ಅಖಂಡ ಭಾರತ ಇಬ್ಭಾಗ ಮಾಡಿದ್ದು ಕಾಂಗ್ರೆಸ್‌: ಹಾಲಪ್ಪ ಆಚಾರ್‌

KannadaprabhaNewsNetwork |  
Published : May 04, 2024, 12:36 AM IST
೦೩ವೈಎಲ್‌ಬಿ೨:ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ  ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಪರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಲಪ್ಪ ಆಚಾರ ಮತಯಾಚಿಸಿ ಮಾತನಾಡಿದರು. | Kannada Prabha

ಸಾರಾಂಶ

ಈ ದೇಶವನ್ನು ೫೦ ವರ್ಷ ಆಳಿದ ಕಾಂಗ್ರೆಸ್‌ನವರು ದೇಶವನ್ನು ಅಭಿವೃದ್ಧಿ ಮಾಡುವ ಮನಸ್ಸು ಮಾಡಲಿಲ್ಲ. ಆದರೆ, ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿರುವುದು ಕಾಂಗ್ರೆಸ್‌ನವರ ದೊಡ್ಡ ಸಾಧನೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದ್ದಾರೆ.

ಯಲಬುರ್ಗಾ: ಇಡೀ ಅಖಂಡ ಭಾರತವನ್ನು ಇಬ್ಭಾಗ ಮಾಡಿದ ಹೆಗ್ಗಳಿಕೆ ಕಾಂಗ್ರೆಸ್ಸಿನವರಿಗೆ ಸಲ್ಲುತ್ತದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.

ಈ ದೇಶವನ್ನು ೫೦ ವರ್ಷ ಆಳಿದ ಕಾಂಗ್ರೆಸ್‌ನವರು ದೇಶವನ್ನು ಅಭಿವೃದ್ಧಿ ಮಾಡುವ ಮನಸ್ಸು ಮಾಡಲಿಲ್ಲ. ಆದರೆ, ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿರುವುದು ಕಾಂಗ್ರೆಸ್‌ನವರ ದೊಡ್ಡ ಸಾಧನೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ ಹಾಗೂ ಜಿಪಂ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ ಮಾತನಾಡಿ, ಕೊಪ್ಪಳ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಅವರಿಗೆ ಹೆಚ್ಚಿನ ಮತಗಳನ್ನು ಹಾಕಿಸಿ ನಿಮ್ಮೆಲ್ಲರ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ಬಸವಲಿಂಗಪ್ಪ ಭೂತೆ, ಜಿಲ್ಲಾ ಜೆಡಿಎಸ್ ವಕ್ತಾರ ಮಲ್ಲನಗೌಡ ಕೋನನಗೌಡ, ಗ್ರಾಪಂ ಅಧ್ಯಕ್ಷೆ ಅಂದಮ್ಮ ಬಳಿಗಾರ, ಬಿಜೆಪಿ ಅಧ್ಯಕ್ಷ ಮಾರುತಿ ಗಾವರಾಳ, ಬಸವರಾಜ ಗೌರಾ, ಶಿವಶಂಕರರಾವ್ ದೇಸಾಯಿ, ಸಿ,ಎಚ್. ಪಾಟೀಲ, ಶರಣಪ್ಪ ಇಳಗೇರ, ರತನ್ ದೇಸಾಯಿ, ಗಾಳೇಪ್ಪ ಓಜನಹಳ್ಳಿ, ಎಂ.ಬಿ. ಅಳವಂಡಿ ಶಂಕ್ರಪ್ಪ ಸುರಪುರ, ಅಯ್ಯನಗೌಡ ಕೆಂಚಮ್ಮನವರ, ಅಯ್ಯಪ್ಪ ಗುಳೇದ, ಶಿವಪ್ಪ ವಾದಿ, ಬಸವರಾಜ ಗುಳಗುಳಿ, ಶರಣಪ್ಪ ಗುಂಗಾಡಿ, ಶರಣಪ್ಪ ರಾಂಪುರ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!