ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆ

KannadaprabhaNewsNetwork | Published : Dec 18, 2023 2:00 AM

ಸಾರಾಂಶ

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಮನೆ, ಮನೆಗೆ ತಲುಪಿಸಬೇಕು: ಡಾ.ಕೆ.ಪಿ.ಅಂಶುಮಂತ್ ಕರೆಯಾವ ಮನೆಯೂ ಈ ಸೌಲಭ್ಯದಿಂದ ವಂಚಿತವಾಗದಂತೆ ಸರ್ವೆ ಮಾಡಬೇಕು ಕಾಂಗ್ರೆಸ್‌ ಪಕ್ಷಕ್ಕೆ ಈ ನಾಡಿನ ಜನತೆ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ. 5 ವರ್ಷ ಅಭಿವೃದ್ಧಿ ಮಾಡುವುದೇ ಸರ್ಕಾರದ ಗುರಿ.

- ಶೆಟ್ಟಿಕೊಪ್ಪದಲ್ಲಿ ಗ್ರಾಮ ಪಂಚಾಯತಿ ಮಟ್ಟದ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ

ಕನ್ನಡಪ್ರಭ ವಾರ್ತೆ,ನರಸಿಂಹರಾಜಪುರ

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಮನೆ, ಮನೆಗೆ ತಲುಪಿಸಬೇಕು ಹಾಗೂ ಯಾವ ಮನೆಯೂ ಈ ಸೌಲಭ್ಯದಿಂದ ವಂಚಿತವಾಗದಂತೆ ಸರ್ವೆ ಮಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಕೆ.ಪಿ. ಅಂಶುಮಂತ್‌ ಕರೆ ನೀಡಿದರು.

ಶನಿವಾರ ಸಂಜೆ ಶೆಟ್ಟಿಕೊಪ್ಪದಲ್ಲಿ ಕಡಹಿನಬೈಲು ಗ್ರಾಪಂ ಮಟ್ಟದ ಪದಾಧಿಕಾರಿಗಳ ಹಾಗೂ ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಒಳ ಜಗಳಗಳಿಂದ ದುರ್ಬಲವಾಗಿದೆ.ರಾಜ್ಯದಲ್ಲಿ ಬಿಜೆಪಿಗೆ ನಾಯಕತ್ವವೇ ಇಲ್ಲವಾಗಿದೆ. ಆದ್ದ ರಿಂದಲೇ ಜೆಡಿಎಸ್‌ ಪಕ್ಷದ ಜೊತೆ ಒಡಂಬಡಿಕೆ ಮಾಡಿಕೊಳ್ಳುತ್ತಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಹ ಜೆಡಿಎಸ್‌ ನ ಹೀನಾಯ ಸೋಲಿನಿಂದ ಕಂಗೆಟ್ಟು ಜಾತ್ಯಾತೀತ ತತ್ವ , ಸಿದ್ದಾಂತಗಳನ್ನು ಗಾಳಿಗೆ ತೂರಿ ಕೋಮು ವಾದಿಗಳ ಜೊತೆ ಕೈ ಜೋಡಿಸಿದ್ದಾರೆ. ಇದು ಸ್ವಾರ್ಥ ರಾಜಕಾರಣ ಎಂಬುದು ನಾಡಿನ ಜನತೆಗೆ ಅರಿವಾಗಿದೆ ಎಂದರು. ಕಾಂಗ್ರೆಸ್‌ ಪಕ್ಷಕ್ಕೆ ಈ ನಾಡಿನ ಜನತೆ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ. 5 ವರ್ಷ ಅಭಿವೃದ್ಧಿ ಮಾಡುವುದೇ ಸರ್ಕಾರದ ಗುರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೋಡೆತ್ತಿನಂತೆ ಅಭಿವೃದ್ಧಿ ಪಥದತ್ತ ಕರ್ನಾಟಕವನ್ನು ಕೊಂಡೊಯ್ಯುತ್ತಾರೆ ಎಂದರು. ಕೆಪಿಸಿಸಿ ಸದಸ್ಯ ಪಿ.ಆರ್‌. ಸದಾಶಿವ ಮಾತನಾಡಿ, ನಾಡಿನ ಎಲ್ಲಾ ವರ್ಗದವರ ಅಭಿವೃದ್ಧಿಯೇ ಕಾಂಗ್ರೆಸ್‌ನ ಗುರಿ. ಕಾರ್ಯಕರ್ತರು ಬೇರು ಮಟ್ಟದಿಂದ ಪಕ್ಷವನ್ನು ಸಂಘಟಿಸಬೇಕಾಗಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದರು.ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗೇರ್‌ ಬೈಲು ನಟರಾಜ್‌ ಮಾತನಾಡಿ, ಕಾಂಗ್ರೆಸ್‌ ಪಕ್ಷ ನನಗೇನು ಕೊಟ್ಟಿದೆ ? ಎನ್ನುವುದಕ್ಕಿಂತ ನಾನು ಪಕ್ಷಕ್ಕೆ ಹೇಗೆ ದುಡಿದಿದ್ದೇನೆ ಎಂಬುದು ಮುಖ್ಯವಾಗುತ್ತದೆ. ನಿಷ್ಟಾವಂತ ಕಾರ್ಯಕರ್ತರನ್ನು ಎಲ್ಲೂ ಪಕ್ಷ ಕಡೆ ಗಣಿಸುವುದಿಲ್ಲ. ಕಾರ್ಯಕರ್ತರು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡು ಅವರ ವಿಶ್ವಾಸ, ನಂಬಿಕೆಗೆ ಪಾತ್ರರಾಗಬೇಕು. ಮುಂಬರುವ ತಾಪಂ ಹಾಗೂ ಜಿಪಂ ಹಾಗೂ ಲೋಕ ಸಭೆ ಚುನಾವಣೆಗಳಲ್ಲಿ ಪಕ್ಷವನ್ನು ಸದೃಢವಾಗಿ ಬೆಳಸಬೇಕು ಎಂದರು.

ಇದೇ ಸಂದರ್ಭದಲ್ಲಿ ಜೆಡಿಎಸ್‌ ತಾಲೂಕು ಪ್ರಧಾನ ಕಾರ್ಯದರ್ಶಿ ಶೆಟ್ಟಿಕೊಪ್ಪ ಮಹೇಶ್‌ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.ಸಭೆ ಅಧ್ಯಕ್ಷತೆಯನ್ನು ಪಂಚಾಯಿತಿ ಮಟ್ಟದ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ್‌ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸುಂದರೇಶ್‌, ಹೋಬಳಿ ಅಧ್ಯಕ್ಷ ಸಾಜು, ಜಿಲ್ಲಾ ಕಾರ್ಯದರ್ಶಿ ಇ.ಸಿ.ಜೋಯಿ, ಕೆಪಿಸಿಸಿ ವೀಕ್ಷಕ ಎಸ್‌.ಡಿ.ರಾಜೇಂದ್ರ, ಜಿಪಂ ಮಾಜಿ ಸದಸ್ಯ ಬಿ.ಎಸ್.ಸುಬ್ರಮಣ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಸುನೀಲ್‌ ಕುಮಾರ್‌, ಬೂತ್‌ ಅಧ್ಯಕ್ಷ ಅಬ್ದುಲ್ ರೆಹಮಾನ್‌, ಗ್ರಾಪಂ ಅಧ್ಯಕ್ಷೆ ಶೈಲಾ ಮಹೇಶ್‌, ಸದಸ್ಯರಾದ ಚಂದ್ರ ಶೇಖರ್‌, ಲಿಲ್ಲಿ, ಕಾಂಗ್ರೆಸ್‌ ಮುಖಂಡ ರಾದ ಬೇಸಿಲ್‌, ಸಂತೋಷ್‌, ನಂದೀಶ್‌, ಸುಲೈಮಾನ್‌,ಸುನೋಯಿ, ರಾಗಿಣಿ ತಂಗಪ್ಪನ್‌, ಕೆ.ಎನ್‌.ನಾಗರಾಜು,ರಂಜು ಎಲಿಯೇಸ್‌ ಮತ್ತಿತರರು ಇದ್ದರು.

Share this article