ಅಂಬೇಡ್ಕರ್ ಸಿದ್ಧಾಂತ ಕಡೆಗಣಿಸಿದ ಕಾಂಗ್ರೆಸ್‌

KannadaprabhaNewsNetwork |  
Published : May 21, 2024, 12:34 AM IST
19ಕೆಬಿಪಿಟಿ.1.ಬಂಗಾರಪೇಟೆ ತಾಲೂಕಿನ ಬೆಂಗನೂರು ಗ್ರಾಮದಲ್ಲಿ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಅಂಬೇಡ್ಕರ್ ಭಾವಚಿತ್ರಕಕ್ಎ ಪುಷ್ಪನಮನ ಸಲ್ಲಿಸುತ್ತಿರುವ ಬಿ.ವಿ.ಮಹೇಶ್. | Kannada Prabha

ಸಾರಾಂಶ

ಸಮಾಜವನ್ನು ನಿರ್ಮಿಸುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ. ಸಮ ಸಮಾಜದ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಹೊತ್ತ ಭಾರತದ ಸಂವಿಧಾನ ಇಂದು ಜಗತ್ತಿನ ಇತರೆ ದೇಶಗಳಿಗೆ ಮಾದರಿಯಾಗಿದೆ

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ದಮನಿತರ ದನಿಯಾಗಿದ್ದ ಡಾ.ಅಂಬೇಡ್ಕರ್ ರಚಿಸಿರುವ ಸಂವಿಧಾನದಿಂದ ಇಂದು ರಾಷ್ಟ್ರಪತಿಯಿಂದ ಹಿಡಿದು ಗ್ರಾಪಂ ಸದಸ್ಯರವರೆಗೂ ಹಲವು ಹಂತಗಳಲ್ಲಿ ಯಶಸ್ವಿಯಾಗಿ ಆಡಳಿತ ನಡೆಯಲು ಕಾರಣವಾಗದೆ ಎಂಬುದನ್ನು ನಾವೆಲ್ಲರೂ ಗಮನದಲ್ಲಿಟ್ಟುಕೊಳ್ಳಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ ಹೇಳಿದರು.

ತಾಲೂಕಿನ ಕೆಸರನಹಳ್ಳಿ ಗ್ರಾಪಂನ ಬೆಂಗನೂರು ಗ್ರಾಮದಲ್ಲಿ ಭಗವಾನ್ ಬುದ್ಧ, ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ‍್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಸಾಮಾಜಿಕ ನ್ಯಾಯ ಪರಿಕಲ್ಪನೆ

ಸಕಲ ಜೀವಾತ್ಮರಿಗೂ ಲೇಸನೇ ಬಯಸಿದ ೧೨ನೇ ಶತಮಾನದ ಬಸವಾದಿ ಪ್ರಮಥರು ಹೇಳಿದ ಮಾತನ್ನು ಈ ಸಮಾಜದಲ್ಲಿ ಸಾಕಾರಗೊಳಿಸಿ ಸಮಾನತಾ ಸಮಾಜವನ್ನು ನಿರ್ಮಿಸುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ ಹೀಗಾಗಿ ಅವರ ಸಮ ಸಮಾಜದ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಹೊತ್ತ ಭಾರತದ ಸಂವಿಧಾನವನ್ನು ಇಂದು ಜಗತ್ತಿನ sಇತರೆ ದೇಶಗಳಿಗೆ ಮಾದರಿಯಾಗಿ ಸ್ವೀಕರಿಸಿ ಅನುಕರಿಸುತ್ತಿದೆ ಎಂದರು.

ಆದ ಕಾರಣ ಇಂದಿನ ಸಮಾಜದಲ್ಲಿ ಸ್ವಾತಂತ್ರ್ಯ ಸಮಾಮತೆ ಮತ್ತು ಭ್ರಾತೃತ್ವದ ಭಾವನೆಗಳನ್ನು ಎತ್ತಿ ಹಿಡಿದು ಅವುಗಳನ್ನು ಜೀವನದ ತತ್ವಗಳನ್ನಾಗಿ ನಾವೆಲ್ಲರೂ ಅಳವಡಿಸಿಕೊಂಡಲ್ಲಿ ಅವರ ಕಂಡ ನಿಜವಾದ ದೇಶ ಪ್ರೇಮ ಮತ್ತು ಸಂವಿಧಾನದ ಆಶಯಗಳನ್ನು ಸಾಮಾಜಿಕ ಪ್ರಜಾಪ್ರಭುತ್ವ ರಾಷ್ಟ್ರದ ಕನಸನ್ನು ನಾವುಗಳು ನನಸಾಗಿಸಬಹುದು.

ಕಾಂಗ್ರೆಸ್‌ ಅಂಬೇಡ್ಕರ್‌ ವಿರೋಧಿ

ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಗೌರವ ಕಡುವ ಪಕ್ಷ ಇದ್ದರೆ ಅದು ಬಿಜೆಪಿ ಮಾತ್ರ, ಕಾಂಗ್ರೆಸ್ ಸರ್ಕಾರ ಎಂದಿಗೂ ಅಂಬೇಡ್ಕರ್‌ಗೆ ಹಾಗೂ ಅವರ ತತ್ವ ಸಿದ್ಧಾಂತಗಳಿಗೆ ಬೆಲೆ ಕೊಟ್ಟಿಲ್ಲ, ದೇಶಕ್ಕೆ ಶ್ರೇಷ್ಟವಾದ ಸಂವಿಧಾನ ನೀಡಿರುವ ಅಂಬೇಡ್ಕರ್ ರನ್ನೇ ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್ ಎಂದು ಕಾಂಗ್ರೆಸ್ ನಾಯಕರ ಅಂಬೇಡ್ಕರ್ ವಿರೋಧಿ ಧೋರಣೆ ವಿರುದ್ಧ ಕಿಡಿಕಾರಿದರು. ಈ ವೇಳೆ ನಾರಾಯಣಗೌಡ, ಬತ್ತಲಹಳ್ಳಿ ಮಂಜುನಾಥ್, ಗ್ರಾಪಂ ಸದಸ್ಯ ಹೆಚ್.ಆರ್.ಶ್ರೀನಿವಾಸ್,ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಮಧು,ಅಂಬೇಡ್ಕರ್ ಯುವಕರ ಸಂಘದ ಆನಂದ್, ಶಿವು, ಅಭಿಲಾಷ್, ಆಂಜನೇಯಮೂರ್ತಿ ಇತರರಿದ್ದರು.

1

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!