ರಾಜ್ಯದಲ್ಲಿರುವುದ ಕಾಂಗ್ರೆಸ್‌ನ ‘ಭಾಗ್ಯಗಳ ಸರ್ಕಾರ’

KannadaprabhaNewsNetwork |  
Published : Jul 28, 2025, 12:31 AM IST
26ಬಿಜಿಪಿ-1 | Kannada Prabha

ಸಾರಾಂಶ

ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಜಲ್ ಜೀವನ್ ಮಿಷನ್ ಯೋಜನೆಯಡಿ ದೇಶದ ಗ್ರಾಮೀಣ ಪ್ರದೇಶಗಳ ಮನೆ ಮನೆಗೂ ನಲ್ಲಿ ಮೂಲಕ ಜನರಿಗೆ ಕುಡಿಯುವ ನೀರನ್ನು ಒದಗಿಸುವುದಕ್ಕೆ ಹೆಚ್ಚಿನ ಒತ್ತು ನೀಡಿದೆ. ಅದೇ ರೀತಿ ನಗರ ಪ್ರದೇಶಗಳ ಜನರಿಗೆ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಒದಗಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ರಾಜ್ಯದಲ್ಲಿ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸುಮಾರು 14 ಸಾವಿರ ಕೋಟಿ ರೂ.ಗಳ ವೆಚ್ಚದ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದು ನಗರಾಭಿವೃದ್ದಿ ಮತ್ತು ನಗರ ಯೋಜನಾ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಅಮೃತ್ 2.0 ಯೋಜನೆಯಡಿಯಲ್ಲಿ ಚಿತ್ರಾವತಿ ಜಲಾಶಯದ ಮೂಲದಿಂದ ಬಾಗೇಪಲ್ಲಿ ಪಟ್ಟಣಕ್ಕೆ ಹಾಗೂ ಜಕ್ಕಲಮಡುಗು ಜಲಾಶಯದ ಮೂಲದಿಂದ ಚಿಕ್ಕಬಳ್ಳಾಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಣೆಗೊಳಿಸುವ 60 ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾಗ್ಯಗಳ ಕಾಂಗ್ರೆಸ್‌ ಸರ್ಕಾರ

ರಾಜ್ಯ ಸರ್ಕಾರ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರಿನ ಬದಲಿಗೆ ಭಾಗ್ಯನಗರ ಎಂಬುದಾಗಿ ಮರುನಾಮಕರಣ ಮಾಡಿ ಘೋಷಣೆ ಮಾಡಿದೆ. ಆದರೆ ಹೆಸರಿಗೆ ಭಾಗನಗರವಾದರೆ ಸಾಲದು ಅಗತ್ಯ ಸೌಲತ್ತುಗಳನ್ನು ಸರ್ಕಾರ ಒದಗಿಸಬೇಕು ಎಂಬುದಾಗಿ ಸಂಸದ ಡಾ.ಕೆ.ಸುಧಾಕರ್ ರವರ ಮಾತಿಗೆ ರಾಜ್ಯದಲ್ಲಿ ಭಾಗ್ಯಗಳ ಸರ್ಕಾರ ಎಂದೆ ಹೆಸರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವಿದೆ ಎಂದು ತಿರುಗೇಟು ನೀಡಿದರು.

ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಮಾತನಾಡಿ, ತಾಲೂಕಿನ ಪಾತಪಾಳ್ಯ ಬಳಿ ಸುಮಾರು 189 ಕೋಟಿ ರೂ.ಗಳ ವೆಚ್ಚದಲ್ಲಿ ಗಂಟ್ಲಮಲ್ಲಮ್ಮ ಯೋಜನೆಗೆ ಸರ್ಕಾರ ಅನುದಾನ ಮಂಜೂರಾತಿ ಮಾಡಿದೆ. ಬಾಗೇಪಲ್ಲಿಯಲ್ಲಿ ಸುಮಾರು 1200 ಎಕರೆ ಪ್ರದೇಶದಲ್ಲಿ ಕೈಗಾರಿಕೆ ಪ್ರಾರಂಭಿಸಲು ಶಾಸಕ ಸುಬ್ಬಾರೆಡ್ಡಿ ತಯಾರಿ ನಡೆಸಿದ್ದಾರೆ ಎಂದರು.

ಚಿತ್ರಾವತಿ ಜಲಾಶಯಕ್ಕೆ ಎಸ್ಸೆಂಕೆ ಹೆಸರು

ಸಂಸದ ಡಾ.ಕೆ.ಸುಧಾಕರ್ ಮಾತನಾಡಿ, ಆರೋಗ್ಯ, ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಜಲ್ ಜೀವನ್ ಮಿಷನ್ ಯೋಜನೆಯಡಿ ದೇಶದ ಗ್ರಾಮೀಣ ಪ್ರದೇಶಗಳ ಮನೆ ಮನೆಗೂ ನಲ್ಲಿ ಮೂಲಕ ಜನರಿಗೆ ಕುಡಿಯುವ ನೀರನ್ನು ಒದಗಿಸುವುದಕ್ಕೆ ಹೆಚ್ಚಿನ ಒತ್ತು ನೀಡಿದೆ. ಅದೇ ರೀತಿ ನಗರ ಪ್ರದೇಶಗಳ ಜನರಿಗೆ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರು ಒದಗಿಸಲಾಗುತ್ತಿದೆ. ಚಿತ್ರಾವತಿ ಜಲಾಶಯಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರ ಹೆಸರು ನಾಮಕರಣ ಮಾಡುವಂತೆ ಸಚಿವ ಬೈರತಿ ಸುರೇಶ್ ರವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನರೇಂದ್ರ, ಪುರಸಭೆ ಅಧ್ಯಕ್ಷ ಶ್ರೀನಿವಾಸ್, ಉಪಾದ್ಯಕ್ಷೆ ಎಸ್.ಸುಜಾತಾ ನರಸಿಂಹ ನಾಯ್ಡು, ಸದಸ್ಯರಾದ ನರಸಿಂಹಮೂತಿ, ಶ್ರೀನಿವಾಸರೆಡ್ಡಿ, ಜಿಲ್ಲಾಧಿಕಾರಿ ಡಾ. ಪಿ. ರವೀಂದ್ರ, ಜಿಪಂ ಸಿಇಒ ನವೀನ್ ಭಟ್ ಮತ್ತಿತರರು ಇದ್ದರು.

PREV

Recommended Stories

ರಾಜ್ಯದಲ್ಲಿ 3 ದಿನ ಭಾರೀ ಮಳೆ: 15 ಜಿಲ್ಲೆಗೆ ಯೆಲ್ಲೋ ಅಲರ್ಟ್‌
ವರ್ಗಾವಣೆ ಬಳಿಕ ಪೊಲೀಸರು ವರದಿ ಮಾಡಿಕೊಳ್ಳದಿದ್ದರೆ ಸಂಬಳ ಕಟ್‌ : ವೈದ್ಯಕೀಯ ರಜೆಗೆ ಬ್ರೇಕ್