, ಕರ್ನಾಟಕವು ಅಭಿವೃದ್ಧಿಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಯುವಜನರ ಪರವಾಗಿ ಶಶಿ ಹುಳಿಕುoಟೆ ಮಠ್ ಧ್ವನಿ:ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿಹುಲಿಕುಂಟೆ ಮಠ್‌ ಅವರು ವಿದ್ಯಾರ್ಥಿ ದೆಸೆಯಿಂದಲೇ ಎನ್‌ಎಸ್‌ಯುಐ ಹಾಗೂ ಯುವ ಕಾಂಗ್ರೆಸ್ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಯಲ್ಲಿ ಅನುಭವ ಪಡೆದಿದ್ದಾರೆ. ಪದವೀಧರರು, ಶಿಕ್ಷಕರು ಮತ್ತು ಯುವಜನರ ಸಮಸ್ಯೆಗಳನ್ನು ಅರಿತುಕೊಂಡಿರುವ ಅವರು, ಮುಂಬರುವ ದಿನಗಳಲ್ಲಿ ಅವರ ಪರವಾಗಿ ವಿಧಾನ ಪರಿಷತ್ತಿನಲ್ಲಿ ಧ್ವನಿಯೆತ್ತಲಿದ್ದಾರೆ. ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಿ ಯುವಜನರ ಹಕ್ಕುಗಳಿಗಾಗಿ ಹೋರಾಟ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದ ಪದವೀಧರ ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷೆ ಸಹನಾ ರಾಜೀವ್‌ ಗೌಡ, ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು

ಸುದ್ದಿ ಚಿತ್ರ ೧

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ನಗರದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಅಂತಾರಾಷ್ಟ್ರೀಯ ಬೌದ್ದ ಮಹಾಸಮ್ಮೇಳನ
ಬೆಳೆ, ಕೃಷಿ ಸಾಲ ಬಲವಂತ ವಸೂಲಿ ಸಲ್ಲ: ಜಿಲ್ಲಾಧಿಕಾರಿ ಶ್ರೀರೂಪ