ಕಾಂಗ್ರೆಸ್‌ ಕೀಳು ರಾಜಕೀಯ: ಬಿಜೆಪಿ ಮಹಿಳಾ ಮೋರ್ಚಾ ಆರೋಪ

KannadaprabhaNewsNetwork |  
Published : Jun 26, 2024, 12:42 AM IST
ಕಾಂಗ್ರೆಸ್ಸಿನಿಂದ ಕೀಳು ಮಟ್ಟದ ರಾಜಕಾರಣ - ಬಿಜೆಪಿ ಮಹಿಳಾ ಮೋರ್ಚಾ ಆರೋಪ | Kannada Prabha

ಸಾರಾಂಶ

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನೇ ದೊಡ್ಡ ಅಪರಾಧ ಎನ್ನುವಂತೆ ಪ್ರತಿಬಿಂಬಿಸಿರುವ ಕಾಂಗ್ರೆಸಿಗರು ಪ್ರತಿಕೃತಿ ದಹನದ ವಿಚಾರಕ್ಕೆ ಜಾತಿಯ ಬಣ್ಣ ಬಳಿಯುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿರೋಧ ಪಕ್ಷದ ಜನಪರ ಹೋರಾಟ ದಮನ ಮಾಡುವುದಕ್ಕಾಗಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಸುಳ್ಳು ದೂರು ದಾಖಲಿಸಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಆರೋಪಿಸಿದೆ.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ಪ್ರತಿಭಟನೆ ಸಂದರ್ಭ ಪ್ರತಿಕೃತಿ ದಹಿಸುವುದು ಸಾಮಾನ್ಯ, ಪ್ರತಿಭಟನೆ ಮಾಡಲು ಮತ್ತು ಆಡಳಿತ ಪಕ್ಷದ ದುರಾಡಳಿತ ಖಂಡಿಸಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷಕ್ಕೆ ಸಂಪೂರ್ಣ ಸ್ವಾತಂತ್ರ್ಯವಿದೆ. ಆದರೆ ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನೇ ದೊಡ್ಡ ಅಪರಾಧ ಎನ್ನುವಂತೆ ಪ್ರತಿಬಿಂಬಿಸಿರುವ ಕಾಂಗ್ರೆಸಿಗರು ಪ್ರತಿಕೃತಿ ದಹನದ ವಿಚಾರಕ್ಕೆ ಜಾತಿಯ ಬಣ್ಣ ಬಳಿಯುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸುಳ್ಳು ದೂರು ದಾಖಲಿಸಿ ಬಿಜೆಪಿ ಕಾರ್ಯಕರ್ತರ ಮನೋಸ್ಟೈರ್ಯ ಕುಗ್ಗಿಸಲು ಸಾಧ್ಯವಿಲ್ಲ. ಮುಂದೆಯೂ ಸರ್ಕಾರದ ದುರಾಡಳಿತದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಇದು ಕಾಂಗ್ರೆಸ್ಸಿಗರು ಕ್ಷುಲ್ಲಕ ವಿಚಾರವನ್ನು ಮುಂದಿಟ್ಟುಕೊಂಡು ಸಮಾಜದಲ್ಲಿ ಒಡಕು ಮೂಡಿಸುವ ರಾಜಕಾರಣ ಮಾಡದೆ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಲಿ ಎಂದು ಅವರು ಆಗ್ರಹಿಸಿದರು.

ಮೋರ್ಚಾ ಕಾರ್ಯದರ್ಶಿ ಅಲ್ಲಾರಂಡ ಬೀನಾ ಬೊಳ್ಳಮ್ಮ ಮಾತನಾಡಿ, ವಿರಾಜಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಅದು ಯಾರ ವಿರುದ್ಧವೂ ನಡೆದ ವೈಯಕ್ತಿಕ ಪ್ರತಿಭಟನೆ ಅಲ್ಲ. ಜಾಗೃತ ವಿರೋಧ ಪಕ್ಷವಾಗಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದೆ ಎಂದರು.

ಜಿಲ್ಲಾ ಕಾರ್ಯದರ್ಶಿಗಳಾದ ಕನ್ನಿಕಾ ದಿನೇಶ್, ಉಮಾಪ್ರಭು, ವಿರಾಜಪೇಟೆ ಮಂಡಲದ ಅಧ್ಯಕ್ಷೆ ಕವಿತಾ ಬೋಜಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ