ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ. ನಾವು ಪ್ರತಿದಿನ ಎದ್ದು ದೇವರಿಗೆ ನಮಸ್ಕಾರ ಮಾಡಿಯೇ ಮನೆಯಿಂದ ಹೊರಡೋದು, ನಾನು ಕಿಷ್ಕಿಂದ ಇರುವ ಜಿಲ್ಲೆಯಲ್ಲಿರುವವನು, ನಾನು ಪ್ರತಿ ವರ್ಷ ಆಂಜನೇಯ ಮಾಲೆ ಹಾಕುತ್ತೇನೆ, ಆದರೆ ಭಕ್ತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಮಾಲೆ ಹಾಕುತ್ತೇನೆ. ಆದರೆ ಚುನಾವಣೆ ಬಂದಾಗ ಮಾತ್ರ ಬಿಜೆಪಿಗೆ ಧರ್ಮ, ಮಸೀದಿ, ಪಾಕಿಸ್ತಾನ ನೆನಪಾಗುತ್ತದೆ ಎಂದವರು ಬಿಜೆಪಿಗೆ ತಿರುಗೇಟು ನೀಡಿದರು.
ಸಂಸದರಿಂದ ಪ್ರಯತ್ನ ಇಲ್ಲ:ಕನ್ನಡಕ್ಕೆ ಶಾಸ್ತ್ರೀಯ ಮಾನ್ಯತೆ ಸಿಕ್ಕಿದೆ. ಇದರಿಂದ ಕೇಂದ್ರ ಸರ್ಕಾರದಿಂದ ಹೆಚ್ಚು ಅನುದಾನ ಬರಬೇಕಾಗಿತ್ತು. ಬೇರೆ ರಾಜ್ಯಗಳಿಗೆ ಇಂತಹ ಅನುದಾನ ಸಿಕ್ಕಿದೆ. ಆದರೆ ನಮ್ಮ ರಾಜ್ಯದ ಸಂಸದರು ಈ ಅನುದಾನ ನೀಡುವಂತೆ ಮೋದಿ ಅವರಿಗೆ ಒಂದು ಪತ್ರ ಬರೆದಿಲ್ಲ, ಯಾವುದೇ ಪ್ರಯತ್ನವನ್ನೂ ಮಾಡಿಲ್ಲ ಎಂದವರು ಆರೋಪಿಸಿದರು.
ಅನುದಾನ ಕೊರತೆ ಇಲ್ಲ:
ಜಿಲ್ಲೆಯಿಂದ ಇಲಾಖೆಯ ಕಾರ್ಯಕ್ರಮಗಳಿಗೆ ಪ್ರಸ್ತಾಪ ಬಂದರೆ ಹಣ ನೀಡುತ್ತೇವೆ. ಈ ಬಾರಿ ಕನ್ನಡ ಸಂಸ್ಕೃತಿ ಇಲಾಖೆಗೆ 40- 50 ಕೋಟಿ ರು. ಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇನೆ, ನಮ್ಮಲ್ಲಿ ಅನುದಾನದ ಕೊರತೆ ಇಲ್ಲ, ಬಿಜೆಪಿಗೆ ಮಾತ್ರ ಕೊರತೆ ಕಾಣುತ್ತದೆ ಎಂದು ಟೀಕಿಸಿದರು.
ನಿಗಮ ಮಂಡಳಿ ನೇಮಕದ ಬಗ್ಗೆ ಪಕ್ಷದ ಅಧ್ಯಕ್ಷರು ಮುಖ್ಯಮಂತ್ರಿಗಳು ಹೈಕಮಾಂಡ್ ತೀರ್ಮಾನ ಮಾಡುತ್ತದೆ, ನೇಮಕ ಮಾಡುವಾಗ ಸಮನಾಗಿ ಜಿಲ್ಲಾವಾರು ಹಂಚಬೇಕಾಗುತ್ತದೆ. ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಆದ್ದರಿಂದ ಯಾರಿಗೂ ಅನ್ಯಯಾವಾಗದಂತೆ ಶೀಘ್ರ ನೇಮಕ ಮಾಡುತ್ತಾರೆ ಎಂಬ ಭರವಸೆಯನ್ನು ಸಚಿವರು ವ್ಯಕ್ತಪಡಿಸಿದರು.