ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ: ಶಾಸಕಿ ಜೊಲ್ಲೆ

KannadaprabhaNewsNetwork | Published : Mar 27, 2025 1:03 AM

ಸಾರಾಂಶ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿದ್ದಾರೆಂದರೇ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ತಿರಸ್ಕಾರವಿದೆ. ಇಂತಹ ಹೇಳಿಕೆಯನ್ನು ಜನ ಸಹಿಸುವುದಿಲ್ಲ ಎಂದು ಶಾಸಕಿ ಶಶಿಕಲಾ ಜೊಲ್ಲೆ ಕಿಡಿಕಾರಿದರು.

ಕನ್ನಡಪ್ರಭ ವಾರ್ತೆ ನಿಪ್ಪಾಣಿ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿಯಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉದ್ದೇಶಪೂರ್ವಕವಾಗಿ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿದ್ದಾರೆಂದರೇ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ತಿರಸ್ಕಾರವಿದೆ. ಇಂತಹ ಹೇಳಿಕೆಯನ್ನು ಜನ ಸಹಿಸುವುದಿಲ್ಲ ಎಂದು ಶಾಸಕಿ ಶಶಿಕಲಾ ಜೊಲ್ಲೆ ಕಿಡಿಕಾರಿದರು.

ನಗರ ಹಾಗೂ ಗ್ರಾಮಾಂತರ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹಿಸಿ ಮಾತನಾಡಿದ ಅವರು, ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠವಾಗಿದೆ. ಕೇವಲ ಅಭಿಪ್ರಾಯಕ್ಕಾಗಿ ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನ ತಿದ್ದುಪಡಿ ಕುರಿತು ರಾಜ್ಯದ ಉಪಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯ ಸಮಸ್ಯೆ ಇದ್ದು, ಮಹಿಳೆಯರು ಮತ್ತು ಯುವತಿಯರ ಸುರಕ್ಷತೆ ಅಪಾಯದಲ್ಲಿದೆ ಎಂಬ ಹಲವು ಪ್ರಶ್ನೆಗಳಿರುವಾಗಲೇ ಡಿಸಿಎಂ ಮೀಸಲಾತಿ ಕುರಿತು ನೀಡಿರುವ ಹೇಳಿಕೆ ಉದ್ದೇಶಪೂರ್ವಕವಾಗಿ ತಪ್ಪು. ಪ್ರತಿ ಸಮುದಾಯಕ್ಕೆ ಮೀಸಲಾತಿ ಸಿಗಬೇಕು. ಆದರೆ, ಒಂದನ್ನು ತೆಗೆದುಕೊಂಡು ಇನ್ನೊಬ್ಬರಿಗೆ ನೀಡುವುದು ಅನ್ಯಾಯ. ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶಗೊಂಡಿದ್ದಾರೆ. ಮುಂದಿನ ಅವಧಿಯಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.ಸ್ಥಳೀಯ ನಗರಸಭೆ ಅಧ್ಯಕ್ಷೆ ಸೋನಲ್ ಕೊಠಡಿಯಾ, ಅಭಯ ಮಾನವಿ, ಶ್ರೀಕಾಂತ್ ಬನ್ನೆ, ಪ್ರಣವ್ ಮಾನವಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದರು. ಬಳಿಕ ಧರ್ಮವೀರ ಸಂಭಾಜಿರಾಜೆ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷ ಸಂತೋಷ ಸಾಂಗಾವಕರ, ಎಸ್.ಎಸ್.ಧವಣೆ, ರಾಜು ಗುಂಡೇಶ, ಅವಿನಾಶ ಪಾಟೀಲ, ಸಮಿತ ಸಾಸನೆ, ಸುನೀಲ ಪಾಟೀಲ, ರಮೇಶ ಪಾಟೀಲ, ಮಧುಕರ ಪಾಟೀಲ, ಸಾಗರ ಮಿರ್ಜೆ, ರವಿ ಇಂಗವಲೆ, ಸೂರಜ್ ಖವ್ರೆ, ಯೋಗಿತಾ ಘೋರ್ಪಡೆ, ಪ್ರೊ.ವಿಭಾವರಿ ಖಾಂಡಕೆ, ವಿನಾಯಕ ಪಾಟೀಲ, ಎಸ್.ಕೆ.ಖಜ್ಜಣ್ಣವರ, ದಾದಾರಾಜೆ ದೇಸಾಯಿ, ಬಂಡಾ ಘೋರ್ಪಡೆ, ಪ್ರಶಾಂತ ಕೇಸ್ತಿ, ದತ್ತಾ ಜೋತ್ರೆ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

Share this article