ಕನ್ನಡಪ್ರಭ ವಾರ್ತೆ ಕಲಬುರಗಿ
ಇಂದು ಶಾಸಕಾಂಗ ಮತ್ತು ಕಾರ್ಯಾಂಗದ ನಡುವ ಬಹುದೊಡ್ಡ ಕಂದಕ ನಿರ್ಮಾಣವಾಗಿದ್ದು ಈ ಸರ್ಕಾರವು ತಮ್ಮ ಗ್ಯಾರಂಟಿ ಯೋಜನೆಗಳ ಕಾರ್ಯರೂಪಕ್ಕೆ ತರಲು ಇದೇ ಸರ್ಕಾರಿ ನೌಕರರು ಶ್ರಮಿಸಿದರೂ ಇದೇ ಯೋಜನೆಗಳಿಂದ ಸರ್ಕಾರಿ ನೌಕರರ ವೇತನವನ್ನೂ ನ್ಯಾಯಯುತವಾಗಿ ನೀಡದೆ ಮಾತನ್ನು ತಪ್ಪಿದೆ ಎಂದು ನಮೋಶಿ ದೂರಿದ್ದಾರೆ.
ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. 7ನೇ ವೇತನ ಆಯೋಗದ ವರಧಿ ಜಾರಿ ಮಾಡದೇ ಸರ್ಕಾರಿ ನೌಕರರ ಹಕ್ಕನ್ನು ಕಸಿಯಲಾಗುತ್ತಿದೆ ಎಂದಿದ್ದಾರೆ.ಸರ್ಕಾರಿ ನೌಕರರ ವೇತನಗಳನ್ನು ಪರಿಷ್ಕರಿಸುವ ಸಲುವಾಗಿ ಸಾಮಾನ್ಯವಾಗಿ ಪ್ರತಿ 5 ವರ್ಷಕ್ಕೊಮ್ಮೆ ಹೊಸ ಆಯೋಗವನ್ನು ರಚಿಸಿ ಅದರ ಶಿಫಾರಸ್ಸಿನಂತೆ ವೇತನ ಪರಿಷ್ಕರಿಸುವುದ ಹಿಂದಿನಿಂದಿಲೂ ನಡೆದುಬಂದಿದೆ. ಇದಕ್ಕೂ ಮುನ್ನ ನಮ್ಮ ಭಾ.ಜ.ಪ ನೇತೃತ್ವದ ರಾಜ್ಯ ಸರ್ಕಾರವು ದಿನಾಂಕ: 19-11-2022ರಂದು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರರಾವ್ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚಹಿಸಲಾಯಿತು.
ಈಗಿನ ಕಾಂಗ್ರೆಸ್ ಸರಕಾರ ನೌಕರರಿಗೆ 7ನೇ ವೇತನ ಆಯೋಗ ಜಾರಿ ಹಾಗು ಹಳೇ ಪಿಂಚಣಿ ಹಾಗು ಆರೋಗ್ಯ ವಿಮೆಯ ಕುರಿತು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುತ್ತದೆ ಅಧಿಕಾರಕ್ಕೆ ಬಂದ ನಂತರವೂ ಈಗಿನ ಮುಖ್ಯಮಂತ್ರಿಗಳು ನೌಕರರ ಸಮಾವೇಶಗಳಲ್ಲಿ ನೌಕರರೆದುರಿಗೆ ಆಯೋಗ ಅಂತಿಮ ವರಧಿ ನೀಡಿದ ಕೂಡಲೇ ಅನುಷ್ಠಾನ ಮಾಡುವ ಭರವಸೆ ನೀಡಿದ್ದರು. ಆದರೆ, ರಾಜ್ಯ 7ನೇ ವೇತನ ಆಯೋಗವು ಅಂತಿಮವಾಗಿ ದಿನಾಂಕ: 16-03-2024ರಂದು ಶೇ.27.5 ಫಿಟ್‍ಮೆಂಟ್ ಸೌಲಭ್ಯದೊಂದಿಗೆ ವೇತನ ಪರಿಷ್ಕರಣೆ ಮಾಡಲು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದರೂ ಇಂದಿಗೂ ಕ್ರಮ ಕೈಗೊಳ್ಳುತ್ತಿಲ್ಲ ಯಾಕೆಂದು ನಮೋಶಿ ಪ್ರಶ್ನಿಸಿದ್ದಾರೆ.
ರಾಜ್ಯದ ಸರ್ಕಾರಿ ನೌಕರರ ಹಿತಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದ್ದು ಈ ನೌಕರರು ತಮ್ಮ ಬೇಡಿಕೆಗೆ ಆಗ್ರಹಿಸಿ ನಡೆಯುವ ಹೋರಾಟಗಳಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ನಮೋಶಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.