ಕಾಂಗ್ರೆಸ್‌ ಸರ್ಕಾರದ ಸಾಧನೆಕಾರ್ಯಕ್ರಮವನ್ನು ಯಶಸ್ವಿಗೊಳಿಸಿ

KannadaprabhaNewsNetwork |  
Published : May 17, 2025, 02:07 AM IST
ಗುರುಮಠಕಲ್‌ ಪುರಸಭೆ ಕಾರ್ಯಲಯಕ್ಕೆ ಸಚಿವ ರಹೀಂಖಾನ್ ಬೇಟಿ ನೀಡಿ ಪುರಸಭೆ ಅಧಿಕಾರಿಗಳು, ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಹಲವು ವಿಷಯಗಳ ಕುರಿತು ಚರ್ಚಿಸಿದರು. | Kannada Prabha

ಸಾರಾಂಶ

ಗುರುಮಠಕಲ್‌: ಮೇ 20 ರಂದು ಹೊಸಪೇಟದಲ್ಲಿ ನಡೆಯುವ ಕಾಂಗ್ರೆಸ್ ಸರಕಾರದ 2ನೇ ವರ್ಷದ ಸಾಧನೆಯ ಕುರಿತು ಕಾರ್ಯಕ್ರಮಕ್ಕೆ ಯಾದಗಿರಿ ಮತ್ತು ಗುರುಮಠಕಲ್‌ದಿಂದ ಹೆಚ್ಚಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಪೌರಾಡಳಿತ ಹಾಗೂ ಹಜ್‌ ಸಚಿವರಾದ ರಹೀಂಖಾನ್ ಕಾರ್ಯಕರ್ತರಿಗೆ ಕರೆ ನೀಡಿದರು.

ಗುರುಮಠಕಲ್‌: ಮೇ 20 ರಂದು ಹೊಸಪೇಟದಲ್ಲಿ ನಡೆಯುವ ಕಾಂಗ್ರೆಸ್ ಸರಕಾರದ 2ನೇ ವರ್ಷದ ಸಾಧನೆಯ ಕುರಿತು ಕಾರ್ಯಕ್ರಮಕ್ಕೆ ಯಾದಗಿರಿ ಮತ್ತು ಗುರುಮಠಕಲ್‌ದಿಂದ ಹೆಚ್ಚಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಪೌರಾಡಳಿತ ಹಾಗೂ ಹಜ್‌ ಸಚಿವರಾದ ರಹೀಂಖಾನ್ ಕಾರ್ಯಕರ್ತರಿಗೆ ಕರೆ ನೀಡಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸರಕಾರದ 2ನೇ ವರ್ಷದ ಸಾಧನೆಯ ಕಾರ್ಯಕ್ರಮದ ಗುರುಮಠಕಲ್ ಉಸ್ತುವಾರಿಯನ್ನು ವಹಿಸಿಕೊಂಡು ಕಾರ್ಯಕರ್ತರ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಬಡವರ ಪರವಾಗಿ ಕಾಂಗ್ರೆಸ್ ಸರಕಾರ ಅದ್ಭುತವಾದ ಕೆಲಸಗಳು ಮಾಡುತ್ತಿದೆ ಎಂದರು.ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ರಾಜ್ಯದ ಬಡಜನರ ಹಾಗೂ ದಲಿತರ ಕಲ್ಯಾಣಕ್ಕಾಗಿ ಹಗಲಿರುಳೂ ದುಡಿಯುತ್ತಿದ್ದಾರೆ. ಎಲ್ಲ ಮಹಿಳೆಯರಿಗೆ, ಯುವಕರಿಗೆ ಹಾಗೂ ಬಡವರಿಗೆ ಪಂಚ ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಚುನಾವಣೆಯಲ್ಲಿ ನೀಡಿದ ವಚನದಂತೆ ನಡೆದುಕೊಂಡು ಬಂದಿದ್ದೇವೆ. ಜನರಿಗೆ ಅನುಕೂಲವಾಗಲು ಎ ಮತ್ತು ಬಿ ಖಾತೆಯ ಅವಧಿಯನ್ನು ಇನ್ನು ಮೂರು ತಿಂಗಳವರೆಗೆ ವಿಸ್ತರಿಸಿದ್ದೇವೆ. ಫಲಾನುಭವಿಗಳ ಯಾವುದೇ ಒಂದು ಆಧಾರವಿದ್ದರೆ ಸಾಕು ಎ ಮತ್ತು ಬಿ ಖಾತೆ ಮಾಡಿಕೊಳ್ಳುವ ಉತ್ತಮ ಕಾರ್ಯ ನಮ್ಮ ಸರಕಾರ ಮಾಡುತ್ತಿದೆ. ಹಲವು ವರ್ಷಗಳಿಂದ ವಂಚಿತರಾದ ಖಾತೆದಾರರು ಮತ್ತು ಬಡವರಿಗೆ ಇದು ಅನುಕೂಲಕಾರವಾದ ಯೋಜನೆಯಾಗಿದೆ. ಇದನ್ನು ಜಿಲ್ಲಾಧಿಕಾರಿಗಳು ಹೋಣೆಗಾರರಾಗಿದ್ದಾರೆ. ಯಾವುದೇ ಫಿರ್ಯಾದುಗಳಿದ್ದರೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೆ ಸಾಕು ತಕ್ಷಣವೇ ಸೂಕ್ತ ಕ್ರಮತೆಗೆದುಕೊಳ್ಳಲಿದ್ದಾರೆ ಎಂದರು.ನಂತರ ಸಚಿವರು ಉಪತಹಸೀಲ್ದಾರ ಕಚೇರಿ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟಿನ್ ಕಾಮಗಾರಿಯನ್ನು ಪರಿಶೀಲಿಸಿದರು. ಪುರಸಭೆ ಕಾರ್ಯಲಯಕ್ಕೆ ಭೇಟಿ ನೀಡಿ ಪುರಸಭೆ ಮುಖ್ಯಾಧಿಕಾರಿ, ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಹಲವು ವಿಷಯಗಳ ಕುರಿತು ಚರ್ಚಿಸಿದರು.

ಅಂಬಿಗರ ಚೌಡಯ್ಯ ನಿಗಮ ರಾಜ್ಯ ಅಧ್ಯಕ್ಷ ಬಾಬುರಾವ ಚಿಂಚನಸೂರ, ಮುಖಂಡರಾದ ರಾಜಗೋಪಾಲರೆಡ್ಡಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಚಪೇಟ್ಲಾ, ನಿರಂಜನರೆಡ್ಡಿ, ಪುರಸಭೆ ಉಪಾಧ್ಯಕ್ಷ ರೇಣುಕಾ ಪಡಿಗೆ, ಕೆಜಿಡಿಪಿ ಸದಸ್ಯ ಸೈಯದ್‌ ಬಾಬಾ ಮುಂತಾದವರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ದ್ವೇಷ ಭಾಷಣ ತಡೆ, ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಸೂದೆ