ಕಾಂಗ್ರೆಸ್‌ಗೆ ಇಲ್ಲಿ ದಶಕವೂ ಇಲ್ಲ,ಅಲ್ಲಿ ಶತಕವೂ ಇಲ್ಲ: ಸುಧಾಕರ್‌

KannadaprabhaNewsNetwork |  
Published : Jun 30, 2024, 12:53 AM IST
 ಸಿಕೆಬಿ-1 ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಖಂಡರಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಡಾ.ಕೆ.ಸುಧಾಕರ್ ಮಾತನಾಡಿದರು | Kannada Prabha

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ದಶಕ ಇಲ್ಲ, ಅಲ್ಲಿ ಶತಕ ಇಲ್ಲ. ಇದು ಕಾಂಗ್ರೆಸ್ ಸ್ಥಿತಿ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ದಶಕ ಇಲ್ಲ, ಅಲ್ಲಿ ಶತಕ ಇಲ್ಲ. ಇದು ಕಾಂಗ್ರೆಸ್ ಸ್ಥಿತಿ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ ಮೈತ್ರಿ ಮುಖಂಡರಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಕೇವಲ 9 ಸ್ಥಾನ ನೀಡಿ ಒಂದಂಕಿ ದಾಟಿಸಲಿಲ್ಲ, ದೇಶದಲ್ಲಿ 99 ಸ್ಥಾನಗಳನ್ನು ನೀಡಿ ಎರಡಂಕಿ ದಾಟಿಸಲಿಲ್ಲ ಎಂದು ಲೇವಡಿ ಮಾಡಿದರು.

ಒಂದೇ ವರ್ಷದಲ್ಲಿ ಕಾಂಗ್ರೆಸ್‌ ತಿರಸ್ಕಾರ:

ಒಂದೇ ವರ್ಷದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನ ತಿರಸ್ಕರಿಸಿದ್ದು ಏಕೆ? ನಮ್ಮ ತಪ್ಪೇನು ಎಂಬುದರ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಇದಕ್ಕೆ ಪಕ್ಕದ ಆಂಧ್ರಪ್ರದೇಶದ ಚುನಾವಣೆ ಉತ್ತಮ ಉದಾಹರಣೆಯಾಗಿದೆ. ಅಲ್ಲಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ 11 ಸ್ಥಾನಗಳನ್ನು ನೀಡಿ ಜನ ತಿರಸ್ಕರಿಸಿದ್ದಾರೆ. ಅದೇ ರೀತಿ ಇಲ್ಲಿ ನಾಳೆ ರಾಜ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆದರೂ ಸಹಾ 180 ಸ್ಥಾನಗಳಿಂದ ಎನ್‌ಡಿಎ ಗೆಲ್ಲುತ್ತದೆ ಎಂದರು.

ಈ ವೇಳೆ ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಇದ್ದರು.

ತಾವು ಶಾಸಕನಾಗಿದ್ದಾಗ ಹೆಚ್‌.ಎನ್‌.ವ್ಯಾಲಿ ಮತ್ತು ಕೆಸಿ ವ್ಯಾಲಿ ನೀರು ಕೃಷಿಗೆ ಯೋಗ್ಯವಿಲ್ಲಾ ಎಂದು ಐಐಸಿ ವರದಿ ಬಂದಿದ್ದರಿಂದ ಬೋಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಹೆಚ್.ಎನ್.ವ್ಯಾಲಿ ಮತ್ತು ಕೆಸಿ ವ್ಯಾಲಿ ನೀರನ್ನು 3 ಬಾರಿ ಸಂಸ್ಕರಿಸಿ ಹರಿಸಬೇಕೆಂದು ಬಜೆಟ್‌ನಲ್ಲಿ ಹಣ ಮೀಸಲಿರಿಸಿದ್ದೆವು. ಆದರೆ ಈಗಿನ ಸರ್ಕಾರ ಅದನ್ನು ಮಾಡುತ್ತಿಲ್ಲಾ. ಕೊಳಚೆ ನೀರು ಸಂಸ್ಕರಿಸಿ ಜನರಿಗೆ ನೀರು ಕೊಡೋ ದುಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌