ಕನ್ನಡಪ್ರಭ ವಾರ್ತೆ, ಭದ್ರಾವತಿ
ನಗರದ ಶಾಸಕರ ಗೃಹ ಕಚೇರಿ ಆವರಣದಲ್ಲಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಧ್ವಜಾರೋಹಣ ಮತ್ತು ಪ್ರತಿಜ್ಞೆ ಸ್ವೀಕಾರ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸದಾ ದೇಶದ ಜನರ ಹಿತರಕ್ಷಣೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಸರ್ಕಾರ ಅನುಷ್ಠಾನಗೊಳಿಸಿರುವ ಅಭಿವೃದ್ಧಿ ಕಾರ್ಯಗಳು, ರೂಪಿಸಿರುವ ಯೋಜನೆಗಳು ಇಂದಿಗೂ ದೇಶಕ್ಕೆ ಮಾದರಿಯಾಗಿವೆ ಎಂದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯಮಿಗಳ ಪರವಾಗಿದೆಯೇ ಹೊರತು, ರೈತಪರವಾಗಿಲ್ಲ. ರೈತರ ಸಾಲಮನ್ನಾ ನಿರ್ಲಕ್ಷಿಸುವ ಕೇಂದ್ರ ಸರ್ಕಾರ, ಉದ್ಯಮಿಗಳ ಸಾಲಮನ್ನಾಕ್ಕೆ ಆಸಕ್ತಿ ತೋರುತ್ತದೆ. ಇದು ಜನಪರ ಕಾಳಜಿ ಇಲ್ಲದ ಸ್ವಾರ್ಥ ಸರ್ಕಾರ ಎಂದು ಆರೋಪಿಸಿದರು.ಸಂಘರ್ಷ ಸೃಷ್ಟಿಸಬಾರದು:
ಪಕ್ಷದ ಹಿರಿಯ ಮುಖಂಡರಾದ ಬಲ್ಕೀಷ್ ಬಾನು ಮಾತನಾಡಿ, ದೇಶ ಸಂಕಷ್ಟದಲ್ಲಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದಿರುವಂತೆಯೇ ರಾಷ್ಟ್ರದಲ್ಲೂ ಬಿಜೆಪಿ ಕಿತ್ತೊಗೆಯಲು ಕಾರ್ಯಕರ್ತರು ಪಣತೊಡೋಣ. ಪಕ್ಷ ಇದ್ದರೆ ಕಾರ್ಯಕರ್ತರು ಎಂಬುದನ್ನು ಎಲ್ಲಾ ಕಾರ್ಯಕರ್ತರು ತಿಳಿದುಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಶಾಸಕರ ಆಪ್ತ ಸಹಾಯಕ ಈಶ್ವರ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಶಾಸಕರು ಧ್ವಜಾರೋಹಣ ನೆರವೇರಿಸಿದ ನಂತರ ಸಭಾ ಕಾರ್ಯಕ್ರಮ ನಡೆಸಲಾಯಿತು.
ಪಕ್ಷದ ಮುಖಂಡರಾದ ಸುಕನ್ಯಾ, ಸಿ.ಎಂ. ಸಾಧಿಕ್, ಚನ್ನಪ್ಪ, ಎಚ್.ರವಿಕುಮಾರ್, ಬಿ.ಗಂಗಾಧರ್, ಅಮೀರ್ ಜಾನ್, ಲಕ್ಷ್ಮೀದೇವಿ, ಅಂತೋಣಿ ವಿಲ್ಸನ್ ಇನ್ನಿತರರು ಉಪಸ್ಥಿತರಿದ್ದರು. ಸಿ.ಜಯಪ್ಪ ಕಾರ್ಯಕ್ರಮ ನಿರೂಪಿಸಿ, ಜುಂಜ್ಯಾನಾಯ್ಕ ವಂದಿಸಿದರು.
ಭದ್ರಾವತಿಯಲ್ಲಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಪಕ್ಷದ ಧ್ವಜಾರೋಹಣ ನೆರವೇರಿಸಿದರು.