ಮಸ್ಕಿಯಲ್ಲಿ ಗಾಂಧಿನಗದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ 22 ಲಕ್ಷಕ್ಕೂ ಅಧಿಕ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್, ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿದರು.
ಕನ್ನಡಪ್ರಭ ವಾರ್ತೆ ಮಸ್ಕಿರಾಜ್ಯದಲ್ಲಿ ಜನರ ಆಶೀರ್ವಾದದೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸರ್ಕಾರ ಬಡ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತದೆ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಪಟ್ಟಣದಲ್ಲಿ ಪುರಸಭೆಯ 22 ಲಕ್ಷಕ್ಕೂ ಅಧಿಕ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್ ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಯಾರೂ ಕೂಡ ಉಪವಾಸದಿಂದ ಇರಬಾರದು ಎನ್ನುವ ಸದುದ್ದೇಶದಿಂದ ಅನ್ನಭಾಗ್ಯ ಯೋಜನೆ ಹಾಗೂ ಇಂದಿರಾ ಕ್ಯಾಂಟೀನ್‌ಗಳನ್ನು ಜಾರಿಗೆ ತರುವ ಮೂಲಕ ಬಡಜನರ ಪರವಾಗಿ ಇದ್ದಾರೆ ಎಂದರು.
ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಿಂದ ಬರುವ ಜನರಿಗೆ ಅನೂಕೂಲವಾಗಲೆಂದು ಇಂದಿರಾ ಕ್ಯಾಂಟೀನ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ, ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಜಿಲ್ಲಾ ಉಪಾಧ್ಯಕ್ಷ ವೆಂಕಟರಡ್ಡಿ, ಮಾಜಿ ಜಿಪಂ ಅಧ್ಯಕ್ಷ ಶ್ರೀಶೈಲಪ್ಪ ಬ್ಯಾಳಿ, ಮುಖಂಡರು ಸೇರಿದಂತೆ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.