ಪಂಚ ಗ್ಯಾರಂಟಿಯೊಂದಿಗೆ ಕಾಂಗ್ರೆಸ್‌ ಜನರ ಬದುಕಿಗೆ ವರವಾಗಿದೆ: ದೊಡ್ಮನಿ

KannadaprabhaNewsNetwork |  
Published : Apr 24, 2024, 02:25 AM IST
ಫೋಟೋ- 22ಜಿಬಿ22 | Kannada Prabha

ಸಾರಾಂಶ

ರಾಜ್ಯದಲ್ಲಿ 5 ಗ್ಯಾರೆಂಟಿಗಳು ನೀಡಿ ಯಶಸ್ವಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಿಮ್ಮ ಬೆಂಬಲಿಕೆ ನಿಂತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನನ್ನನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು

ಕನ್ನಡಪ್ರಭ ವಾರ್ತೆ ಕಲಬುರಗಿ

ನಗರದ ಗಂಗಾ ನಗರದಲ್ಲಿ ಕಲ್ಬುರ್ಗಿ ಉತ್ತರ ಮತ್ತು ದಕ್ಷಿಣ ಮತಕ್ಷೇತ್ರದ ವಾರ್ಡ್ ನಂ.26ರ ಲೋಕಸಭಾ ಚುನಾವಣಾ ಕಾಂಗ್ರೆಸ್ ಪ್ರಚಾರ ಕಚೇರಿ ಸೋಮವಾರ ಉದ್ಘಾಟಿಸಲಾಯಿತು.

ಕಚೇರಿ ಉದ್ಘಾಟಿಸಿದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಮಾತನಾಡಿ, ರಾಜ್ಯದಲ್ಲಿ 5 ಗ್ಯಾರೆಂಟಿಗಳು ನೀಡಿ ಯಶಸ್ವಿ ಸರ್ಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ನಿಮ್ಮ ಬೆಂಬಲಿಕೆ ನಿಂತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನನ್ನನ್ನು ಪ್ರಚಂಡ ಬಹುಮತದಿಂದ ಆರಿಸಿ ತರಬೇಕು ಎಂದರು.

ಮಾಜಿ ಸಚಿವ ಮಾಲೀಕಯ್ಯ ಮಾತನಾಡಿ, ಮರಳಿ ನಾನು ಕಾಂಗ್ರೆಸ್ ಮನೆಗೆ ಬಂದಿದ್ದೇನೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇತ್ತು ಕಾಂಗ್ರೆಸ್ ಪಕ್ಷದಿಂದ ನಾನು ನಾಲ್ಕು ಬಾರಿ ಶಾಸಕನಾಗಿ ಸಚಿವನಾಗಿ ನಿಮ್ಮ ಸೇವೆ ಮಾಡಿರುವೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ನೀವು ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರಿಗೆ 1.50 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ತರಬೇಕೆಂದು ಕರೆ ನೀಡಿದರು.

ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಕಾಂಗ್ರೆಸ್ ಉತ್ತರ ಮತ್ತು ದಕ್ಷಿಣ ಪ್ರಚಾರ ಕಚೇರಿ ಮೊಟ್ಟಮೊದಲ ಬಾರಿಗೆ ಕಲ್ಬುರ್ಗಿಯ ಗಂಗಾನಗರದಲ್ಲಿ ಸ್ಥಾಪನೆಯಾಗಿದೆ. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದಿರುವುದರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಮಾಲಿಕಯ್ಯ ಅವರ ಮಾರ್ಗದರ್ಶನದಲ್ಲಿ ಕಲ್ಬುರ್ಗಿಯ ಉತ್ತರ ಮತ್ತು ದಕ್ಷಿಣ ಮತಕ್ಷೇತ್ರ ಹೊಂದಿರುವ ಗಂಗಾನಗರ, ಮಾಣಿಕೇಶ್ವರಿ ಕಾಲೋನಿ, ರಾಘವೇಂದ್ರ ಕಾಲೋನಿ, ನ್ಯೂ ರಾಘವೇಂದ್ರ ಕಾಲೋನಿ, ಚೌಡೇಶ್ವರಿ ಕಾಲೋನಿಗಳ ನಿವಾಸಿಗಳು ಕಾಂಗ್ರೆಸ್ ಅಭ್ಯರ್ಥಿಯಾದ ರಾಧಾಕೃಷ್ಣ ಅವರಿಗೆ ಪ್ರಚಂಡ ಬಹುಮತದಿಂದ ಆರಿಸಿ ತರಬೇಕೆಂದು ಮನವಿ ಮಾಡಿದರು.

ವಿವಿಧ ಪಕ್ಷಗಳು ತೊರೆದು ಕಾಂಗ್ರೆಸ್ ಸೇರ್ಪಡೆ: ಸೇಡಂ ಮತಕ್ಷೇತ್ರದ ವಿವಿಧ ಗ್ರಾಮಗಳ ಮತ್ತು ಕಲ್ಬುರ್ಗಿ ನಗರದ ಗಂಗಾ ನಗರ, ಮಾಣಿಕೇಶ್ವರಿ ಕಾಲೋನಿ, ಚೌಡೇಶ್ವರಿ ಕಾಲೋನಿ, ರಾಘವೇಂದ್ರ ಕಾಲೋನಿ, ನ್ಯೂ ರಾಘವೇಂದ್ರ ಕಾಲೋನಿ ಸೇರಿದಂತೆ ವಿವಿಧ ಬಡಾವಣೆಗಳ ಕೋಲಿ ಸಮಾಜದ ಮುಖಂಡರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್, ನಗರಸಭೆ ಸದಸ್ಯರಾದ ಅನುಪಮ ರಮೇಶ ಕಮಕನೂರ, ಮುಖಂಡರಾದ ರಾಜಗೋಪಾಲ್ ರೆಡ್ಡಿ , ಸಂದೇಶ ಕಮಕನೂರ, ಪ್ರಕಾಶ ಕಮಕನೂರ, ವಿಜಯಕುಮಾರ್ ಹದಗಲ್, ನಿಂಗರಾಜ ಕಣ್ಣಿ ಸೇರಿದಂತೆ ವಿವಿಧ ಮುಖಂಡರು ಮತ್ತು ಕೋಲಿ ಸಮಾಜದ ಅಭಿಮಾನಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ