ಕನ್ನಡಪ್ರಭ ವಾರ್ತೆ ಸೊರಬ
ಶುಕ್ರವಾರ ಪಟ್ಟಣದ ಕೆಇಬಿ ಕಾಲೋನಿಯಿಂದ ತಾಲೂಕು ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿ ಉದ್ಘಾಟಿಸಿ ನಂತರ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಮತಯಾಚಿಸಿ ಮಾತನಾಡಿದರು.
ಈಗಾಗಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪಿದೆ. ಚುನಾವಣೆ ನಂತರ ಸರ್ಕಾರಿ ನೌಕರರಿಗೆ ಸಂಬಳ ನೀಡಲು ಹಣ ಇಲ್ಲದ ದುಸ್ಥಿತಿ ಎದುರಾಗಲಿದೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ. ಹಾಗಾಗಿ ಮತದಾರರು ಕಾಂಗ್ರೆಸ್‌ನ ಯಾವುದೇ ಗ್ಯಾರಂಟಿಗೆ ಮರುಳಾಗದೇ ದೇಶದ ಭವಿಷ್ಯದ ದೃಷ್ಠಿಯಿಂದ ಮತ್ತು ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಮೋದಿವರನ್ನು ಬೆಂಬಲಿಸುವ ಮೂಲಕ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಕರನೀಡಿದರು.ನುಡಿದಂತೆ ನಡೆದಿದ್ದೇವೆ ಎಂದು ಜಾಹೀರಾತು ನೀಡುವ ಕಾಂಗ್ರೆಸ್ ಸರ್ಕಾರ ರಾಜ್ಯದ ಬಡ ಜನತೆಗೆ ೧ ಕೆಜಿ ಅಕ್ಕಿ ಕೊಡಲು ಸಾಧ್ಯವಾಗಿಲ್ಲ. ಪಡಿತರಿಗೆ ಈಗ ನೀಡುತ್ತಿರುವ ೫ ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದು. ಎಸ್ಸಿ/ಎಸ್ಟಿಗೆ ನ್ಯಾಯುತವಾಗಿ ನೀಡಬೇಕಿದ್ದ ಅನುದಾನದ ಹಣ ಬೇರೆ ಯೋಜನೆಗಳಿಗೆ ಬಳಸಿ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ವಂಚಿಸುತ್ತಿದೆ ಎಂದು ಆರೋಪಿಸಿದ ಅವರು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆಯೇ ಹೊರತು ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಂಡಿಲ್ಲ. ಸೊರಬ ತಾಲೂಕಿನಲ್ಲಿ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದ ಯಡಿಯೂರಪ್ಪನವರು. ಜಿಲ್ಲೆ ಮತ್ತು ತಾಲೂಕು ಅಭೂತಪೂರ್ವ ಅಭಿವೃದ್ಧಿ ಕಾಣಲು ಬಿಜೆಪಿ ಸರ್ಕಾರವೇ ಬರಬೇಕಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಶಾಸಕರು ಪುಕ್ಕಟ್ಟೆ ಉದ್ದುದ್ದ ಭಾಷಣ ಬೀಗಿಯುತ್ತಾರೆಯೇ ಹೊರತು ಅಭಿವೃದ್ಧಿಯಲ್ಲಿ ಶೂನ್ಯ ಸಂಪಾದನೆಯಲ್ಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೆಸರು ಹೇಳದೇ ತರಾಟೆಗೆ ತೆಗೆದುಕೊಂಡರು.
ಮಾಜಿ ಸಚಿವ ಎಚ್.ಹಾಲಪ್ಪ ಮಾತನಾಡಿ, ಎಸ್.ಬಂಗಾರಪ್ಪ ಮಗಳಾಗಿ, ಡಾ.ರಾಜ್‌ಕುಮಾರ್ ಸೊಸೆಯಾಗಿ, ನಟ ಶಿವರಾಜ್‌ಕುಮಾರ್ ಪತ್ನಿಯಾಗಿ ಗೀತಾರನ್ನು ಗೌರವಿಸುತ್ತೇನೆ. ಡಾ.ರಾಜ್ ಕುಟುಂಬ ರಾಜಕಾರಣಕ್ಕೆ ಬಂದ ಇತಿಹಾಸವಿಲ್ಲ. ಆದರೆ ರಾಜಕೀಯದ ಪರಿಜ್ಞಾನ ಇಲ್ಲದ, ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲದ, ಸಾಮಾನ್ಯ ಜನರ ನಾಡಿ ಮಿಡಿತ ಗೊತ್ತಿಲ್ಲದ ಹಾಗೆಯೇ ತಾಲೂಕಿನಲ್ಲಿ ಎಷ್ಟು ಹೋಬಳಿ ಅಥವಾ ಕಾಂಗ್ರೆಸ್‌ನ ಅಧ್ಯಕ್ಷರು ಯಾರು ಎನ್ನುವ ಪರಿವೇ ಇಲ್ಲದ ಗೀತಾರವರು ಕಾಂಗ್ರೆಸ್ ಅಭ್ಯರ್ಥಿಯಾಗಿರುವುದು ಆ ಪಕ್ಷದ ದುಸ್ಥಿತಿ ಎತ್ತಿ ತೋರಿಸುತ್ತದೆ. ಆದ್ದರಿಂದ ಕಾಂಗ್ರೆಸ್ ಸೋಲು ಗ್ಯಾರಂಟಿ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ನಿಶ್ಚಿತ. ಕೇಂದ್ರದಲ್ಲಿ ಸಚಿವರಾಗುವುದು ಖಚಿತ ಎಂದರು.
ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್, ಮುಖಂಡರಾದ ಪಾಣಿ ರಾಜಪ್ಪ, ಎ.ಎಲ್. ಅರವಿಂದ, ಗೀತಾ ಮಲ್ಲಿಕಾರ್ಜುನ, ಜಾನಕಪ್ಪ ಯಲಸಿ, ಸಂಜಯಗೌಡ, ಹರೀಶ್, ರವಿಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಹೊಳಿಯಮ್ಮ, ಎಂ.ಆರ್. ಪಾಟೀಲ್ ಮೊದಲಾದವರು ಹಾಜರಿದ್ದರು.