- ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಶಾಸಕ ಶಿವಶಂಕರಪ್ಪ ಹೇಳಿಕೆ- - - ಕನ್ನಡಪ್ರಭ ವಾರ್ತೆ, ದಾವಣಗೆರೆ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 1, 6, 5 ಮತ್ತು 45ನೇ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತಯಾಚಿಸಿದರು.ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, ಈ ಭಾಗದ ಪೌರಕಾರ್ಮಿಕರು ಮತ್ತು ಬಡವರಿಗೆ ಸೂರು ಕಲ್ಪಿಸಿದ್ದು ಕಾಂಗ್ರೆಸ್ ಪಕ್ಷ ಎಂಬುದನ್ನು ಯಾರು ಮರೆಯಬಾರದು. ಜೊತೆಗೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ರಾಜ್ಯ ಸರ್ಕಾರ ನೀಡುವ ಯೋಜನೆಗಳನ್ನು ಯಾವುದೇ ಏಜೆಂಟರು ಇಲ್ಲದೇ ಅರ್ಹ ಫಲಾನುಭವಿಗಳಿಗೆ ತಲುಪಿಸಲಾಗಿದೆ. ಪ್ರತಿಯೊಂದು ಸಮಸ್ಯೆಗೂ ಸ್ಪಂದಿಸುವ ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನನ್ನನ್ನು ಬೆಂಬಲಿಸಿದಂತೆ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಸಂವಿಧಾನ ರಕ್ಷಣೆ ಮತ್ತು ಎಲ್ಲ ವರ್ಗಗಳ ಹಿತ ಕಾಪಾಡುವುದು ನನ್ನ ಧ್ಯೇಯ. ಈ ಭಾಗದಲ್ಲಿ ಮಾವನವರು ಅಭಿವೃದ್ಧಿ ಮಾಡಿದ್ದು, ಅವರಿಗೆ ಸದಾ ಬೆಂಬಲಿಸುತ್ತಿರುವ ತಾವುಗಳು ನನ್ನನ್ನು ಬೆಂಬಲಿಸಬೇಕೆಂದು ಕೋರಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳ ಭರವಸೆ ನೀಡಿತ್ತು. ಅದರಂತೆ ಸರ್ಕಾರ ಬಂದ ತಕ್ಷಣ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪರಿಣಾಮ ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವೊಂದಕ್ಕೆ ಮಾರ್ಚ್ ಅಂತ್ಯಕ್ಕೆ ಸುಮಾರು ₹122 ಕೋಟಿಯಷ್ಟು ಹಣ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ವಕ್ತಾರ ಯು.ಟಿ.ಫರ್ಜಾನ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮಲ್ಲಿಕಾರ್ಜುನ್, ಪಾಲಿಕೆ ಸದಸ್ಯರಾದ ಜಿ.ಡಿ.ಪ್ರಕಾಶ್, ಎಲ್.ಡಿ.ಗೋಣೆಪ್ಪ, ಸುಧಾ ಇಟ್ಟಿಗುಡಿ ಮಂಜುನಾಥ್, ಉದಯಕುಮಾರ್, ಎನ್. ನೀಲಗಿರಿಯಪ್ಪ, ಟಿ.ರಮೇಶ್, ಬಿ.ಎಂ. ರಾಮಸ್ವಾಮಿ, ಯುವ ಕಾಂಗ್ರೆಸ್‌ನ ಸಾಗರ್, ಮಾಜಿ ಮೇಯರ್ ಎಚ್.ಬಿ. ಗೋಣೆಪ್ಪ, ಸಾಲುಮನಿ ಬಸವರಾಜ್, ಎಂ.ಮಂಜುನಾಥ್, ಜಮ್ನಳ್ಳಿ ನಾಗರಾಜ್, ಡಿ.ಎಸ್.ಸುರೇಶ್, ಇಟ್ಟಿಗುಡಿ ಮಂಜುನಾಥ್, ಆರ್.ವಾಸುದೇವ್, ವಿಜಯಕುಮಾರ್, ಅಣ್ಣಪ್ಪ, ಮಂಜಮ್ಮ, ಬಾಲಾಜಿ, ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. - - - -5ಕೆಡಿವಿಜಿ40, 41:
ದಾವಣಗೆರೆಯ ವಿವಿಧೆಡೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಚುನಾವಣಾ ಪ್ರಚಾರ ನಡೆಸಿದರು.