ಶಾಸಕ ಸ್ವರೂಪ್‌ ವಿರುದ್ಧ ಕಾಂಗ್ರೆಸ್‌ ಪಂಜಿನ ಮೆರವಣಿಗೆ

KannadaprabhaNewsNetwork |  
Published : Oct 31, 2026, 01:45 AM IST
29ಎಚ್ಎಸ್ಎನ್8 :  | Kannada Prabha

ಸಾರಾಂಶ

ಜನರ ವಿಶ್ವಾಸದೊಂದಿಗೆ ಆಯ್ಕೆಯಾದ ಜನಪ್ರತಿನಿಧಿಗಳು ಸಾರ್ವಜನಿಕ ಹಣದ ಬಳಕೆಯಲ್ಲಿ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು. ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ಬಳಕೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ಇರಬಾರದು ಎಂದು ಬನವಾಸೆ ರಂಗಸ್ವಾಮಿ ಒತ್ತಾಯಿಸಿದರು. ಶಾಸಕರ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಅವರು ತಕ್ಷಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರೆಂದು ಸಾಬೀತಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಹಾಸನಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಅವರು ಕಾಮಗಾರಿಯೊಂದರಲ್ಲಿ ಪರ್ಸಂಟೇಜ್‌ ಹಣ ಸ್ವೀಕರಿಸುವ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹಾಸನ ನಗರದ ಎನ್. ಆರ್‌. ವೃತ್ತದ ಬಳಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಯಿತು.ರಾಜ್ಯ ಗ್ಯಾರಂಟಿ ಸಮಿತಿಯ ಹಾಸನ ತಾಲೂಕು ಅಧ್ಯಕ್ಷರು ಹಾಗೂ ಹಾಸನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಶಾಸಕರ ವಿರುದ್ಧ ವಿವಿಧ ಆರೋಪಗಳನ್ನು ಹೊರಿಸಲಾಯಿತು. ಇದೇ ವೇಳೆ ಬನವಾಸೆ ರಂಗಸ್ವಾಮಿ ಮತ್ತು ವಕೀಲ ದೇವರಾಜೇಗೌಡ ಮಾಧ್ಯಮದೊಂದಿಗೆ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನ ಹಾಗೂ ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ), ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಅನುದಾನದಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಜನರ ವಿಶ್ವಾಸದೊಂದಿಗೆ ಆಯ್ಕೆಯಾದ ಜನಪ್ರತಿನಿಧಿಗಳು ಸಾರ್ವಜನಿಕ ಹಣದ ಬಳಕೆಯಲ್ಲಿ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು. ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ಬಳಕೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ಇರಬಾರದು ಎಂದು ಬನವಾಸೆ ರಂಗಸ್ವಾಮಿ ಒತ್ತಾಯಿಸಿದರು. ಶಾಸಕರ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಅವರು ತಕ್ಷಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರೆಂದು ಸಾಬೀತಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.ಈ ಸಂಬಂಧ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದ ಕಾಂಗ್ರೆಸ್ ಮುಖಂಡರು, ಸಾರ್ವಜನಿಕ ಹಣದ ದುರುಪಯೋಗದ ಆರೋಪಗಳ ಬಗ್ಗೆ ಜನರಿಗೆ ಸತ್ಯಾಂಶ ತಿಳಿಯಬೇಕು ಎಂದು ಹೇಳಿದರು. ಎನ್. ಆರ್‌. ವೃತ್ತದ ಬಳಿ ನಡೆದ ಪಂಜಿನ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಯುವ ಮುಖಂಡರು, ವಿವಿಧ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಆರೋಪಗಳ ಕುರಿತು ತನಿಖೆಗೆ ಆಗ್ರಹಿಸಿದರು.ಇದೇ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿಧರ್, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ರಘು ದಾಸರ ಕೊಪ್ಪಲು, ಲವಾ ಕುಮಾರ್‌, ರಾಮಚಂದ್ರ, ಪ್ರಕಾಶ್ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ
ಪ್ರೀತಿಗೆ ಪೋಷಕರು ವಿರೋಧ: ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ