ಕಾಂಗ್ರೆಸ್‌ ಸರ್ಕಾರ ಶಿಕ್ಷಕರ ಸಮಸ್ಯೆ ನಿವಾರಿಸುತ್ತಿದೆ

KannadaprabhaNewsNetwork |  
Published : May 12, 2024, 01:15 AM ISTUpdated : May 12, 2024, 01:16 AM IST
ಪತ್ರಿಕಾಗೋಷ್ಠಿ | Kannada Prabha

ಸಾರಾಂಶ

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ರನ್ನು ಬೆಂಬಲಿಸುವಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ತುಮಕೂರುಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್‌ರನ್ನು ಬೆಂಬಲಿಸುವಂತೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮನವಿ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಡಿ.ಟಿ. ಶ್ರೀನಿವಾಸ್ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು, ತಳಮಟ್ಟದಿಂದ ಶಿಕ್ಷಕರ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಚುನಾವಣೆಯಲ್ಲಿ ಗೆದ್ದ ಬಳಿಕ ಶಿಕ್ಷಕರ ಸಮಸ್ಯೆಗಳ ಧ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.ಆಗ್ನೇಯ ಶಿಕ್ಷಕ ಕ್ಷೇತ್ರದಲ್ಲಿ 23,514 ಮಂದಿ ಮತದಾರರು ನೋಂದಣೆಯಾಗಿದ್ದು, ತುಮಕೂರು ಜಿಲ್ಲೆಯಿಂದ 7599, ಚಿತ್ರದುರ್ಗ ಜಿಲ್ಲೆಯಿಂದ 4615, ಕೋಲಾರ ಜಿಲ್ಲೆಯಿಂದ 4149, ದಾವಣಗೆರೆ ಜಿಲ್ಲೆಯಿಂದ 3984, ಚಿಕ್ಕಬಳ್ಳಾಪುರ ಜಿಲ್ಲೆಯಿಂದ 3510 ಮತದಾರರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.ಜೂ.3 ರಂದು ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಗೆ 6 ಸ್ಥಾನಗಳಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಇವರೆಲ್ಲರನ್ನು ಗೆಲ್ಲಿಸಬೇಕು. ಜೂ. 13 ರಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸುವರು. ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಸಚಿವರು, ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

2018ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಅಂದಿನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ಸೇಠ್, ಶಿಕ್ಷಕರ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಹಾಗೂ ಶಿಕ್ಷಣ ಇಲಾಖೆ ಪ್ರಮುಖ ಅಧಿಕಾರಿಗಳೊಂದಿಗೆ ನಿರಂತವಾಗಿ 2 ಬಾರಿ ಸಭೆ ನಡೆಸಿ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿದ್ದರು ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧುಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.ಪ್ರಸಕ್ತ ಸಾಲಿನ ಅಯವ್ಯಯದಲ್ಲಿ 44,422 ಕೋಟಿ ರು. ಹಣವನ್ನು ಶಿಕ್ಷಕ ಕ್ಷೇತ್ರಕ್ಕೆ ಮೀಸಲಿಟ್ಟಿದ್ದು, ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ 850 ಕೋಟಿ ರು. ಅನುದಾನವನ್ನು ಒದಗಿಸಿದ್ದಾರೆ. ಇದರೊಂದಿಗೆ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಂಡಿದ್ದಾರೆ. ಶಿಕ್ಷಕರು, ಉಪನ್ಯಾಸಕರ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಶ್ರಮಿಸುತ್ತಿದೆ ಎಂದರು.ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಷಣ್ಮುಖಪ್ಪ, ದಿವಾಕರ್, ಲೋಕೇಶ್, ಸುಜಾತ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ