ಕಾಂಗ್ರೆಸ್‌ ಸರ್ಕಾರದಿಂದ ಶಿಕ್ಷಕರ, ರೈತರ ಸಮಸ್ಯೆ ನಿರ್ಲಕ್ಷ್ಯ: ಬಂಡೆಪ್ಪ ಖಾಶೆಂಪೂರ

KannadaprabhaNewsNetwork |  
Published : Oct 19, 2026, 01:45 AM IST
ಚಿತ್ರ 18ಬಿಡಿಆರ್4ಬೀದರ್‌ನ ಪತ್ರಿಕಾ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜೆಡಿಎಸ್‌, ಬಿಜೆಪಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ ಮಾತನಾಡಿದರು. | Kannada Prabha

ಸಾರಾಂಶ

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್‌ ನಮೋಶಿ ಸಜ್ಜನ ರಾಜಕಾರಣಿಯಾಗಿದ್ದಾರೆ. ಈಗಾಗಲೇ ನಾಲ್ಕು ಬಾರಿ ಗೆದ್ದಿರುವ ಅವರನ್ನು ಮತ್ತೊಮ್ಮೆ ಗೆಲ್ಲಿಸಿಕೊಡುವ ಕೆಲಸ ಶಿಕ್ಷಕರು ಮಾಡಬೇಕೆಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್‌ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಶಶೀಲ್‌ ನಮೋಶಿ ಸಜ್ಜನ ರಾಜಕಾರಣಿಯಾಗಿದ್ದಾರೆ. ಈಗಾಗಲೇ ನಾಲ್ಕು ಬಾರಿ ಗೆದ್ದಿರುವ ಅವರನ್ನು ಮತ್ತೊಮ್ಮೆ ಗೆಲ್ಲಿಸಿಕೊಡುವ ಕೆಲಸ ಶಿಕ್ಷಕರು ಮಾಡಬೇಕೆಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್‌ ಮನವಿ ಮಾಡಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಎನ್‌ಡಿಎ ಮಿತ್ರ ಪಕ್ಷದ ಅಭ್ಯರ್ಥಿ ಪರವಾಗಿ ಆಯೋಜಿಸಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಶೀಲ್‌ ನಮೋಶಿ ಸುಮಾರು ನಾಲ್ಕು ಸಲ ಇದೇ ಕ್ಷೇತ್ರದಿಂದ ಗೆಲವು ಸಾಧಿಸಿ ಶಿಕ್ಷಕರ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಆದ್ದರಿಂದ ಎಲ್ಲಾ ಪ್ರಬುದ್ದ ಮತದಾರ ಶಿಕ್ಷಕರು ಈ ಬಾರಿ ಅವರನ್ನು ಬಹುಮತದಿಂದ ಗೆಲ್ಲಿಸಬೇಕು ಎಂದರು.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೇವಲ ಪಂಚ ಗ್ಯಾರಂಟಿಯಲ್ಲಿ ರಾಜ್ಯದ ರೈತರು ಹಾಗೂ ಶಿಕ್ಷಣ ಇಲಾಖೆಯನ್ನೇ ಮರೆತು ಬಿಟ್ಟಿದೆ. ಶಿಕ್ಷಕರ ವಿಧಾನಸಭಾ ಕ್ಷೇತ್ರ ಎಂಬುವುದು ಬಹಳಷ್ಟು ಮುಖ್ಯವಾದದ್ದಾಗಿದೆ. ಈ ದಿನಗಳಲ್ಲಿ ನಾವು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕಾಗಿದೆ ಎಂದರು.

ಕಳೆದ ಸರ್ಕಾರದಲ್ಲಿ ಸುಮಾರು ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭ ಮಾಡಲಾಗಿತ್ತು. ಆದರೆ ಈಗಿನ ಸರ್ಕಾರ ಕೆಲಸ ಮಾಡುವುದಿರಲಿ, ಇರುವ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕೂಡ ವಿಫಲವಾಗಿದೆ ಎಂದು ಖಾಶೆಂಪುರ್ ಆರೋಪಿಸಿದರು.

ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಸೋಲು ಗ್ಯಾರಂಟಿ: ರಾಜ್ಯದಲ್ಲಿ ನಡೆಯುತ್ತಿರುವ ನಾಲ್ಕು ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಸೋಲುವುದು ಗ್ಯಾರಂಟಿ. ರಾಜ್ಯದಲ್ಲಿ ಬರಪೀಡಿತ ತಾಲೂಕು ಘೋಷಣೆಗಳಾಗಿವೆ, ಮುಖ್ಯಮಂತ್ರಿ ಅವರು ರೈತರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಸಹಾಯ ಮಾಡುವ ಕೆಲಸ ಮಾಡಬೇಕಿದೆ, ನಿಮ್ಮ ಕೈ ಎಲ್ಲೋಗಿದೆ ದಿಲ್ಲಿಯಲ್ಲಿ ಬಿಟ್ಟು ಬಂದಿದ್ದಿರೇನು? ಎಂದು ಪ್ರಶ್ನಿಸಿದರು.

ಎಚ್‌ಡಿಕೆ, ಬಿಎಸ್‌ವೈ ಮಾದರಿಯಲ್ಲಿ ರೈತರ ಸಾಲ ಮನ್ನಾ ಮಾಡಿ: ವರ್ಷಕ್ಕೆ ಒಂದರಿಂದ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿ ಸರ್ಕಾರ ನಡೆಸುತ್ತಿದ್ದೀರಿ ಅದೇ ರೀತಿ ರೈತರಿಗಾಗಿ 50 ಸಾವಿರ ಕೋಟಿ ರು. ಸಾಲ ತೆಗೆದುಕೊಳ್ಳಿ, ಅದನ್ನು ರೈತರಿಗೆ ಉಪಯೋಗ ಮಾಡಿ. ಕುಮಾರಸ್ವಾಮಿರವರು, ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ಹೇಗೆ ರೈತರ ಸಾಲಮನ್ನಾ ಮಾಡಿದ್ರು, ಆ ರೀತಿ ಮಾಡಿ. ನಾವು ವಿರೋಧ ಪಕ್ಷದವರು ನಿಮ್ಮೋಂದಿಗೆ ಇದ್ದೇವೆ ಎಂದು ಬಂಡೆಪ್ಪ ಖಾಶೆಂಪುರ್ ಸರ್ಕಾರಕ್ಕೆ ಸಲಹೆ ನೀಡಿದರು.

ಎಲ್ಲಾ ಶಿಕ್ಷಕರು ಮತದಾನದ ಮುಖಾಂತರ ಈ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಿ, ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ರಮೇಶ ಪಾಟೀಲ್‌ ಸೋಲಪೂರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ್‌, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಮಾಜಿ ಶಾಸಕ ರಘುನಾಥರಾವ್‌ ಮಲ್ಕಾಪೂರೆ, ಶಶಿ ಹೊಸಳ್ಳಿ, ಈಶ್ವರಸಿಂಗ್‌ ಠಾಕೂರ. ಗುರುನಾಥ ಜ್ಯಾಂತಿಕರ್‌, ಪೀರಪ್ಪ ಯರನಳ್ಳಿ, ಅಶೋಕ ಕೋಡಗೆ ಹಾಗೂ ಬಸವರಾಜ ಪವಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಾರಂಪರಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆತೆರೆ
ಮಹಿಳಾ ದಸರಾ: ರಂಗು ರಂಗಿನ ಬಣ್ಣಗಳಿಂದ ರಂಗವಲ್ಲಿ ಚಿತ್ತಾರ ಬಿಡಿಸಿದ ಮಹಿಳೆಯರು