ರಾಜ್ಯ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ

KannadaprabhaNewsNetwork | Published : Dec 6, 2024 8:56 AM

ಸಾರಾಂಶ

ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ ನಡೆಗೆ ಜನರಲ್ಲಿ ಬೇಸರ ಮೂಡಿದೆ. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡದ ಕಾಂಗ್ರೆಸ್ ಸರ್ಕಾರ ನಡೆಗೆ ಜನರಲ್ಲಿ ಬೇಸರ ಮೂಡಿದೆ. ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಜನ ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು. ನಗರದ ಸಪ್ತಗಿರಿ ಬಡಾವಣೆ ಹಾಗೂ ತಾಲೂಕಿನ ಹೆಂದೊರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗೊಂಡನಹಳ್ಳಿ ಮತ್ತು ಗೋಪಿಕುಂಟೆ ಗ್ರಾಮಗಳಲ್ಲಿ ಶಿರಾ ವಿಧಾನಸಭಾ ಕ್ಷೇತ್ರದ ಬೂತ್ ಸಮಿತಿ ನೇಮಕ ಪ್ರಕ್ರಿಯೆಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.2028ರಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಇಂದಿನಿಂದಲೇ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುವ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡುತ್ತಿದ್ದೇವೆ ಎಂದರು.ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪೂರ್ಣಿಮ ಪ್ರಕಾಶ್ ಮಾತನಾಡಿ, ಬಿಜೆಪಿ ಬೂತ್ ಮಟ್ಟದಲ್ಲಿ ಗಟ್ಟಿಯಾಗಬೇಕು. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನಸಾಮಾನ್ಯರ ಮುಂದಿಟ್ಟು, ಜನರನ್ನು ಬಿಜೆಪಿ ಕಡೆ ಹೆಚ್ಚು ಒಲವು ಹೊಂದುವಂತೆ ಮಾಡಿ, ಬಿಜೆಪಿ ಸದಸ್ಯರನ್ನಾಗಿ ಮಾಡಬೇಕು ಎಂದರು.

ಮಧುಗಿರಿ ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷ ಹನುಮಂತೇಗೌಡ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿದ್ದ ವೇಳೆ ಶಿರಾ ಕ್ಷೇತ್ರಕ್ಕೆ ಹೇಮಾವತಿ ನೀರು ಹರಿಸಿ ಮದಲೂರು ಕೆರೆ ಭರ್ತಿ ಮಾಡಿ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇವಲ ರಾಜ್ಯದಲ್ಲಿ ಸಮುದಾಯ ಓಲೈಕೆ ರಾಜಕಾರಣ ನಡೆಯುತ್ತಿದೆ. ಮತದಾರ ಜಾಗೃತರಾಗಬೇಕೆಂದರು.ಬಿ.ಕೆ.ಮಂಜುನಾಥ್, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ನಗರ ಅಧ್ಯಕ್ಷ ಗಿರಿಧರ್, ಜಿಲ್ಲಾ ಪ್ರಧಾನ ಪ್ರಧಾನ ಕಾರ್ಯದರ್ಶಿ ಯಂಜಲಗೆರೆ ಮೂರ್ತಿ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಕೆ.ಎಸ್. ನಾಗರಾಜು, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷ ಎಚ್.ಕೆ. ಕುಮಾರ್, ಜಿಲ್ಲಾ ಘಟಕ ಅಧ್ಯಕ್ಷ ರಂಗಸ್ವಾಮಿ, ಶಿರಾ ನಗರ ಪ್ರಧಾನ ಕಾರ್ಯದರ್ಶಿ ಸಂತೆಪೇಟೆ ನಟರಾಜ್, ಲತಾ, ಬಿಜೆಪಿ ಓಬಿಸಿ ಘಟಕದ ಅಧ್ಯಕ್ಷ ಮಾಗೋಡ್ ಪ್ರತಾಪ್, ರಂಗಾಪುರ ನಾಗರಾಜ ಗೌಡ, ತರೂರು ಬಸವರಾಜ, ಹೊಸಹಳ್ಳಿ ಸಿದ್ದಲಿಂಗಪ್ಪ, ಶಿರಾ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯರಾದ ನರಸಿಂಹರಾಜು, ಗ್ರಾ ಪಂ ಮಾಜಿ ಅಧ್ಯಕ್ಷ ಈರಣ್ಣ ಪಟೇಲ್, ಸಿದ್ದನಹಳ್ಳಿ ತಿಪ್ಪೇಸ್ವಾಮಿ, ಹೊಸಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನ ಕುಮಾರ್, ಗೋಪಿ ಕುಂಟೆ ಕುಮಾರ್, ಮದಕ್ಕನಹಳ್ಳಿ ಗೊಲ್ಲರಹಟ್ಟಿ ಗೌಡಪ್ಪ, ಸದಸ್ಯ ಎಂ. ಶಿವಲಿಂಗಯ್ಯ ಮಹಾಂತೇಶ್, ಸುರೇಶ್, ರಾಜಣ್ಣ ಹಾಜರಿದ್ದರು.

Share this article