ಕನ್ನಡಪ್ರಭ ವಾರ್ತೆ ಮಂಗಳೂರುಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅಪಚಾರವೆಸಗಿರುವುದು ಖಂಡನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ದ್ವೇಷದ ಬೀಜವನ್ನು ಬಿತ್ತುತ್ತಿದ್ದು, ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ರಷ್ಟು ಮುಸ್ಲಿಮರಿಗೆ ಮೀಸಲಾತಿ, ಜಾತಿ ಗಣತಿಯಲ್ಲಿಯೂ ತಾರತಮ್ಯ, ಜನಿವಾರದಂತಹ ಕೃತ್ಯಗಳಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಜನರನ್ನು ಓಲೈಸುತ್ತಿರುವುದು ಕೋಮುವಾದದ ಅತಿರೇಕದ ನಡೆಗಳಾಗಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ರಾಜ್ಯದ ಜನತೆಯ ಕ್ಷಮೆಯಾಚಿಸಿ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.