ಕನ್ನಡಪ್ರಭ ವಾರ್ತೆ ಬೈಲಹೊಂಗಲ
ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಎಲ್ಲವೂ ಕಾನೂನು ಪ್ರಕಾರವೇ ನಡೆಯಬೇಕು ಎಂದು ಚುನಾವಣಾ ಆಯೋಗವನ್ನು ಬಿಜೆಪಿ ಈಗಾಗಲೇ ಆಗ್ರಹಿಸಿದೆ. ಈ ವಿಚಾರದಲ್ಲಿ ಪಕ್ಷ ಕಾನೂನುಬದ್ಧ ಹೋರಾಟ ನಡೆಸಲಿದೆ ಎಂದರು.
ಸಾಂವಿಧಾನಿಕ ಹುದ್ದೆ ಹೊಂದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದೊಂದಿಗೆ ಚುನಾವಣಾ ಆಯೋಗದ ಮುಂದೆ ಧರಣಿ ನಡೆಸಿರುವುದು ಸರಿಯಲ್ಲ. ಮತದಾರರ ಪಟ್ಟಿಯಲ್ಲಿರುವ ಅನರ್ಹರನ್ನು ತೆಗೆದುಹಾಕುವ ಪ್ರಕ್ರಿಯೆಗೆ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.ಮರಣ ಹೊಂದಿದವರು, ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರು ಹಾಗೂ ದಾಖಲೆಗಳಿಲ್ಲದ ಮತದಾರರನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕುವ ಕಾರ್ಯ ನಡೆಯುತ್ತಿದೆ. ಆದರೆ ಇಂತಹ ಮತಗಳನ್ನು ಕಳೆದುಕೊಳ್ಳುವ ಆತಂಕದಿಂದಲೇ ಕಾಂಗ್ರೆಸ್ ಸರ್ಕಾರ ಹಾಗೂ ಅದರ ಕಾರ್ಯಕರ್ತರು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಟೀಕಿಸಿದರು.
ಕಾನೂನು ಪ್ರಕಾರ ಫಾರಂ-7 ಅನ್ನು ಯಾರು ಬೇಕಾದರೂ ಸಲ್ಲಿಸಬಹುದು. ಆದರೆ ಈವರೆಗೆ ಚುನಾವಣಾ ಆಯೋಗವೇ ಯಾವುದೇ ವ್ಯಕ್ತಿಯ ಹೆಸರನ್ನು ಏಕಪಕ್ಷೀಯವಾಗಿ ತೆಗೆದುಹಾಕಿಲ್ಲ ಎಂದು ಸ್ಪಷ್ಟಪಡಿಸಿದೆ. ನೋಟಿಸ್ ಪಡೆದವರ ಆಕ್ಷೇಪಣೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ, ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಬೇಕು ಎಂದರು.
ಪಾರದರ್ಶಕ ಚುನಾವಣೆ ನಡೆಯಬೇಕು. ದೇಶದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ತನ್ನ ಸರ್ಕಾರವನ್ನು ಆಯ್ಕೆ ಮಾಡುವ ಮತದಾನದ ಹಕ್ಕು ದೊರೆಯಬೇಕು ಎಂಬುದೇ ಬಿಜೆಪಿಯ ಧ್ಯೇಯ ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ನೀಡಲು ಹಣದ ಕೊರತೆ ಎದುರಿಸುತ್ತಿರುವ ಸರ್ಕಾರ, ತನ್ನ ವೈಫಲ್ಯಗಳನ್ನು ಮರೆಮಾಚಲು ಎಸ್‌ಐಆರ್ ವಿಚಾರವನ್ನು ಮುಂದಿಟ್ಟುಕೊಂಡು ಕುಂಟು ನೆಪ ಹುಡುಕುವುದನ್ನು ನಿಲ್ಲಿಸಬೇಕು ಎಂದು ಡಾ.ವಿ.ಐ.ಪಾಟೀಲ ಆಗ್ರಹಿಸಿದರು.