ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ಮಹಿಳಾ ಸಮಾವೇಶ ನೆರವೇರಿತು.
ಬಂಟ್ವಾಳ: ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಸ್ವಾವಲಂಬಿ ಹಾಗೂ ಸ್ವಾಭಿಮಾನಿಗಳನ್ನಾಗಿ ಮಾಡಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದ್ದಾರೆ.
ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಂಗಳವಾರ ನಡೆದ ಮಹಿಳಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳೆಯರು ಕನಿಷ್ಠ ವರ್ಷಕ್ಕೊಮ್ಮೆಯಾದರೂ ತಮ್ಮ ಆರೋಗ್ಯ ಪರೀಕ್ಷಿಸಿಕೊಂಡು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ, ಆರೋಗ್ಯವಂತರಾಗಿ ಸ್ವಾಭಿಮಾನಿಗಳಾಗಿ ಬದುಕಲು ಗರಿಷ್ಠ ಪ್ರಯತ್ನ ನಡೆಸಿ ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರ್ಕಾರಗಳು ತಂದ ಮಹಿಳಾಪರ ಯೋಜನೆಗಳನ್ನು ನೆನಪಿಸಿ, ಪ್ರಸಕ್ತ ವಿದ್ಯಮಾನಗಳ ಕುರಿತು ವಿವರಿಸಿದರು.ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನಾ ಸಮಿತಿ ಅಧ್ಯಕ್ಷೆ ಜಯಂತಿ ವಿ ಪೂಜಾರಿ, ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್ ರೊಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಅಶ್ವನಿ ಕುಮಾರ್ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ದ ಕ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಜಿ.ಪಂ. ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಎಪಿಎಂಸಿ ಮಾಜಿ ಅಧ್ಯಕ್ಷ ಕೆ ಪದ್ಮನಾಭ ರೈ, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಮಾಜಿ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಸಜಿಪ ಮುನ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಯೂಸುಫ್ ಕರಂದಾಡಿ, ಪ್ರಮುಖರಾದ ನಮಿತಾ ಡಿ ರಾವ್, ನಾರಾಯಣ ನಾಯ್ಕ್, ಉಮ್ಮರ್ ಮಂಚಿ ಮೊದಲಾದವರು ಭಾಗವಹಿಸಿದ್ದರು. ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್ ಸ್ವಾಗತಿಸಿದರು. ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್ ವಂದಿಸಿದರು. ಜಿಲ್ಲಾ ಜವಾಹರ್ ಬಾಲ್ ಮಂಚ್ ಅಧ್ಯಕ್ಷೆ ಶೈಲಜಾ ರಾಜೇಶ್ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.